ಬೆಂಗಳೂರು:2023ನೇ ಸಾಲಿನ ಎಸ್​ಎಸ್​​ಎಲ್​ಸಿ ಪರೀಕ್ಷಾ ಫಲಿತಾಂಶವು ಮೇ 11 ಅಥವಾ 12ರಂದು ಪ್ರಕಟವಾಗುವ ಸಾಧ್ಯತೆಗಳಿವೆ ಎಂದು ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಮೂಲಗಳು ತಿಳಿಸಿವೆ.
ಈ ಮೂಲಕ ರಾಜ್ಯದ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುವ ಮುನ್ನವೇ ಎಸ್​ಎಸ್​​ಎಲ್​ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಗಳಿವೆ. ಮೌಲ್ಯಮಾಪನ ಕಾರ್ಯ ಸಂಪೂರ್ಣ ಮುಗಿದಿದ್ದು, ಮತ್ತೊಮ್ಮೆ ಉತ್ತರ ಪತ್ರಿಕೆಗಳ ಪರಿಶೀಲನೆ ನಡೆಯುತ್ತಿದೆ.
ಇದನ್ನೂ ಓದಿ:ಮಕ್ಕಳ ಪರೀಕ್ಷೆ ಬಗ್ಗೆ ಮೋದಿಗೆ ಕಾಳಜಿ, ಅವರ ಸೂಚನೆಯಂತೆ ರೋಡ್ ಶೋನಲ್ಲಿ‌ ಬದಲಾವಣೆ: ಶೋಭಾ ಕರಂದ್ಲಾಜೆ
ಈ ಬಾರಿ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಮಾ.31ರಿಂದ ಏ.15ರವರೆಗೆ 3,305 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದವು. ಏ.24ರಿಂದ ಮೌಲ್ಯಮಾಪನ ನಡೆದಿದ್ದು, 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಇದೀಗ ಸಂಪೂರ್ಣ ಮೌಲ್ಯಮಾಪನ ಪೂರ್ಣಗೊಂಡಿದೆ. ಮಂಡಳಿಯಲ್ಲಿ ಕೆಲವು ತಾಂತ್ರಿಕ ಕಾರ್ಯಗಳು ನಡೆಯುತ್ತಿವೆ. ಬಳಿಕ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ರೇಣುಕಾಚಾರ್ಯ ಅವರು ಯಡಿಯೂರಪ್ಪನವರ ಬಾಲ ಹಿಡಿದುಕೊಂಡು ಬೆಳೆದವರು: ಡಿಕೆಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 16 =
Remember me
