ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮೀಪಿಸುತ್ತಿದ್ದು, ಪೂರ್ವ ಸಿದ್ಧತೆ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ವಾಟ್ಸ್ ಆ್ಯಪ್​ನಲ್ಲಿ ಹರಿದಾಡತೊಡಗಿವೆ. ಹೀಗಾಗಿ ಪೂರ್ವಸಿದ್ಧತೆ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದರೆ ಇನ್ನು ನಿಜವಾದ ಪರೀಕ್ಷೆಯ ಪ್ರಶ್ನೆಪತ್ರಿಕೆ ಎಷ್ಟು ಸೇಫ್ ಎಂಬಿತ್ಯಾದಿ ಪ್ರಶ್ನೆಗಳು ವಿದ್ಯಾರ್ಥಿಗಳು ಮತ್ತು ಪಾಲಕರಲ್ಲಿ ಮೂಡಿದೆ.
ವಾಟ್ಸ್ಆ್ಯಪ್​ನಲ್ಲಿ ಹರಿದಾಡಿದ್ದು ನಿಜವಾದ ಪ್ರಶ್ನೆ ಪತ್ರಿಕೆಯೇ ಅಥವಾ ಅಲ್ಲವೇ ಎಂಬುದು ಇನ್ನೂ ದೃಢೀಕರಿಸಲ್ಪಟ್ಟಿಲ್ಲ. ಈ ಬಗ್ಗೆ ದೂರುಗಳು ದಾಖಲಾಗಿವೆ. ಆದರೆ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇದರ ಬಗ್ಗೆ ಗಮನಹರಿಸಿದ್ದು, ಕ್ರಮಗಳನ್ನು ಜರುಗಿಸಿವೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ, ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಇಂದು ಬೆಳಗ್ಗೆ ಏಳು ಗಂಟೆಗೂ ಮೊದಲೇ ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ಟ್ವಿಟರ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಅವರು, ಗೊಂದಲ ಇಲ್ಲದಂತೆ ಪರೀಕ್ಷೆ ನಡೆಸುತ್ತೇವೆ, ಪಾಲಕರು, ವಿದ್ಯಾರ್ಥಿಗಳು ಶಾಂತಚಿತ್ತರಾಗಿ ಪರೀಕ್ಷೆಯತ್ತ ಗಮನಹರಿಸಬೇಕು ಎಂದು ಮನವಿ ಮಾಡಿದ್ದಾರೆ.
SSLC Preparatory ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳ "ಸೋರುವಿಕೆ" ಕುರಿತು ನನ್ನ ಈ ಸ್ಪಷ್ಟೀಕರಣ.pic.twitter.com/8wQhMpqhLy
— S.Suresh Kumar (@nimmasuresh)February 22, 2020

ಎಸ್​ಎಸ್​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ವಾಟ್ಸ್​ಆ್ಯಪ್​ನಲ್ಲಿ ಲೀಕ್​…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
