ಬೆಂಗಳೂರು ಗ್ರಾಮಾಂತರ: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಸಾವಿಗೆ ಶಿಕ್ಷಕಿ ಮತ್ತು ಆಕೆಯ ಪುತ್ರನೇ ಕಾರಣ ಎಂದು ಆರೋಪಿಸಿ ಬಾಲಕಿಯ ಪಾಲಕರು ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಹೊಸಕೋಟೆ ನಗರದ ಪಾರ್ವತಿಪುರ ನಿವಾಸಿ ಸಾರಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಖಾಸಗಿ ಶಾಲೆಯಲ್ಲಿ ಎಸ್​ಎಸ್​ಎಲ್​ಸಿ ವ್ಯಾಸಂಗ ಮಾಡುತ್ತಿದ್ದ ಈಕೆ, ವಾರದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ತಮ್ಮ ಮಗಳ ಸಾವಿಗೆ ಶಿಕ್ಷಕಿ ಮತ್ತು ಆಕೆಯ ಪುತ್ರನೇ ಕಾರಣ ಎಂದು ಪಾಲಕರು ಆರೋಪಿಸಿದ್ದಾರೆ.
ಇದನ್ನೂ ಓದಿ:ಸ್ಲೀಪ್ ಡೈವೋರ್ಸ್: ಇದು ಗಂಡ-ಹೆಂಡಿರ ಹೊಸ ಟ್ರೆಂಡ್!
ಮಗಳು ಆತ್ಮಹತ್ಯೆ ಮಾಡಿಕೊಂಡ ಒಂದು ವಾರದ ನಂತರ ಶಿಕ್ಷಕಿ ವಿರುದ್ಧ ಹೊಸಕೋಟೆ ಪೊಲೀಸರಿಗೆ ದೂರು ನೀಡಲಾಗಿದ್ದು, ಮಗಳ ಸಾವಿಗೆ ಶಿಕ್ಷಕಿ ಮತ್ತು ಆಕೆಯ ಪುತ್ರನೇ ಕಾರಣ ಎಂದು ಆರೋಪಿಸಲಾಗಿದೆ. ಆತ ಪ್ರಪೋಸ್ ಮಾಡಿದ್ದನ್ನು ನಿರಾಕರಿಸಿದ್ದಕ್ಕೆ ನೀಡುತ್ತಿದ್ದ ಕಿರುಕುಳ ಸಹಿಸಲಾಗದೆ ವಿದ್ಯಾರ್ಥಿನಿ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಸಾರಾ ಆತ್ಮಹತ್ಯೆ ಬಳಿಕ ತಮ್ಮ ಪುತ್ರನ ವಿಚಾರ ಎಲ್ಲೂ ಹೇಳಬಾರದು ಎಂದು ಶಿಕ್ಷಕಿ ಶಾಲಾ ಮಕ್ಕಳಿಗೆ ತಾಕೀತು ಮಾಡಿದ್ದರು ಎಂದೂ ಹೇಳಲಾಗುತ್ತಿದೆ.
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
ಸಾರಾ ಆತ್ಮಹತ್ಯೆ ಮಾಡಿಕೊಂಡ ಕೆಲವು ದಿನಗಳ ಬಳಿಕ ಸಹಪಾಠಿಗಳು ಆಕೆಯ ಪಾಲಕರಿಗೆ ಈ ವಿಷಯವನ್ನೆಲ್ಲ ತಿಳಿಸಿದ್ದರಿಂದ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಆ ಮೇರೆಗೆ ಹೊಸಕೋಟೆ ಪೊಲೀಸರು ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗಳ ಸಾವಿಗೆ ಸಂಬಂಧಿಸಿದಂತೆ ನ್ಯಾಯ ದೊರಕಿಸಿಕೊಡಬೇಕು ಎಂದು ಪಾಲಕರು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮಕ್ಕಳಿಬ್ಬರ ಪ್ರಾಣ ಉಳಿಸಿ ಸಾವಿಗೀಡಾದ ತಾಯಿ!; ಆಗಿದ್ದೇನು?

ನಮ್ಮೂರಲ್ಲಿ ಸರ್ಕಾರಿ ವೈದ್ಯರೇ ಉಳಿಯಲ್ಲ.. ನೋಡಿ ಎಂಥ ಪರಿಸ್ಥಿತಿ!: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
