ತುಮಕೂರು:ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆ ತುಮಕೂರು ತಾಲೂಕಿನ ಚಿಕ್ಕತೊಟ್ಟಿಲು ಕೆರೆ ಬಳಿ ನಡೆದಿದೆ.
ಭೀಮಾಶಂಕರ್ (15) ಮೃತಪಟ್ಟ ವಿದ್ಯಾರ್ಥಿ. ಈತ ಯಾದಗಿರಿ ಜಿಲ್ಲೆಯ ಸುರಪುರ ಗ್ರಾಮದ ನಿವಾಸಿ. ತುಮಕೂರು ತಾಲೂಕಿನ ಬೆಳದರ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ. ನಿನ್ನೆ (ಆಗಸ್ಟ್​ 03) ಚಿಕ್ಕತೊಟ್ಟಿಲು ಕೆರೆ ಬಳಿ ನಡೆಯುತ್ತಿದ್ದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದ.
ಇದನ್ನೂ ಓದಿ:ನಿಗಮ ಮಂಡಳಿ ನೇಮಕ ಸುಸೂತ್ರ; 30:70ರ ಅನುಪಾತದಲ್ಲಿ ಶಾಸಕರು, ಕಾರ್ಯಕರ್ತರಿಗೆ ಹಂಚಿಕೆಗೆ ಸೂಚನೆ
ಕ್ರೀಡಾಕೂಟದಲ್ಲಿ ನಡೆದ ರಿಲೇ ಆಟದಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿದ್ದ. ಆದರೆ, ಬಹುಮಾನ ಸ್ವೀಕರಿಸುವ ಮುನ್ನವೇ ಕುಸಿದು ಬಿದ್ದಿದ್ದ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವಷ್ಟರಲ್ಲಿ ಮಾರ್ಗಮಧ್ಯೆ ಪ್ರಾಣಬಿಟ್ಟಿದ್ದಾನೆ. ಸದ್ಯ ಭೀಮಾಶಂಕರ್​ ಮೃತದೇಹ ತುಮಕೂರಿನ ಶ್ರೀದೇವಿ ಆಸ್ಪತ್ರೆಯಲ್ಲಿದೆ. ಇಂದು ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಬಳಿಕ ಮೃತದೇಹ ಪಾಲಕರಿಗೆ ಹಸ್ತಾಂತರ ಆಗಲಿದೆ.
ಘಟನಾ ಸ್ಥಳಕ್ಕೆ ಕೋರಾ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.(ದಿಗ್ವಿಜಯ ನ್ಯೂಸ್​)
ಸ್ವರ್ಗ-ನರಕದ ಪರಿಕಲ್ಪನೆ

ಜಿಎಸ್​ಟಿ ಸಂಗ್ರಹ ದಾಖಲೆ ಪ್ರಮಾಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 5 =
Remember me
