ಬೆಂಗಳೂರು: ಜೂ. 25ರಿಂದ ನಡೆಸಲು ಉದ್ದೇಶಿಸಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ರಾಜ್ಯದಲ್ಲಿ ದಿನದಿನಕ್ಕೂ ಕರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಸಂದರ್ಭದಲ್ಲಿ 8 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಎಂದು ಲೋಕೇಶ್ ಮತ್ತು ಇತರ ಮೂವರು ಅರ್ಜಿದಾರರು ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ವಾದಿಸಿದ್ದಾರೆ.
ಇದನ್ನೂ ಓದಿಈ ಪರಿ ಗದ್ದಲ-ಗೊಂದಲದ ನಡುವೆಯೂ ಲಂಚದತ್ತ ಕೆಎಸ್‌ಆರ್‌ಟಿಸಿ ಅಧಿಕಾರಿ ಗಮನ!
ಇದರಿಂದ ಮಕ್ಕಳು, ಶಿಕ್ಷಕರು, ಸಿಬ್ಬಂದಿ ಮತ್ತವರ ಕುಟುಂಬ ವರ್ಗಕ್ಕೂ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದುಪಡಿಸಿ ಶೈಕ್ಷಣಿಕ ಸಾಲಿನ ಹಿಂದಿನ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗಳಿಗೆ ಬಡ್ತಿ ನೀಡಲು ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.
ಹಳ್ಳಿಗಳಿಗೆ ಹಿಂದಿರುಗಿದವರಿಗೆ ಕೆಲಸ ಕೊಡಿ: ಅಧಿಕಾರಿಗಳಿಗೆ ಬಿಎಸ್‌ವೈ ತಾಕೀತು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen + sixteen =
Remember me
