ಬೆಂಗಳೂರು:ರಾಜ್ಯ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮಾಡುವ ಮುಖೇನ ಟೀಕೆ ಮಾಡಿರುವ ಬಿಜೆಪಿ, 10 ಕೆಜಿ ಅಕ್ಕಿ ಕೊಡಬೇಕಾಗಿದ್ದ ರಾಜ್ಯ ಸರ್ಕಾರ, ಕೇವಲ 170 ರೂ. ನೀಡಿ “ಕೈ” ತೊಳೆದುಕೊಳ್ಳುತ್ತಿದೆ ಎಂದು ಹೇಳಿದೆ.
ಇದನ್ನೂ ಓದಿ:ಎಸ್‌ಇಪಿ ರಚನೆಗೆ ಸದ್ಯದಲ್ಲಿಯೇ ಕ್ರಮ, ಮುಂದಿನ ವರ್ಷ ನೀತಿ ಅನುಷ್ಠಾನಕ್ಕೆ ಸಿದ್ಧತೆ: ಸಚಿವ ಮಧು ಬಂಗಾರಪ್ಪ
“ಈ ಕುರಿತು ಟ್ವೀಟ್​​ ಮಾಡಿರುವ ಬಿಜೆಪಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸರ್ಕಾರವು, ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಸಮಗ್ರವಾಗಿ ಅನುಷ್ಠಾನಗೊಳಿಸಿ, ಪ್ರತಿಯೊಬ್ಬರಿಗೂ ಉಚಿತವಾಗಿ ಅಕ್ಕಿ ದೊರೆಯುವಂತೆ ಮಾಡಿ, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಗೆ ಪುಷ್ಠಿ ನೀಡಿತು. ಆದರೆ, ಆ ಅಕ್ಕಿಯನ್ನು ತಮ್ಮದೆಂದು ಲೇಬಲ್ ಹಚ್ಚಿಕೊಂಡಿದ್ದು ಮಾತ್ರ ಸಿದ್ದರಾಮಯ್ಯ ಅವರ ಸರ್ಕಾರ. ಈ ಚುನಾವಣೆ ಪೂರ್ವದಲ್ಲಿ ಜನತೆಗೆ 10 ಕೆಜಿ ಅಕ್ಕಿ ನೀಡುತ್ತೇವೆಂದು ಕಾಂಗ್ರೆಸ್​​ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿತ್ತು” ಎಂದು ಟ್ವೀಟ್​ನಲ್ಲಿ ತಿಳಿಸಿದೆ.
“ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ರಾಜ್ಯ ಸರ್ಕಾರ 10 ಕೆಜಿ ಅಕ್ಕಿ ಸೇರಿ, ಒಟ್ಟು 15 ಕೆಜಿ ಅಕ್ಕಿ ರಾಜ್ಯದ ಜನತೆಗೆ ತಲುಪಬೇಕಾಗಿತ್ತು. ಆದ್ರೆ, ಈಗ ರಾಜ್ಯದ ಜನತೆಗೆ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಮಾತ್ರ ತಲುಪುತ್ತಿದೆ. 10 ಕೆಜಿ ಅಕ್ಕಿ ನೀಡಬೇಕಾಗಿದ್ದ ರಾಜ್ಯ ಸರ್ಕಾರ, ಕೇವಲ 170 ರೂ. ನೀಡಿ ಕೈ ತೊಳೆದುಕೊಳ್ಳುತ್ತಿದೆ. ಅಂದರೇ, 17ಕ್ಕೆ ಕೆಜಿ ಅಕ್ಕಿ, ಖರೀದಿಸುವ ಸಂದಿಗ್ಧ ಸ್ಥಿತಿ ಫಲಾನುಭವಿಗಳದ್ದಾಗಿದೆ. 17ಕ್ಕೆ ಕೆಜಿ ಅಕ್ಕಿ ಎಲ್ಲಿ ಸಿಗುತ್ತದೆ ಎಂಬುದನ್ನು ಸಿದ್ದರಾಮಯ್ಯ ಸ್ವಲ್ಪ ರಿಸರ್ಚ್ ಮಾಡಿ ತಿಳಿಸಬೇಕು” ಎಂದು ಹೇಳಿದೆ.
ಇದನ್ನೂ ಓದಿ:ವಿಷಯ ತಜ್ಞರ ಸಲಹೆ ಪಡೆದುಕೊಳ್ಳುವುದು ಅಗತ್ಯ; ಸಹಕಾರ ಸಂಘಗಳ ಸಹಾಯಕ ನಿಬಂಧಕ ಮಲ್ಲಯ್ಯ ಸಾಲಗುಂದ ಸಲಹೆ
“ಅನ್ನಭಾಗ್ಯದ ಅಕ್ಕಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂಬ ವರದಿಗಳು ದಿನನಿತ್ಯ ಮಾಧ್ಯಮಗಳಲ್ಲಿ ಬರುತ್ತಿವೆ. ಆದರೇ, ಅಕ್ಕಿ ಕಳ್ಳಸಾಗಾಣಿಕೆಯನ್ನು ತಡೆಯಲು ಎಟಿಎಂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಗಮನಿಸಿದರೇ, ಅನ್ನಭಾಗ್ಯದ ಅಕ್ಕಿಯ ಅಕ್ರಮ ಸಾಗಣೆಯಲ್ಲಿಯೂ ಸಹ ಸರ್ಕಾರ ಕಮಿಷನ್ ಹೊಡೆಯುತ್ತಿದೆ ಎಂಬ ಅನುಮಾನ ದಟ್ಟವಾಗಿದೆ. ಅನ್ನಭಾಗ್ಯ ಯೋಜನೆಯ ಅಕ್ಕಿ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಅನಾವಶ್ಯಕವಾಗಿ ಬೊಬ್ಬೆ ಹೊಡೆದಿದ್ದ ಎಟಿಎಂ ಸರ್ಕಾರ, ರಾಜ್ಯದಲ್ಲಿಯೇ ರೈತರಿಂದ ಅಕ್ಕಿ ಖರೀದಿಸಿ ಎಂದರೇ ಮೀನಾಮೇಷ ಎಣಿಸಿತ್ತು‌” ಎಂದು ಟ್ವೀಟ್​​ ಮೂಲಕ ಲೇವಡಿ ಮಾಡಿದೆ.
“ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸಿದರೇ, ಪ್ರತಿ ಕೆಜಿ ಅಕ್ಕಿಗೆ ಕಮಿಷನ್ ಹೊಡೆಯಬಹುದೆಂಬ ದುರಾಲೋಚನೆ ಸಿದ್ದರಾಮಯ್ಯ ಸರ್ಕಾರದ್ದಾಗಿತ್ತು. ಆದರೇ ಅದಕ್ಕೆ ಅವಕಾಶ ಸಿಗಲಿಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರವನ್ನು ಬಾಯಿಗೆ ಬಂದಂತೆ ರಾಜ್ಯದ ಎಟಿಎಂ ಸರ್ಕಾರ ಟೀಕಿಸುತ್ತಿದೆ” ಎಂದು ಸರಣಿ ಟ್ವೀಟ್​ ಮೂಲಕ ರಾಜ್ಯ ಸರ್ಕಾರವನ್ನು ಬಿಜೆಪಿ ಲೇವಡಿ ಮಾಡಿದೆ.
ಸಮೋಸಾ ಆರ್ಡರ್ ಮಾಡಲು ಹೋಗಿ 1.40 ಲಕ್ಷ ರೂ. ಕಳೆದುಕೊಂಡ ವೈದ್ಯ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
