ಬೆಂಗಳೂರು:ಇಂದು ಬೆಳಗ್ಗೆಯಷ್ಟೇ ಡಾ. ಸುಧಾಕರ್, ಸಿದ್ದರಾಮಯ್ಯನವರ ಪರೋಕ್ಷ ಅಥವಾ ಅಪರೋಕ್ಷ ಪಾತ್ರದ ಕಾರಣದಿಂದಲೇ ಕೆಲವರು ರಾಜೀನಾಮೆ ನೀಡಿದ್ದರು ಎಂದು ಟ್ವೀಟ್​ ಮೂಲಕ ಹೇಳಿದ್ದರು. ಇದೀಗ ಅದೇ ಧಾಟಿಯ ಟ್ವೀಟ್​ ಒಂದನ್ನು ಎಸ್​.ಟಿ ಸೋಮಶೇಖರ್​ ಪೋಸ್ಟ್​ ಮಾಡಿದ್ದಾರೆ.
ತಮ್ಮ ಟ್ವೀಟ್​ನಲ್ಲಿ ಎಸ್.ಟಿ ಸೋಮಶೇಖರ್​, “ಮಾನ್ಯ ಸಿದ್ದರಾಮಯ್ಯನವರು ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ಶಾಸಕರಲ್ಲಿ ತೋಡಿಕೊಳ್ಳುತ್ತಿದ್ದ ಅಸಹಾಯಕತೆ, ಕೊಡುತ್ತಿದ್ದ ಆಶ್ವಾಸನೆ ಇದೇ ಎಂಬುದು ಸತ್ಯ.
ಇದನ್ನೂ ಓದಿ:ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣ!: ಸ್ಫೋಟಕ ಹೇಳಿಕೆ ನೀಡಿದ ಸುಧಾಕರ್
ಸಿದ್ದರಾಮಯ್ಯನವರ ಅಸಹಾಯಕತೆ ಸಹ ನಾವು ಪಕ್ಷ ಬಿಡಲು ಒಂದು ಪ್ರೇರಣೆಯಾಯಿತು ಎಂದರೆ ಅದು ತಪ್ಪಾಗಲಾರದು” ಎಂದು ಬರೆದುಕೊಂಡಿದ್ದಾರೆ.
ಮಾನ್ಯ ಸಿದ್ದರಾಮಯ್ಯನವರು ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ಶಾಸಕರಲ್ಲಿ ತೋಡಿಕೊಳ್ಳುತ್ತಿದ್ದ ಅಸಹಾಯಕತೆ, ಕೊಡುತ್ತಿದ್ದ ಆಶ್ವಾಸನೆ ಇದೇ ಎಂಬುದು ಸತ್ಯ.ಸಿದ್ದರಾಮಯ್ಯನವರ ಅಸಹಾಯಕತೆ ಸಹ ನಾವು ಪಕ್ಷ ಬಿಡಲು ಒಂದು ಪ್ರೇರಣೆಯಾಯಿತು ಎಂದರೆ ಅದು ತಪ್ಪಾಗಲಾರದು.— S T Somashekar Gowda (@STSomashekarMLA)May 17, 2023
ಮಾನ್ಯ ಸಿದ್ದರಾಮಯ್ಯನವರು ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ಶಾಸಕರಲ್ಲಿ ತೋಡಿಕೊಳ್ಳುತ್ತಿದ್ದ ಅಸಹಾಯಕತೆ, ಕೊಡುತ್ತಿದ್ದ ಆಶ್ವಾಸನೆ ಇದೇ ಎಂಬುದು ಸತ್ಯ.ಸಿದ್ದರಾಮಯ್ಯನವರ ಅಸಹಾಯಕತೆ ಸಹ ನಾವು ಪಕ್ಷ ಬಿಡಲು ಒಂದು ಪ್ರೇರಣೆಯಾಯಿತು ಎಂದರೆ ಅದು ತಪ್ಪಾಗಲಾರದು.
ಇದೀಗ ಡಿಕೆಶಿ ಹಾಗೂ ಸಿದ್ದರಾಮಯ್ಯ ಸಿಎಂ ಗಾದಿಗಾಗಿ ಪಟ್ಟು ಬಿಡದೇ ಸ್ಪರ್ಧಿಸುತ್ತಿರುವ ಸಂದರ್ಭದಲ್ಲಿ ಈ ರೀತಿಯ ಟ್ವೀಟ್​ಗಳನ್ನು ಬಿಜೆಪಿ ನಾಯಕರು ಹರಿಯ ಬಿಡುತ್ತಿರುವುದು ಅಚ್ಚರಿಯ ನಡೆಯಾಗಿದೆ. ಮೇಲ್ನೋಟಕ್ಕೆ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯರೇ ಕಾರಣವಾದರಾ ಎನ್ನುವ ಪ್ರಶ್ನೆಯನ್ನು ಈ ಟ್ವೀಟ್​ಗಳು ಹುಟ್ಟು ಹಾಕುತ್ತವೆ. ಇದರಿಂದ ಕಾಂಗ್ರೆಸ್​ನ ಸಿಎಂ ಆಯ್ಕೆ ಮೇಲೆ ಪ್ರಭಾವ ಆಗಲಿದೆಯಾ ಎನ್ನುವುದನ್ನು ಕಾದು ನೋಡಬೇಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
