ಬೆಂಗಳೂರು:ಆಟೋ-ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ಘೋಷಿಸಿರುವ 5 ಸಾವಿರ ರೂ. ಸಹಾಯಧನ ಪಡೆಯಲು ಸೇವಾಸಿಂಧು ವೆಬ್​ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಫಲಾನುಭವಿಗಳು ಅರ್ಜಿ ಸಲ್ಲಿಸುವಂತೆ ಸಾರಿಗೆ ಇಲಾಖೆ ಸೂಚಿಸಿದೆ.
ಸಹಾಯಧನಕ್ಕಾಗಿ ಸೇವಾಸಿಂಧು ವೆಬ್​ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸಾರಿಗೆ ಇಲಾಖೆ ಈ ಹಿಂದೆಯೇ ತಿಳಿಸಿತ್ತು. ಆದರೆ, ವೆಬ್​ಪೋರ್ಟಲ್​ನಲ್ಲಿ ಅದಕ್ಕೆ ಪೂರಕ ಅವಕಾಶ ಕಲ್ಪಿಸಿರಲಿಲ್ಲ. ಇದೀಗ ವೆಬ್​ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಲು ಬೇಕಾದ ಲಿಂಕ್ ಅಭಿವೃದ್ಧಿಪಡಿಸಲಾಗಿದೆ. ಫಲಾನುಭವಿಗಳು https://sevasindhu.karnataka.gov.in/  ವೆಬ್​ಪೋರ್ಟಲ್​ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಅದಾದ ನಂತರ ಅರ್ಜಿ ಪರಿಶೀಲಿಸಿ, ಅರ್ಹ ಚಾಲಕರ ಖಾತೆಗೆ ನೇರವಾಗಿ ಹಣ ವರ್ಗಾಯಿಸಲಾಗುವುದು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಕೆ ಸಂದರ್ಭ ಯಾವುದಾದರೂ ಗೊಂದಲಗಳಿದ್ದರೆ, 080-22236698 ಅಥವಾ 9449863214ಗೆ ಕರೆ ಮಾಡುವಂತೆ ಸೂಚಿಸಲಾಗಿದೆ.
ಭಾರತದ ವಿದೇಶ ವಿನಿಮಯ ಮೀಸಲು 1.73 ಶತಕೋಟಿಯಿಂದ 487 ಶತಕೋಟಿ ಡಾಲರ್​ಗೆ ಏರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 1 =
Remember me
