ಬೆಂಗಳೂರು: ವಿದ್ಯಾರ್ಥಿಗಳ ಹಿತಕ್ಕಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಸೂಕ್ತವೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್​ಕುಮಾರ್ ಪ್ರತಿಪಾದಿಸಿದ್ದಾರೆ.
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್ ಮಂಗಳವಾರ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರಾಥಮಿಕ ಶಿಕ್ಷಣ ಸಚಿವರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಸೂಕ್ತ ಎಂದರು. ನಮ್ಮ ಸರ್ಕಾರ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು. ಪಂಜಾಬ್ ಸೇರಿ ಹಲವು ರಾಜ್ಯಗಳ ಶಿಕ್ಷಣ ಸಚಿವರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪ್ರಾಮುಖ್ಯತೆ ಬಗ್ಗೆ ವಿವರಿಸಿದರು. ರಾಜ್ಯದಲ್ಲಿಯೂ ವಿದ್ಯಾರ್ಥಿಗಳ ಹಿತಕ್ಕಾಗಿ ಪರೀಕ್ಷೆ ನಡೆಸುವುದು ಸೂಕ್ತ ಎಂಬ ಅಂಶವನ್ನು ಪ್ರತಿಪಾದಿಸಿದರು.
ಬಿಸಿಯೂಟ ಸಿಬ್ಬಂದಿ ಗೌರವಧನ ಹೆಚ್ಚಿಸಿ:ಮಧ್ಯಾಹ್ನ ಉಪಹಾರ ಯೋಜನೆಯಲ್ಲಿ ಕೆಲಸ ಮಾಡುವ ಅಡುಗೆ ಸಹಾಯಕರು ಕನಿಷ್ಠ ಸಂಭಾವನೆಯಲ್ಲಿ ದುಡಿಯುತ್ತಿರುವುದರಿಂದ ಕೇಂದ್ರದ ಪಾಲನ್ನು ಹೆಚ್ಚಿಸಬೇಕೆಂದು ಸುರೇಶ್​ಕುಮಾರ್ ಮನವಿ ಮಾಡಿದರು. ದ್ದಾರೆ. ಕೇಂದ್ರವು ಮೊದಲಿನಿಂದಲೂ ಕೇವಲ 600 ರೂ. ಮಾತ್ರ ನೀಡುತ್ತಿದೆ. ಇದನ್ನು ಹೆಚ್ಚಿಸುವಂತೆ ಕೋರಿದರು.
ಇಂದಿರಾ ಕ್ಯಾಂಟೀನ್ ಊಟ ಖದೀಮರ ಪಾಲು: ಸುಳ್ಳು ಲೆಕ್ಕ ಕೊಟ್ಟು ಸಿಕ್ಕಿ ಬಿದ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − four =
Remember me
