ಬೆಂಗಳೂರು:ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಸದ್ಯವೇ ಕೈಗೂಡುವ ಸಾಧ್ಯತೆಗಳಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಕುರಿತು ವ್ಯಕ್ತಪಡಿಸಿದ ಇಂಗಿತ ವಿವಿಧ ವದಂತಿಗಳಿಗೆ ಕಾರಣವಾಗಿದೆ.
ನಿಗಮ-ಮಂಡಳಿಗಳಿಗೆ ದಿಢೀರ್ ನೇಮಕದಂತೆಯೇ ಎಂಟಿಬಿ ನಾಗರಾಜ್, ಆರ್. ಶಂಕರ್ ಮತ್ತು ಮುನಿರತ್ನ ಅವರನ್ನು ಸೇರಿಸಿಕೊಂಡು ಸಚಿವ ಸಂಪುಟ ವಿಸ್ತರಿಸಲಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಕಾರ್ಯಕ್ರಮ ವೊಂದರಲ್ಲಿ ಬುಧವಾರ ಪಾಲ್ಗೊಂಡಿದ್ದ ಬಿಎಸ್​ವೈ, ಇನ್ನೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಿಸುವ ಸ್ಪಷ್ಟ ಇಂಗಿತ ಹೊರ ಹಾಕಿದ್ದಾರೆ. ಹೀಗಾಗಿ ಆಡಳಿತಾರೂಢ ಬಿಜೆಪಿಯಲ್ಲಿ ಅನೂಹ್ಯ ಬೆಳವಣಿಗೆಯಾಗಿದೆ.
ರಾಜ್ಯ ರಾಜಕೀಯದಲ್ಲಿ ಚುರುಕಿನ ಚಟುವಟಿಕೆಗಳು ಗರಿಗೆದರಿ ತರಹೇವಾರಿ ಪುಕಾರು ಎದ್ದು, ರೆಕ್ಕೆಪುಕ್ಕ ಕಟ್ಟಿಕೊಂಡು ಹಾರಾಡ ತೊಡಗಿವೆ.
ಸ್ಪಷ್ಟ ಸಂದೇಶ:ಮೂವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಕೊಟ್ಟ ಮಾತು ಉಳಿಸಿಕೊಂಡ ಸಂದೇಶವನ್ನು ವರಿಷ್ಠರು ಹಾಗೂ ನಂಬಿ ಬಂದವರಿಗೆ ರವಾನಿಸುವುದು ಬಿಎಸ್​ವೈ ಚಿಂತನೆಯಾಗಿದೆ ಎಂದು ಮೂಲಗಳು ಹೇಳಿವೆ.
ಉಪ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಬಿಎಸ್​ವೈ ಸಚಿವ ಸಂಪುಟ ವಿಸ್ತರಿಸುವ ಉತ್ಸುಕತೆ ವ್ಯಕ್ತಪಡಿಸಿದ್ದರು. ಅದೇ ಹುರುಪಿನೊಂದಿಗೆ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ವಿಸ್ತರಣೆ ಅಥವಾ ಪುನರ್ ರಚನೆ ಸೂತ್ರದೊಂದಿಗೆ ಪಟ್ಟಿಯನ್ನೂ ಸಲ್ಲಿಸಿದ್ದರು. ಹಿಂದಿನಂತೆಯೇ ನಡ್ಡಾ ನಂತರ ತಿಳಿಸುವುದಾಗಿ ಹೇಳಿ ಬರಿಗೈಲಿ ವಾಪಸ್ ಕಳುಹಿಸಿದ್ದರು. 3 ತಿಂಗಳ ಅವಧಿಯಲ್ಲಿ 2 ಬಾರಿ ವರಿಷ್ಠರನ್ನು ಭೇಟಿ ಮಾಡಿದರೂ ಪ್ರಯೋಜನವಾಗಿಲ್ಲ.
ಏತನ್ಮಧ್ಯೆ ಸಂಪುಟ ವಿಳಂಬದಿಂದಾಗಿ ಬಿಜೆಪಿ ನಾಯಕರಲ್ಲಿ ಮತ್ತೊಂದು ಸುತ್ತಿನ ಅಸಮಾಧಾನ, ಮುಸುಕಿನ ಗುದ್ದಾಟ ಆರಂಭವಾಗಿದೆ. ಕಾಂಗ್ರೆಸ್, ಜೆಡಿಎಸ್​ನಿಂದ ಬಿಜೆಪಿ ಬಂದು ಸರ್ಕಾರ ರಚಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಶಾಸಕರು ಈಗ ಸಂಪುಟ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಈ ಬೆನ್ನಲ್ಲೇ ಮೂಲ ಹಾಗೂ ‘ವಲಸಿಗರ’ ಗುಂಪಿನ ನಡುವೆ ವಾಕ್ಸಮರವೂ ಹೆಚ್ಚುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
