ಗದಗ:ಏಕಾಏಕಿ ಉಂಟಾದ ಸುಂಟರಗಾಳಿಯಿಂದಾಗಿ ಕಾಂಗ್ರೆಸ್ ಪಕ್ಷದ ಸಮಾವೇಶದ ವೇದಿಕೆ ನೆಲಸಮವಾಗಿದೆ. ಈ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಗಾಳಿಯ ರಭಸಕ್ಕೆ ವೇದಿಕೆ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, ಭಾರೀ ಅನಾಹುತ ತಪ್ಪಿದೆ.
ಸುಂಟರಗಾಳಿಯ ಅಬ್ಬರಕ್ಕೆ ಕುಸಿದು ಬಿದ್ದಿರುವ ವೇದಿಕೆಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ ಪರ ಪ್ರಚಾರ ನಡೆಸಿದ್ದರು. ಸದ್ಯ ಘಟನೆ ಸಿದ್ದರಾಮಯ್ಯ ವೇದಿಕೆಯಿಂದ ನಿರ್ಗಮಿಸಿದ ಬಳಿಕೆ ನಡೆದಿದ್ದು, ಅನಾಹುತವೊಂದು ತಪ್ಪಿದೆ.
ಕುಸಿದು ಬಿದ್ದಿರುವ ವೇದಿಕೆಯಡಿ ಕೆಲ ಕಾಂಗ್ರೆಸ್ ಕಾರ್ಯಕರ್ತರು ಸಿಲುಕಿ ಹಾಕಿಕೊಂಡಿದ್ದಾರೆ. ಈ ವೇಳೆ ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿ ಅಭ್ಯರ್ಥಿ ಸುಜಾತಾ ದೊಡ್ಡಮನಿ ಸೇರಿದಂತೆ ಕಾಂಗ್ರೆಸ್ ನಾಯಕರ ಪರದಾಟ ಪಡುವಂತಾಗಿದೆ.
ವೇದಿಕೆ ಕುಸಿದು ಬೀಳುತ್ತಿದ್ದಂತೆ, ಸ್ಥಳದಲ್ಲಿದ್ದ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ವೇದಿಕೆಯಡಿ ಸಿಲುಕಿಕೊಂಡಿದ್ದವರನ್ನು ರಕ್ಷಿಸಿದ್ದಾರೆ. ಘಟನೆ ಬಗ್ಗೆ ದಿಗ್ವಿಜಯ ನ್ಯೂಸ್​ನೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ ಮಾತನಾಡುತ್ತಾ, ಇದು ‘ಕಾಂಗ್ರೆಸ್ ಸುಂಟರಗಾಳಿ’ ಎಂದು ಹೇಳಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
