ಬೆಂಗಳೂರು:ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಉಳಿದೆಲ್ಲ ಸೇವೆಗಳೂ ಸ್ಥಗಿತಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
ರೈತಪರ ಸಂಘಟನೆಗಳು ಕರೆ ನೀಡಿರುವ ಬಂದ್​ಗೆ ದಲಿತ, ಕನ್ನಡಪರ, ಕಾರ್ಮಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿರುವ ಜತೆಗೆ ಪ್ರತಿಪಕ್ಷಗಳೂ ಸಂಪೂರ್ಣ ಬೆಂಬಲ ಘೋಷಿಸಿವೆ. ಈ ಕಾರಣದಿಂದ ಬಂದ್​ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.ಇದನ್ನೂ ಓದಿ:ಕರೊನಾ ಬುಲೆಟಿನ್​.. ಇಂದು ನಿನ್ನೆಗಿಂತ ಹೆಚ್ಚು ಸೋಂಕು, ಕಡಿಮೆ ಸಾವು..
ರೈತರು ನಾಳೆ ಬೆಳಗ್ಗೆ 11 ಗಂಟೆಗೆ ಟೌನ್‌ಹಾಲ್‌ನಿಂದ ಕೆ.ಜಿ.ರಸ್ತೆ, ಮೈಸೂರ್​ ಬ್ಯಾಂಕ್ ವೃತ್ತದ ಮಾರ್ಗವಾಗಿ ಫ್ರೀಡಂಪಾರ್ಕ್‌ವರೆಗೆ ಬೃಹತ್​ ಪ್ರತಿಭಟನಾ ಮೆರವಣಿಗೆ ನಡೆಸಲಿವೆ. ನಗರದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸೂಕ್ಷ್ಮಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಕಾವಲು ಏರ್ಪಡಿಸಲಾಗಿದೆ.
ಏನೆಲ್ಲ ಸೇವೆಗಳು ಲಭ್ಯ?ದಿನಪತ್ರಿಕೆ, ಹಾಲು, ಮೆಡಿಕಲ್​, ಆಸ್ಪತ್ರೆ ಸೇವೆಗಳು, ಹೋಟೆಲ್​, ರೈಲು, ವಿಮಾನ, ಮೆಟ್ರೋ, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇವೆಗಳು.
ಏನೆಲ್ಲ ಲಭ್ಯ ಇರುವುದಿಲ್ಲ?ಓಲಾ-ಉಬರ್, ಖಾಸಗಿ ಬಸ್, ಲಾರಿ ಸೇವೆಗಳು, ಅಂಗಡಿ ಮುಂಗಟ್ಟುಗಳು, ಮಾಲ್‌ಗಳು, ಆಟೋ, ಏರ್‌ಪೋರ್ಟ್ ಟ್ಯಾಕ್ಸಿ, ಹಣ್ಣು, ತರಕಾರಿ, ಬೀದಿ ಬದಿ ವ್ಯಾಪಾರಗಳು.
‘ಮತ್ತೊಮ್ಮೆ ಲಾಕ್​ಡೌನ್​ ಹೇರುವ ಅನಿವಾರ್ಯತೆ ಎದುರಾಗುತ್ತಿದೆ…ನಮಗೂ ಬೇರೆ ಆಯ್ಕೆ ಇಲ್ಲ’

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 2 =
Remember me
