ಬೆಂಗಳೂರು/ಚಿತ್ರದುರ್ಗ:ರಾಜ್ಯಾದ್ಯಂತ ಶನಿವಾರ ನಡೆದ ಎಸ್ಸೆಸ್ಸೆಲ್ಸಿ ವಿಜ್ಞಾನ ಪರೀಕ್ಷೆ ನಡೆದಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ ನಕಲು ನಡೆಯುತ್ತಿದ್ದರೂ ಕ್ರಮ ಜರುಗಿಸದ ಕರ್ತವ್ಯಲೋಪದ ಆರೋಪದಡಿ ಚಿತ್ರದುರ್ಗ ಜಿಲ್ಲೆಯಲ್ಲಿ ನಾಲ್ವರು ಶಿಕ್ಷಕರನ್ನು ಅಮಾನತು ಹಾಗೂ ಬಾಗಲಕೋಟೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಡಿಬಾರ್ ಮಾಡಲಾಗಿದೆ.
ಚಳ್ಳಕೆರೆ ತಾಲ್ಲೂಕಿನ ಪರಶುರಾಮಪುರ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರದ ಕೊಠಡಿ ಸಂಖ್ಯೆ 16ರಲ್ಲಿ ಮೇಲ್ವಿಚಾರಕರಾಗಿದ್ದ ಪಿ. ಓಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಚಂದ್ರಶೇಖರ್, ಕೊಠಡಿ ಸಂಖ್ಯೆ18 ರಲ್ಲಿದ್ದ ಕೊರ‌್ಲಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಪ್ರಕಾಶ್, ಕೊಠಡಿ ಸಂಖ್ಯೆ 1 ರಲ್ಲಿದ್ದ ಮಂಜರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ರೇವಣ್ಣ ಹಾಗೂ ಗೋಸಿಕೆರೆ ರಾಧಾಕೃಷ್ಣ ಪ್ರೌಢಶಾಲೆ ಶಿಕ್ಷಕ ರಾಘವೇಂದ್ರ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಕ್ರಮ ಜರುಗಿಸದಿರುವುದು ಕಂಡು ಬಂದಿರುವುದರಿಂದ ಅಮಾನತುಗೊಳಿಸಲಾಗಿದೆ ಎಂದು ಡಿಡಿಪಿಐ ಕೆ.ರವಿಶಂಕರ ರೆಡ್ಡಿ ತಿಳಿಸಿದ್ದಾರೆ.
ವಿಜ್ಞಾನ ವಿಷಯದಲ್ಲಿ ಒಟ್ಟು 8,56,750 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 8,41,439 (ಶೇ.98.2) ಹಾಜರಾಗಿದ್ದು, 15,311 ಮಂದಿ ಗೈರು ಹಾಜರಾಗಿದ್ದಾರೆ. ಬಾಗಲಕೋಟೆಯ ಬೀಳಗಿ ಆದರ್ಶ ಶಾಲೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾಹಿತಿ ನೀಡಿದೆ.ಭಾನುವಾರ ಮತ್ತು ಸೋಮವಾರ ಪರೀಕ್ಷೆಗಳಿಲ್ಲ. ಮಂಗಳವಾರ (ಏ.2) ಗಣಿತ ಪರೀಕ್ಷೆ ನಡೆಯಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 3 =
Remember me
