​ಬೆಂಗಳೂರುರಾಜ್ಯ ಸರ್ಕಾರವು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದಲೂ ವಸೂಲಿಗಿಳಿದಿದೆ ಎಂಬ ರಾಜಕೀಯ ವಲಯದಲ್ಲಿ ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಇದಕ್ಕೆ ಸ್ಪಷ್ಟನೆ ನೀಡಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಕಳೆದ ವರ್ಷದಿಂದಲೇ ರಾಜ್ಯ ಮಟ್ಟದ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ 50 ರೂ. ಶುಲ್ಕ ಪಡೆಯಲಾಗುತ್ತಿದೆ. ಇದು ಈ ಬಾರಿಯ ಹೊಸ ನಿಯಮವಲ್ಲವೆಂದು ಸ್ಪಷ್ಟನೆ ನೀಡಿದೆ.
2023-24ನೇ ಸಾಲಿನ ರಾಜ್ಯ ಪಠ್ಯಕ್ರಮದಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ೆ.26ರಿಂದ ಪೂರ್ವ ಸಿದ್ಧತಾ ಪರೀಕ್ಷೆ ನಡೆಸುವುದಾಗಿ ವೇಳಾಪಟ್ಟಿ ಪ್ರಕಟಿಸಲಾಗಿದೆ. ಈ ಪರೀಕ್ಷೆಗೆ ತಗಲುವ ವೆಚ್ಚದ 50 ರೂ.ಗಳನ್ನು ಪ್ರತಿ ವಿದ್ಯಾರ್ಥಿಗಳಿಂದ ಶಾಲಾ ಹಂತದಲ್ಲಿ ಸಂಗ್ರಹಿಸುತ್ತಿರುವ ಬಗ್ಗೆ ಆಕ್ಷೇಪಣೆಗಳು ವ್ಯಕ್ತವಾಗಿರುವುದು ಮಂಡಳಿ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಲಾಗುತ್ತಿದೆ ಎಂದು ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ಕಳೆದ 4 ವರ್ಷಗಳಿಂದಲೂ ಮಂಡಳಿಯೇ ನಡೆಸುತ್ತಿದೆ. ಈ ಸಂಬಂಧ 2022-23ನೇ ಸಾಲಿನ ಪೂರ್ವ ಸಿದ್ದತಾ ಪರೀಕ್ಷೆ ನಡೆಸಲು ತಗಲುವ ವೆಚ್ಚಕ್ಕೆ ಸಂಬಂಧಿಸಿದಂತೆ ಪ್ರತಿ ವಿದ್ಯಾರ್ಥಿಯಿಂದ 50 ರೂ.ಗಳನ್ನು ಸಂಗ್ರಹ ಮಾಡಿ ಪರೀಕ್ಷೆ ನಡೆಸಲು 2023ರ ೆ.17ರಂದೇ ಆದೇಶ ಮಾಡಲಾಗಿದೆ. ಅದೇ ರೀತಿ ಈ ಸಾಲಿನಲ್ಲಿಯೂ ಪ್ರತಿ ವಿದ್ಯಾರ್ಥಿಯಿಂದ 50 ರೂ.ಗಳನ್ನು ಶಾಲಾ ಹಂತದಲ್ಲಿ ಸಂಗ್ರಹಿಸಿ ಪರೀಕ್ಷಾ ವೆಚ್ಚ ಭರಿಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 7 =
Remember me
