ಉಡುಪಿ:ಎಸ್ಸೆಸ್ಸೆಲ್ಸಿ ಪರೀಕ್ಷೆ ಬೇಕಾ? ಬೇಡ್ವಾ? ಎಂಬಿತ್ಯಾದಿ ಗೊಂದಲಗಳಿದ್ದು, ಇದರ ನಡುವೆ ತಮಿಳುನಾಡು ಮತ್ತು ಪಾಂಡಿಚೇರಿ ಸರ್ಕಾರಗಳು ಪರೀಕ್ಷೆಯನ್ನು ರದ್ದು ಮಾಡಿವೆ. ರಾಜ್ಯದಲ್ಲೂ ಈ ಬಗ್ಗೆ ಕೂಗು ಕೇಳಿ ಬರುತ್ತಿವೆ. ಈ ಬಗ್ಗೆ ಮಾತನಾಡಿರುವ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್ ಪರೀಕ್ಷೆ ನಡೆಸುವುದಾಗಿ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು​ ಮಾರ್ಚ್ 27ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಬೇಕಿತ್ತು. ಆದರೆ, ಜನತಾ ಕರ್ಫ್ಯೂನಿಂದ ಮುಂದೂಡಲ್ಪಟ್ಟಿತ್ತು. ದ್ವಿತೀಯ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ಮಾತ್ರ ಬಾಕಿ ಇತ್ತು. ಅದು ಕೂಡ ಲಾಕ್​ಡೌನ್​ ಕಾರಣದಿಂದಾಗಿ ಮುಂದೂಡಲಾಗಿತ್ತು. ಇದೀಗ ಪರೀಕ್ಷೆ ನಡೆಸಲು ಕೇಂದ್ರ ಗೃಹ ಇಲಾಖೆ ಅನುಮತಿ ಕೊಟ್ಟಿದೆ. ಕೇಂದ್ರೀಯ ಪಠ್ಯಕ್ರಮದ ಪರೀಕ್ಷೆಗಳಿಗೆ ದಿನಾಂಕವೂ ಘೋಷಣೆಯಾಗಿದೆ. ಜೂನ್ 25ರಿಂದ ಪರೀಕ್ಷೆ ಮಾಡಲು ಶಿಕ್ಷಣ ತಜ್ಞರ ಜತೆ ಚರ್ಚಿಸಿ ನಿರ್ಧರಿಸಿದ್ದೇವೆ ಎಂದು ತಿಳಿಸಿದರು.ಇದನ್ನೂ ಓದಿ:PHOTO GALLERY| ಕಿರುತೆರೆಯ ರೌಡಿ ಬೇಬಿಗೆ ಬರ್ತಡೇ ಸಂಭ್ರಮ: ನಿಶಾರ ನಶೆ ಏರಿಸೋ ಫೋಟೋಗಳಿವು!
ಪರೀಕ್ಷೆ ರದ್ದು ಕೋರಿ ಕೆಲವರು ಉಚ್ಛ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ನ್ಯಾಯಾಲಯ ಎರಡು ಕಡೆಯ ವಾದವನ್ನು ಆಲಿಸಿ ಪರೀಕ್ಷೆ ನಡೆಸಲು ಹಸಿರು ನಿಶಾನೆ ತೋರಿದೆ. ಸರ್ಕಾರದ ಮುನ್ನೆಚ್ಚರಿಕಾ ಕ್ರಮವನ್ನು ನ್ಯಾಯಾಧೀಶರು ಕೇಳಿದ್ದಾರೆ. ಅದನ್ನು ಬಹಳ ವಿವರವಾಗಿ ನೀಡಿದ್ದೇವೆ ಎಂದರು.
ಪರೀಕ್ಷೆಯಲ್ಲಿ ಎರಡು ವಿಚಾರಗಳು ಹೆಚ್ಚು ಒತ್ತು ಕೊಡುತ್ತಿದ್ದೇವೆ. ಮೊದಲನೆಯದು ಮಕ್ಕಳ ಸುರಕ್ಷತೆ ಬಗ್ಗೆ ಹಾಗೂ ಎರಡನೆಯದು ಮಕ್ಕಳ ಆತ್ಮವಿಶ್ವಾಸ ಕುರಿತು. ಕೊಠಡಿಗಳ ಸಂಖ್ಯೆ ಜಾಸ್ತಿ ಮಾಡಲು ನ್ಯಾಯಮೂರ್ತಿಗಳು ಸಲಹೆ ನೀಡಿದ್ದಾರೆ. ಪ್ರತಿ ಮಕ್ಕಳ ನಡುವೆ ಮೂರು ಅಡಿ ಹಾಗೂ ಪ್ರತಿ ಡೆಸ್ಕ್​ಗಳ ನಡುವೆ ಎರಡು ಅಡಿ ಅಂತರವಿರಬೇಕು. ಎಲ್ಲಾ ಮಕ್ಕಳು ಮಾಸ್ಕ್​ ಹಾಕಿಕೊಂಡು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಖಾಸಗಿ ಸಂಸ್ಥೆಗಳು ಮಾಸ್ಕ್ ನೀಡಲು ಮುಂದೆ ಬಂದಿವೆ. ಪ್ರತಿ ಮಗುವಿಗೆ ತಲಾ ಎರಡು ಮಾಸ್ಕ್ ಕೊಡುವ ವ್ಯವಸ್ಥೆ ಮಾಡಿದ್ದೇವೆಂದು ತಿಳಿಸಿದರು.ಇದನ್ನೂ ಓದಿ:ಇಲ್ನೋಡಿ, ಒಂದೇ ಕುಟುಂಬದ 15 ಜನರಿಗೂ ವಕ್ಕರಿಸಿದೆ ಕರೊನಾ ಹೆಮ್ಮಾರಿ!
ಸರಕಾರದಿಂದಲೇ ಬಸ್ ವ್ಯವಸ್ಥೆ ಮಾಡಲಾಗುವುದು. ಮಕ್ಕಳನ್ನು ಪರೀಕ್ಷಿಸಿ ಸಿದ್ಧಪಡಿಸಲು ಟಿವಿ ಚಾನಲ್ ಕಾರ್ಯಕ್ರಮಗಳ ಮೂಲಕ ಕ್ರಮ ಕೈಗೊಳ್ಳಲಾಗುವುದು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ನಾವೆಲ್ಲರೂ ಜತೆಯಾಗಿ ಕೆಲಸ ಮಾಡಬೇಕಿದೆ ಎಂದು ಶಿಕ್ಷಣ ಸಚಿವರು ಮನವಿ ಮಾಡಿದರು.
ಯಾವುದಾದರೂ ಪರೀಕ್ಷಾ ಕೇಂದ್ರ ಕಂಟೈನ್ಮೆಂಟ್ ಝೋನ್ ಆದರೆ ಮರು ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು. ಆ ಸಮಯದಲ್ಲಿ ಅವರಿಗೆ ಫ್ರೆಶ್ ಹಾಲ್ ಟಿಕೆಟ್ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.(ದಿಗ್ವಿಜಯ ನ್ಯೂಸ್​)
ಗಿಟಾರ್​ನ ಹಿಮ್ಮೇಳದಲ್ಲಿ ತಮ್ಮದೇ ಧಾಟಿಯಲ್ಲಿ ಹಾಡುವ ಗಿಳಿಗಳು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
