ಬೆಂಗಳೂರು:ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಸಹಪಾಠಿಗಳ ಜತೆ ಕೈಕುಲುಕುವುದು, ಅಪ್ಪಿಕೊಳ್ಳುವುದು, ಎಲ್ಲೆಂದರಲ್ಲಿ ಉಗುಳದಂತೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸೂಚಿಸಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವೇಳೆ ಅನುಸರಿಸಬೇಕಾದ ನಿಯಮಗಳ ಬಗ್ಗೆ ಪರೀಕ್ಷಾ ಮಂಡಳಿ ಕೈಪಿಡಿ ಪ್ರಕಟಿಸಿದೆ.
ನಿಯಮಗಳ ವಿವರಗಳು: ಪ್ರತಿ ವಿದ್ಯಾರ್ಥಿ ಆರೋಗ್ಯ ತಪಾಸಣೆಗೆ ಒಳಪಡಬೇಕಿರುವುದರಿಂದ ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕಿಂತ ಒಂದೂವರೆ ಗಂಟೆ ಮುಂಚಿತವಾಗಿ ಬರಬೇಕು.
ಪರೀಕ್ಷಾ ಕೇಂದ್ರದ ಕುರಿತು ಪಾಲಕರಿಗೆ ಮಾಹಿತಿ:ಪರೀಕ್ಷಾ ಕೇಂದ್ರದಲ್ಲಿ ಸೋಂಕು ನಿವಾರಕಗಳನ್ನು ಸಿಂಪಡಿಸಲಾಗುತ್ತದೆ. ಕಡ್ಡಾಯವಾಗಿ ಸ್ಯಾನಿಟೈಸರ್ ಬಳಸಲಾಗುತ್ತದೆ.
ಆಕಾಶವಾಣಿಯಲ್ಲಿ ಇಂದು ಮಾಹಿತಿ:ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಎಸ್.ಸುರೇಶ್​ಕುಮಾರ್ ಪಾಲಕರು ಹಾಗೂ ಮಕ್ಕಳ ಕುರಿತು ನೀಡಿದ ಸಂದರ್ಶನ ಜೂ. 23ರ ಬೆಳಗ್ಗೆ 7.15ಕ್ಕೆ ರಾಜ್ಯದ ಎಲ್ಲ ಆಕಾಶವಾಣಿ ಕೇಂದ್ರಗಳಿಂದ ಪ್ರಸಾರವಾಗಲಿದೆ. ಇದೇ ದಿನ ಬೆಳಗ್ಗೆ 10ರಿಂದ 10.30ರವರೆಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ. ಸುಮಂಗಲಾ ಪರೀಕ್ಷಾ ಕ್ರಮ ಹಾಗೂ ಮಕ್ಕಳು, ಪಾಲಕರು, ಶಿಕ್ಷಕರು ತೆಗೆದುಕೊಳ್ಳಬೇಕಾದ ಎಚ್ಚರಿಕೆ ಬಗ್ಗೆ ತಿಳಿಸಲಿದ್ದಾರೆ.
8.48 ಲಕ್ಷ ವಿದ್ಯಾರ್ಥಿಗಳಿಂದ ನೋಂದಣಿ:ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು 8,48,203 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 4,48,560 ಹುಡುಗರು, 3,99,643 ಹುಡುಗಿಯರು ಪರೀಕ್ಷೆ ಎದುರಿಸಲಿದ್ದಾರೆ. ಬೆಂಗಳೂರು ವಿಭಾಗದಲ್ಲಿ 1,014 ಪರೀಕ್ಷಾ ಕೇಂದ್ರ ಮತ್ತು 72 ಬ್ಲಾಕ್, ಮೈಸೂರು: 587-42, ಕಲಬುರಗಿ: 541-82, ಬೆಳಗಾವಿ: 737-134 ಸೇರಿ ಒಟ್ಟು 2,879 ಪರೀಕ್ಷಾ ಕೇಂದ್ರ ಹಾಗೂ 330 ಬ್ಲಾಕ್ ತೆರೆಯಲಾಗಿದೆ.
ಚಹಾ ಮಾರುವವನ ಮಗಳ ಆಗಸದೆತ್ತರದ ಸಾಧನೆ; ಮನೆಗೂ ತೆರಳದೆ ದೇಶಸೇವೆಗೆ ಸಜ್ಜು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + five =
Remember me
