ತುಮಕೂರು:ತುರುವೇಕೆರೆ ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಅವರನ್ನು ಗುಬ್ಬಿ ತಾಲೂಕಿನ ಸಿಎಸ್​ಪುರ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಕೈ ನಾಯಕರ ನಿವಾಸದ ಮುಂದೆ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಈ ಪ್ರತಿಭಟನೆಗೆ ನಾನು ಹೋಗುವುದಿಲ್ಲ, ಯಡಿಯೂರಿನಲ್ಲಿ ಮದುವೆ ಇದೆ, ಅಲ್ಲಿಗೆ ಹೋಗುತ್ತೀನಿ ಎಂದು ತಿಳಿಸಿದ್ದ ಎಂ.ಟಿ.ಕೃಷ್ಣಪ್ಪ, ಏಕಾಏಕಿ ಕಾರನ್ನು ಪ್ರತಿಭಟನೆಯತ್ತ ತಿರುಗಿಸಿದ ಕಾರಣ ಅವರನ್ನು ಇದೀಗ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಟ್ಯಾಟೂ ಹಾಕಿಸಿಕೊಂಡ ಕಿಚ್ಚನ ಪುತ್ರಿ; ಸಾನ್ವಿ ಸುದೀಪ್‌, ಏನಿದರ ಅರ್ಥ? ಎಂದ್ರು ಫ್ಯಾನ್ಸ್‌
ಮದುವೆಗೆ ತೆರಳದೆ ಪ್ರತಿಭಟನೆಯತ್ತ ಕಾರು ತಿರುಗಿಸಿದ ಹಿನ್ನೆಲೆ ಶಾಸಕ ಎಂ.ಟಿ. ಕೃಷ್ಣಪ್ಪ ಅವರನ್ನು ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ವಿರೋಧಿಸಿ, ತುಮಕೂರಿನ ಹೆಗ್ಗೆರೆ ಬಳಿಯಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಅವರ ನಿವಾಸದ ಮುಂದೆ ಪ್ರತಿಭಟನೆಗೆ ಕರೆ ಕೊಡಲಾಗಿತ್ತು ಎನ್ನಲಾಗಿದೆ.
ಮಸಾಲೆ ಜಯರಾಮ್ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆಗೆ ಮಾಜಿ ಸಚಿವ ಸೊಗಡು ಶಿವಣ್ಣ, ಶಾಸಕ ಎಂ.ಟಿ ಕೃಷ್ಣಪ್ಪ, ಬಿ ಸುರೇಶ್ ಗೌಡ ಇತರರು ಪಾಲ್ಗೊಂಡಿದ್ದರು.
ಮುಂದಿನ ವರ್ಷ ಈ 4 ಸ್ಟಾರ್​ ಆಟಗಾರರನ್ನು ಕೈಬಿಡಲಿದೆ ಆರ್​ಸಿಬಿ ಫ್ರಾಂಚೈಸಿ! ಫ್ಯಾನ್ಸ್​ ಕಂಗಾಲು

ಇವರಿಬ್ಬರಿಲ್ಲ ಅಂದ್ರೆ IPL​ಗೆ ಕಳೆಯೇ ಇಲ್ಲ! ಮುಂದೆ ಯಾರೂ ಹೀಗೆ ಹುಚ್ಚೆದ್ದು ನೋಡೋದಿಲ್ಲ: ನವಜೋತ್ ಸಿಂಗ್ ಸಿಧು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
