ಬೆಂಗಳೂರು:ಜುಲೈನಲ್ಲಿ ಪಿಯುಸಿ, ಆಗಸ್ಟ್​ನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಚಿಕ್ಕಬಳ್ಳಾಪುರದಲ್ಲಿ ಹೇಳಿದ್ದಾರೆ.
ಸದ್ಯ ಫಲಿತಾಂಶ ಪ್ರಕಟ, ಶಾಲೆಗಳ ಪ್ರಾರಂಭದ ಬಗ್ಗೆ ಯೋಚಿಸಲಾಗುವುದು. ಜುಲೈನಲ್ಲಿ ಶಾಲೆ ಆರಂಭಿಸಲಾಗುವುದು ಎಂಬುದು ಸುಳ್ಳು. ಗ್ರಾಮೀಣ ವಿದ್ಯಾರ್ಥಿಗಳಿಗೆ ತಾರತಮ್ಯ ಆಗದ ರೀತಿ ಆನ್​ಲೈನ್ ಶಿಕ್ಷಣ ನೀಡುವ ಸಂಬಂಧ ತಜ್ಞರ ಸಮಿತಿ ವರದಿ ಆಧಾರದಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದರು.
ಈ ನಡುವೆ, ರಾಜ್ಯದಲ್ಲಿ ಕರೊನಾ ಪ್ರಕರಣ ಹೆಚ್ಚಾಗಿರುವ ಮಧ್ಯೆಯೂ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯ ನಾಲ್ಕನೇ ದಿನವಾದ ಸೋಮವಾರ ವಿಜ್ಙಾನ ಮತ್ತು ರಾಜ್ಯಶಾಸ್ತ್ರ, ಸಂಗೀತ ಪರೀಕ್ಷೆಗಳು ನಡೆದಿದ್ದು, ಶೇ.97.93 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಸೋಂಕಿತ ವಿದ್ಯಾರ್ಥಿಯ ಜತೆಗೆ ಪರೀಕ್ಷೆ ಬರೆದಿದ್ದವರಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಾರ ಸುರಕ್ಷತಾ ಕ್ರಮ ಕೈಗೊಂಡು, ಒಂದು ಡೆಸ್ಕ್​ಗೆ ಒಬ್ಬ ವಿದ್ಯಾರ್ಥಿಯಂತೆ ಪರೀಕ್ಷೆ ಬರೆಸಲಾಗಿದೆ. ಪರೀಕ್ಷಾ ಅಕ್ರಮದಲ್ಲಿ ತೊಡಗಿದ್ದ 3 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಎಂದು ಸುರೇಶ್​ಕುಮಾರ್​ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಸೋಂಕಿತರಿಗಿಲ್ಲ ಪರೀಕ್ಷೆ:ಹೋಂ ಕ್ವಾರಂಟೈನ್​ನಲ್ಲಿ ಹಾಗೂ ಕರೊನಾ ಪಾಸಿಟಿವ್ ಎಂದು ಗುರುತಿಸಲ್ಪಟ್ಟ ವಿದ್ಯಾರ್ಥಿಗಳಿಗೆ ಈ ಬಾರಿಯ ಪರೀಕ್ಷೆಯಲ್ಲಿ ಅವಕಾಶ ನೀಡಲ್ಲ. ಉಡುಪಿಯಲ್ಲಿ ತಂದೆಯಿಂದ ಮಗನಿಗೆ ಸೋಂಕು ತಗುಲಿರುವುದರಿಂದ ಆ ವಿದ್ಯಾರ್ಥಿಗೆ ಪರೀಕ್ಷೆ ನಿರಾಕರಿಸಿದ್ದೇವೆ. ಬಾಗಲಕೋಟೆ ನವನಗರದ ಪರೀಕ್ಷಾ ಕೇಂದ್ರದಲ್ಲಿ ಗಣಿತ ಪರೀಕ್ಷೆ ದಿನ ಮೆಲ್ವಿಚಾರಕರೊಬ್ಬರಿಗೆ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ತಕ್ಷಣ ಕೇಂದ್ರಕ್ಕೆ ಸೋಂಕು ನಿವಾರಣ ದ್ರಾವಣ ಸಿಂಪಡಿಸಿ ಅವರ ಜತೆ ಕೆಲಸ ಮಾಡಿದ್ದ ಎಲ್ಲ ಶಿಕ್ಷಕರನ್ನು ಬದಲು ಮಾಡಲಾಗಿದೆ. ಹಾಸನ ಜಿಲ್ಲೆ ಅರಸೀಕರೆಯ ಸೇಂಟ್ ಮೇರಿಸ್ ಹಾಗೂ ಬಾಲಕರ ಪದವಿ ಪೂರ್ವ ಕಾಲೇಜುಗಳಿಗೆ ಸೇರಿದ ಇಬ್ಬರು ವಿದ್ಯಾರ್ಥಿಗಳ ಪಾಲಕರಿಗೆ ಸೋಂಕು ಬಂದಿದ್ದರಿಂದ ಸುರಕ್ಷತಾ ದೃಷ್ಟಿಯಿಂದ ಆ ಕುಟುಂಬದಲ್ಲಿದ್ದ ಮಕ್ಕಳಿಗೆ ಪರೀಕ್ಷೆ ನಿರಾಕರಿಸಿದ್ದೇವೆ. ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕಿನ ಲಕ್ಷಣ ಕಾಣದಿದ್ದರೂ ಸಹ ಸುರಕ್ಷತಾ ಹಿತದೃಷ್ಟಿಯಿಂದ ಈ ಕ್ರಮ ಕೈಗೊಂಡಿದ್ದೇವೆ ಎಂದು ರಾಜ್ಯ ಕರೊನಾ ಸಮಿತಿ ಅಧ್ಯಕ್ಷ ಡಾ.ಸುದರ್ಶನ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು.
ಬದಲಿ ವಿದ್ಯಾರ್ಥಿಗಳು ಪತ್ತೆ:ಧಾರವಾಡ ನಗರದ ಬಾಸೆಲ್ ಮಿಶನ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪುನರಾವರ್ತಿತ ಪರೀಕ್ಷೆಗೆ ಹಾಜರಾಗಿದ್ದ ಇಬ್ಬರು ಬದಲಿ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿ ಹೊರಹಾಕಲಾಗಿದೆ. ತಾಯಿ ತೀರಿಕೊಂಡರೂ ಶಿರಸಿಯಲ್ಲಿ ವಿದ್ಯಾರ್ಥಿಯೊಬ್ಬ ಪರೀಕ್ಷೆ ಬರೆದಿದ್ದಾನೆ. ಬಂಟ್ವಾಳದ ಪಾಣೆಮಂಗಳೂರಿನ ಶಂಭೂರು ಚರ್ಚ್ ಬಳಿ ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಸಾಗಿಸುತ್ತಿದ್ದ ರಿಕ್ಷಾ ಪಲ್ಟಿ. ಗಾಯಗೊಂಡಿದ್ದರಿಂದ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿ.
ವಿದ್ಯಾರ್ಥಿಗಳ ಪರದಾಟ:ಭಾನುವಾರ ಸುರಿದ ಭಾರಿ ಮಳೆಯಿಂದಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಲತವಾಡ- ತಾಳಿಕೋಟೆ ಮಾರ್ಗದ ಮಧ್ಯೆ ಹಳ್ಳ ತುಂಬಿದ್ದರಿಂದ ಸೋಮವಾರ ನಾಗರಬೆಟ್ಟದ ಪರೀಕ್ಷೆ ಕೇಂದ್ರಕ್ಕೆ ತೆರಳುತ್ತಿದ್ದ ಚವನಬಾವಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳನ್ನು ಕೈ ಹಿಡಿದು ಹಳ್ಳ ದಾಟಿಸಲಾಯಿತು.
ಶಾಲೆ- ಕಾಲೇಜು ಜು.31ರ ವರೆಗೂ ಬಂದ್​; ಆನ್​ಲೈನ್​ ಶಿಕ್ಷಣಕ್ಕೆ ಪ್ರೋತ್ಸಾಹ; ಕೇಂದ್ರ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + three =
Remember me
