ಬೆಂಗಳೂರು:ಖಿನ್ನತೆಯಿಂದ ಬಳಲುತ್ತಿದ್ದ ಸ್ಟಾಫ್ ನರ್ಸ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುಮಿತ್ರಾ (32 ವರ್ಷ) ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. 32 ವರ್ಷ ವಯಸ್ಸಿನ ಸುಮಿತ್ರಾಗೆ ಇನ್ನು ಮದುವೆಯಾಗಿರಲಿಲ್ಲ. ಈ ವಿಚಾರವಾಗಿ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಕುಟುಂಬಸ್ಥರೊಂದಿಗೆ ವಾಸವಿದ್ದ ಸುಮಿತ್ರಾ ಮುಂಜಾನೆ ಕೆಲಸಕ್ಕೆ ತೆರಳಬೇಕಾದವರು ಎದ್ದಿರಲಿಲ್ಲ. ಕುಟುಂಬಸ್ಥರು‌ ಕೋಣೆಯ ಬಾಗಿಲು ತಟ್ಟಿದರೂ ಸಹ ಬಾಗಿಲು ತೆರೆಯಲಿಲ್ಲ. ಅನುಮಾನಗೊಂಡ ಕುಟುಂಬಸ್ಥರು ಬಾಗಿಲು ಮುರಿದು ನೋಡಿದಾಗ ಸುಮಿತ್ರಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಈ ಹಿನ್ನೆಲೆ ಗಿರಿನಗರ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ‌. ಈ ವೇಳೆ ಸ್ಥಳದಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ. ನನ್ನನ್ನು ಖುಷಿಯಾಗಿ ಕಳುಹಿಸಿಕೊಡಿ ಎಂದು ಬರೆಯಲಾಗಿದೆ. ಇನ್ನೂ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾದ ಸಿದ್ದರಾಮಯ್ಯ

‘ಮಿಸೆಸ್​ ಇಂಡಿಯಾ’ 2022 ಪ್ರಶಸ್ತಿ ಮುಡಿಗೇರಿಸಿಕೊಂಡ ನಿವೇದಿತಾ ಗೌಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 15 =
Remember me
