ಬೆಂಗಳೂರು:ರಾಜ್ಯದಲ್ಲಿ ಅಕ್ಕಿ ವಿಚಾರ ತೀವ್ರ ಗೊಂದಲವನ್ನು ಹುಟ್ಟುಹಾಕಿದ್ದು, ಈ ಕುರಿತು ರಾಜ್ಯ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದೆ.
ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್​ ಮೂಲಕ ಆರೋಪಿಸಿರುವ ರಾಜ್ಯ ಬಿಜೆಪಿ, “ಅಕ್ಕಿಯನ್ನು ಹೊಂದಿಸಲು ‘ಕೈ’ಲಾಗದ ಮುಖ್ಯಮಂತ್ರಿಗಳು, ಎಂದಿನಂತೆ ತಮ್ಮ ತಪ್ಪನ್ನು ಬೇರೆಯವರ ಮೇಲೆ ಹಾಕಿ, ಕೈ ತೊಳೆದುಕೊಳ್ಳುತ್ತಿದ್ದಾರೆ. ಪ್ರಧಾನಿ ಅವರ ಸರ್ಕಾರವು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಪ್ರತಿ ತಿಂಗಳು ಉಚಿತವಾಗಿ 5 ಕೆಜಿ ಅಕ್ಕಿಯನ್ನು ನೀಡುತ್ತಿರುವ ಸತ್ಯವನ್ನು ಬಹಿರಂಗವಾಗಿ ಒಪ್ಪಿಕೊಳ್ಳಲು ಸಿದ್ದರಾಮಯ್ಯ ಅವರ ಎಟಿಎಂ ಸರ್ಕಾರಕ್ಕೆ ಇಷ್ಟು ದಿನ ಬೇಕಾಯಿತು” ಎಂದು ಟ್ವೀಟ್​ ಮಾಡಿದೆ.
ಇದನ್ನೂ ಓದಿ:ಮಣಿಪುರ ಕೋಮು ಸಂಘರ್ಷ, ಪ್ರಧಾನಿ ನರೇಂದ್ರ ಮೋದಿ ಮೌನ ಮುರಿಯಲಿ
“ಸ್ವಾಮಿ ಸ್ವಯಂಘೋಷಿತ ಆರ್ಥಿಕ ತಜ್ಞ ಸಿದ್ದರಾಮಯ್ಯನವರೇ, ರಾಜ್ಯದ ಎಲ್ಲಾ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡುತ್ತೇವೆ ಎಂದು, ನೀವುಗಳೇ ಹೋದಲ್ಲಿ, ಬಂದಲ್ಲಿ ಭಾಷಣ ಮಾಡುತ್ತಿದ್ದಿರಿ. ಈಗಾಗಲೇ ಕೇಂದ್ರ ಸರ್ಕಾರದ ವತಿಯಿಂದ 5 ಕೆಜಿ ದೊರೆಯುತ್ತಿದೆ ಎಂದರೆ ನಿಮ್ಮ ಮಾತಿನ ಪ್ರಕಾರ, ರಾಜ್ಯದ ಜನತೆಗೆ ಕೇಂದ್ರ ಸರ್ಕಾರದ 5 ಹಾಗೂ ರಾಜ್ಯ ಸರ್ಕಾರದ ವತಿಯಿಂದ 10, ಒಟ್ಟು 15 ಕೆಜಿ ಅಕ್ಕಿ ದೊರೆಯಬೇಕು” ಎಂದು ಹೇಳಿದೆ.
“ಆದ್ರೆ, ಈಗ ರಾಜ್ಯ ಸರ್ಕಾರದ ವತಿಯಿಂದ ಕೇವಲ 5 ಕೆಜಿ ಅಕ್ಕಿಯ ಬದಲಿಗೆ, ಪ್ರತಿ ಕೆಜಿಗೆ 34 ರೂಪಾಯಿ ನೀಡುವುದಾಗಿ ಘೋಷಿಸಿದ್ದೀರಿ. ಹಾಗಾದರೆ ಬಾಕಿ 5 ಕೆಜಿ ಅಕ್ಕಿಯ ಕಥೆ ಏನು? 5 ಕೆಜಿಯ ಬಾಬ್ತು + 5 ಕೆಜಿ ಕೇಂದ್ರ ನೀಡುವ ಉಚಿತ ಅಕ್ಕಿ = 15 ಕೆಜಿ ಎಂದು ಜನರಿಗೆ ವಂಚಿಸುತ್ತಿದ್ದಿರಿ. ಜನರನ್ನು ನಂಬಿಸಿ ಮೋಸ ಮಾಡುವುದು, ಕಾಂಗ್ರೆಸ್ ಪಕ್ಷದ ಡಿಎನ್ಎಯಲ್ಲಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೀರಿ” ಎಂದು ಆರೋಪಿಸಿದೆ.
ಇದನ್ನೂ ಓದಿ:80 ವರ್ಷದ ವೃದ್ಧ 60 ವರ್ಷಗಳಿಂದ ನಿದ್ದೆ ಮಾಡಿಲ್ಲ; ವೈದ್ಯರು ಹೇಳಿದ್ದೇನು?….
“ನಿಮ್ಮ ಅಸಮರ್ಥ ಹಾಗೂ ಉಡಾಫೆ ಶೈಲಿಯ ಆಡಳಿತಕ್ಕೆ ಎಲ್ಲಿಯೂ ಸಹ ಅಕ್ಕಿ ದೊರೆತಿಲ್ಲ. ಈ ಕಾರಣಕ್ಕಾಗಿ ಜನತೆಗೆ ಅಕ್ಕಿ ಬದಲು ಹಣ ನೀಡಿ ಎಂದಾಗ, ಹಣವನ್ನು ತಿನ್ನುವುದಕ್ಕೆ ಆಗುತ್ತಾ ಎಂದು ಉದ್ಧಟತನ ಪ್ರದರ್ಶಿಸಿದ್ದಿರಿ, ಈಗ ಕೆಜಿಗೆ 34 ರೂಪಾಯಿ ಎಂದು ಉಲ್ಟಾ ಹೊಡೆದಿದ್ದೀರಿ. ಕೇಂದ್ರದ ಸಬ್ಸಿಡಿ ಇಲ್ಲದೇ, ತಾವು ನಿಗದಿಪಡಿಸಿರುವ ಮೊತ್ತಕ್ಕೆ ಊಟಕ್ಕೆ ಯೋಗ್ಯವಾದ ಅಕ್ಕಿ ಕರ್ನಾಟಕದ ಯಾವ ಗಿರಣಿಯಲ್ಲಿ ಸಿಗುತ್ತದೆ ಎಂಬ ಮಾಹಿತಿಯನ್ನೂ ಸ್ವಲ್ಪ ಜನತೆಗೆ ತಿಳಿಸಿ. ಇಲ್ಲವಾದಲ್ಲಿ ಮಾರುಕಟ್ಟೆಯಲ್ಲಿ ಯಾವ ದರದಲ್ಲಿ ಯೋಗ್ಯ ಅಕ್ಕಿ ದೊರೆಯುತ್ತದೆಯೋ, ಅದೇ ದರವನ್ನು ನೀವು ಜನತೆಗೆ ನೀಡಬೇಕು” ಎಂದು ಟ್ವೀಟ್​​ನಲ್ಲಿ ಹೇಳಿದೆ.
“13 ಬಜೆಟ್ ಮಂಡಿಸಿದ್ದೇನೆ, ಆಡಳಿತದಲ್ಲಿ ಅಪಾರವಾದ ಅನುಭವವಿದೆ ಎಂದು ಬಡಾಯಿ ಕೊಚ್ಚಿಕೊಳ್ಳುವ ನಿಮಗೆ, ಎಫ್‌ಸಿಐಯನ್ನು ಸರ್ಕಾರ ಏಕೆ ಸ್ಥಾಪಿಸಿದೆ, ಅದರ ಧ್ಯೇಯೋದ್ದೇಶಗಳೇನು ಎಂಬುದು ತಿಳಿದಿಲ್ಲವಾದದ್ದು ಅತ್ಯಂತ ದುರದೃಷ್ಟಕರ. ನಿಮ್ಮ ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರವನ್ನು ವಿನಾಕಾರಣ ದೂಷಿಸುವ ನಿಮ್ಮ ಬುದ್ಧಿಗೆ, ಮುಂದಿನ ದಿನಗಳಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಸರಣಿ ಟ್ವೀಟ್​ ಮಾಡುವ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − nineteen =
Remember me
