ಬೆಂಗಳೂರು:ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ 2 ಎ ಗೆ ಸೇರ್ಪಡೆ ಮಾಡುವ ಕುರಿತಾಗಿ, ಬಸವ ಮೃತ್ಯುಂಜಯ ಮಹಾಸ್ವಾಮಿಗಳು ಹಾಗೂ ವಚನನಂದಾ ಶ್ರೀಗಳಿಗೆ ದಾಖಲೆಗಳನ್ನು ನೀಡುವಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಪತ್ರ ಬರೆದಿರುವುದಕ್ಕೆ ಸಚಿವರಾದ ಮುರುಗೇಶ್ ನಿರಾಣಿ ಹಾಗೂ ಸಿ.ಸಿ.ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.
ಮಾಚ್೯ 22 ರಂದು (ಸೋಮವಾರ) ಸೂಕ್ತ ಸಾಕ್ಷ್ಯಾಧಾರಗಳನ್ನು ಆಯೋಗಕ್ಕೆ ನೀಡಬೇಕೆಂದು ಕೂಡಲಸಂಗಮ ಮಠದ ಶ್ರೀಗಳು ಹಾಗೂ ಹರಿಹರ ಪೀಠದ ವಚನನಂದಾ ಸ್ವಾಮೀಜಿಗಳಿಗೆ ಪತ್ರ ಬರೆದಿರುವುದು ‘ಸಕಾರಾತ್ಮಕ’ ಬೆಳವಣಿಗೆ ಎಂದು ಬಣ್ಣಿಸಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ಕಾರ್ಯದರ್ಶಿ ಅವರು, ಪತ್ರ ಬರೆದು ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2 ಗೆ ಸೇರ್ಪಡೆ ಮಾಡುವ ಬಗ್ಗೆ ತಮ್ಮಲ್ಲಿ ಯಾವುದೇ ರೀತಿಯ ದಾಖಲೆಗಳು ಇದ್ದರೆ, ಖುದ್ದು ಹಾಜರಾಗಿ ಇಲ್ಲವೇ ಸಂಬಂಧಿಪಟ್ಟವರ ಮೂಲಕ ಮಾಹಿತಿಯನ್ನು ನೀಡಬಹುದು ಎಂದು ಉಭಯ ಶ್ರೀಗಳಿಗೆ ಪತ್ರ ಮೂಲಕ ಮನವಿ ಮಾಡಲಾಗಿದೆ.
ಇದನ್ನೂ ಓದಿ:ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಅಸ್ತಿತ್ವಕ್ಕೆ
ಆಯೋಗವು ಸಮುದಾಯದ ಬೇಡಿಕೆಗೆ ಸ್ಪಂದಿಸಿ ಇಂತಹ ದಿಟ್ಟ ನಿರ್ಧಾರ ತೆಗೆದುಕೊಂಡಿರುವುದು ಸರಿಯಾದ ಕ್ರಮವಾಗಿದೆ. ಖಂಡಿತವಾಗಿಯೂ ನಮಗೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸವನ್ನು ಸಚಿವರುಗಳು ವ್ಯಕ್ತಪಡಿಸಿದ್ದಾರೆ. ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ನಂತರ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ- ಪೊಲೀಸರನ್ನೇ ಯಾಮಾರಿಸಿದ್ದ ಟಿಕ್​ಟಾಕ್​ ಸುಂದರಿ- ಇಲ್ಲಿವೆ ಈಕೆಯ ಕಲರ್​ಫುಲ್​ ವಿಡಿಯೋ…

ಮಧುಬಂಗಾರಪ್ಪ ಜತೆ ಗೀತಾ ಶಿವರಾಜ್​ಕುಮಾರ್​ ಕಾಂಗ್ರೆಸ್​ ಸೇರ್ಪಡೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 5 =
Remember me
