ಬೆಂಗಳೂರು:ದ್ವಿತೀಯ ಪಿಯು ಫಲಿತಾಂಶ ಹೊರಬಿದ್ದ ಹಿನ್ನೆಲೆ ಉನ್ನತ ಶಿಕ್ಷಣ ಇಲಾಖೆಯು 2020-21ನೇ ಸಾಲಿನ ಪದವಿ ಕಾಲೇಜುಗಳ ಪ್ರವೇಶಕ್ಕೆ ಹಸಿರು ನಿಶಾನೆ ತೋರಿದೆ.
ಪ್ರವೇಶ ಪಡೆದುಕೊಳ್ಳುವುದಕ್ಕೆ ಪ್ರತ್ಯೇಕ ಮಾರ್ಗಸೂಚಿ ಯನ್ನು ಕಾಲೇಜು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದ್ದು, ಪ್ರವೇಶ ಕೋರಿ ಬರುವ ಯಾವ ವಿದ್ಯಾರ್ಥಿಗೂ ಪ್ರವೇಶ ನಿರಾಕರಣೆ ಮಾಡಬಾರದು. ಕಳೆದ ಸಾಲಿನಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿಯಿಲ್ಲದೇ ಸ್ಥಗಿತಗೊಂಡಿರುವ ಕೋರ್ಸ್​ಗಳ ಮರು ಆರಂಭಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಎಲ್ಲ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದೆ.
ಎಲ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸದ್ಯ ಇರುವ ಬಿಎ, ಬಿಬಿಎಂ, ಬಿಸಿಎ ಮೊದಲಾದ ಕೋರ್ಸ್ ಅಥವಾ ಕಾಂಬಿನೇಷನ್​ಗಳಿಗೆ 15ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದರೆ ಕಡ್ಡಾಯವಾಗಿ ಪ್ರವೇಶ ನೀಡಬಾರದು. 15 ಅಥವಾ ಅದಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಪ್ರವೇಶ ಪಡೆದಲ್ಲಿ, ಕಾಲೇಜಿನಲ್ಲಿ ಲಭ್ಯವಿರುವ ಕೋರ್ಸ್ ಅಥವಾ ಕಾಂಬಿನೇಷನ್ ನೀಡಬೇಕು. ಹೊಸ ಕೋರ್ಸ್ ಅಥವಾ ಕಾಂಬಿನೇಷನ್​ಗೆ ಅವಕಾಶವಿಲ್ಲ. ಹಾಗೆಯೇ ಭಾಷಾ ವಿಷಯಕ್ಕೆ 5ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಪ್ರವೇಶ ಪಡೆದಲ್ಲಿ, ಆ ವಿದ್ಯಾರ್ಥಿಗಳು ಸ್ವಯಂ ಅಧ್ಯಯನ ಮಾಡಬೇಕು. ಈ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಂದರ್ಭದಲ್ಲಿ ಸ್ಪಷ್ಟತೆ ನೀಡಬೇಕು. ಐಚ್ಛಿಕ ಕನ್ನಡ ಒಳಗೊಂಡ ಕಾಂಬಿನೇಷನ್​ಗೆ ಕನಿಷ್ಠ ಮಿತಿ 5 ವಿದ್ಯಾರ್ಥಿ ಎಂದು ನಿಗದಿ ಮಾಡಿ ಇಲಾಖೆ ಆದೇಶ ಹೊರಡಿಸಿದೆ.
ಉಪನ್ಯಾಸಕರಿಗೆ ಕಾರ್ಯಭಾರ: ಉಪನ್ಯಾಸಕರಿಗೆ ನಿಯಮಾನುಸಾರ ಕಾರ್ಯಭಾರ ಹಂಚಿಕೆ ಮಾಡಿದ ನಂತರ 4 ಗಂಟೆಗಳಿಗಿಂತ ಉಳಿಕೆ ಕಾರ್ಯಭಾರವನ್ನು ಲಭ್ಯವಿರುವ ಉಪನ್ಯಾಸಕರಿಂದಲೇ ನಿರ್ವಹಿಸಬೇಕು. ಈ ಉಳಿಕೆ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಬಾರದು. ಪ್ರಾಂಶುಪಾಲರು, ಅಧ್ಯಾಪಕರು ವೈಯಕ್ತಿಕ ಗಮನಹರಿಸಿ, ಪ್ರವೇಶಾತಿ ಹೆಚ್ಚಳಕ್ಕಾಗಿ ನೆರೆಹೊರೆಯ ಪಿಯು ಕಾಲೇಜುಗಳನ್ನು ಸಂರ್ಪಸಿ, ಸಂಬಂಧಿಸಿದ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ದೊರೆಯುವ ಕೋರ್ಸ್ ಅಥವಾ ಕಾಂಬಿನೇಷನ್, ಸೌಲಭ್ಯದ ಬಗ್ಗೆ ಮಾಹಿತಿ ನೀಡಿ, ಪ್ರವೇಶಾತಿ ಹೆಚ್ಚಿಸಬೇಕು. ಲಭ್ಯವಿರುವ ಕೋರ್ಸ್, ಕಾಂಬಿನೇಷನ್, ಶುಲ್ಕ, ಸೌಲಭ್ಯದ ವಿವರವನ್ನು ಕಾಲೇಜಿನ ವೆಬ್​ಸೈಟ್, ಸೂಚನಾ ಫಲಕದಲ್ಲಿ ಪ್ರಕಟಿಸಬೇಕೆಂದು ಇಲಾಖೆ ಆದೇಶಿಸಿದೆ.
ಪರೀಕ್ಷಾ ಶುಲ್ಕದಲ್ಲಿ ಶೇ.50 ರಿಯಾಯಿತಿ
ಬೆಂಗಳೂರು: ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಕೋರ್ಸ್​ನ ಮಧ್ಯಂತರ ಸೆಮಿಸ್ಟರ್​ಗಳ ಪರೀಕ್ಷೆ ಗಳನ್ನು ಕರೊನಾ ಕಾರಣಕ್ಕೆ ರದ್ದು ಮಾಡಿರುವುದರಿಂದ ಮುಂದಿನ ಸೆಮಿಸ್ಟರ್​ಗಳ ಪರೀಕ್ಷಾ ಶುಲ್ಕದಲ್ಲಿ ಶೇ.50 ರಿಯಾಯಿತಿ ನೀಡಲು ಸರ್ಕಾರ ತೀರ್ವನಿಸಿದೆ. ಈ ಸಂಬಂಧ ಸುತೊ್ತೕಲೆಯನ್ನು ಎಲ್ಲ ವಿವಿಗಳಿಗೆ ಕಳುಹಿಸಲು ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸೂಚಿಸಿದ್ದಾರೆ. ಕೆಲ ವಿವಿಗಳು ಈಗಾಗಲೆ ಪರೀಕ್ಷಾ ಶುಲ್ಕವನ್ನು ಸಂಗ್ರಹಿಸಿದ್ದು, ಅದನ್ನು ವಾಪಸ್ ಕೊಡಿಸಿ ಎನ್ನುವ ಮನವಿ ವಿದ್ಯಾರ್ಥಿಗಳಿಂದ ಬಂದಿತ್ತು. ಇದಕ್ಕೆ ಸ್ಪಂದಿಸಿದ ಡಿಸಿಎಂ, ಪರೀಕ್ಷೆ ರದ್ದಾಗಿದ್ದರೂ ಮೌಲ್ಯಮಾಪನ ಪ್ರಕ್ರಿಯೆ ಇರುತ್ತದೆ. ಹೀಗಾಗಿ ಮುಂದಿನ ಸೆಮಿಸ್ಟರ್​ಗಳ ಪರೀಕ್ಷಾ ಶುಲ್ಕದಲ್ಲಿ ಶೇ.50 ರಿಯಾಯಿತಿ ನೀಡಲು ಸೂಚಿಸಲಾಗುವುದು ಎಂದು ತಿಳಿಸಿದ್ದಾರೆ.
ಶಾಲೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ; ಇದು ರೇಪ್​ ಆ್ಯಂಡ್ ಮರ್ಡರ್​ ಎಂದು ಆರೋಪಿಸಿದ ತಾಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − five =
Remember me
