ಬೆಂಗಳೂರು:ರಾಜ್ಯ ಸರ್ಕಾರ (State Government) ಮತ್ತು ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಸರಣಿ ಟ್ವೀಟ್​​ ಮೂಲಕ ಟೀಕಿಸಿರುವ ಬಿಜೆಪಿ, ಇವರಿಂದ ಹೇಳಿಸಿಕೊಂಡು ಬುದ್ದಿ ಕಲಿಯುವ ಪರಿಸ್ಥಿತಿ ಯಾರಿಗೂ ಬಂದಿಲ್ಲ ಎಂದು ಟ್ವೀಟ್​​ ಮಾಡಿದೆ.
ಇದನ್ನೂ ಓದಿ:ನಿಮಗೊಂದು ಸವಾಲು; ಈ ಚಿತ್ರದಲ್ಲಿರುವ ಆಮೆಯನ್ನು 5 ಸೆಕೆಂಡುಗಳಲ್ಲಿ ಪತ್ತೆ ಮಾಡಿ..
ಬಿಜೆಪಿ (BJP) ಮಾಡಿರುವ ಸರಣಿ ಟ್ವೀಟ್​ ಹೀಗಿದೆ, “ಬಹುಮತ ದೊರೆತರೂ, ಮುಖ್ಯಮಂತ್ರಿ ಸ್ಥಾನಕ್ಕೆ ಹೆಸರನ್ನು ಅಂತಿಮಗೊಳಿಸುವಲ್ಲಿ ಕಾಂಗ್ರೆಸ್​​ ನಡೆಸಿದ ಹಗ್ಗಜಗ್ಗಾಟವನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಇವರಿಂದ ಹೇಳಿಸಿಕೊಂಡು ಬುದ್ದಿ ಕಲಿಯುವ ಪರಿಸ್ಥಿತಿ ಯಾರಿಗೂ ಬಂದಿಲ್ಲ. ಇಷ್ಟಕ್ಕೂ ಹೊಸದಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದ ಸಿದ್ದರಾಮಯ್ಯ 2008 ರಲ್ಲಿ ಅಂದಿನ ವಿಪಕ್ಷ ನಾಯಕನ ಸ್ಥಾನ ಖರ್ಗೆಯವರಿಗೆ ದೊರೆತ ಕಾರಣ, ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು” ಎಂದು ಟ್ವೀಟ್​ ಮಾಡಿದೆ.
“ಆ ಪಕ್ಷದ ಕೆಲವು ಶಾಸಕರು ರಾಜೀನಾಮೆ ನೀಡಿದಾಗಲೂ, ಆ ಶಾಸಕರ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು. ಕಾರ್ಯಕ್ರಮವೊಂದರ ನಿಮಿತ್ತ ಅಂದಿನ ಮುಖ್ಯಮಂತ್ರಿ ಬಿ.ಎಸ್​​​.ಯಡಿಯೂರಪ್ಪನವರ ಜೊತೆ ಸಿದ್ದರಾಮಯ್ಯರವರು ಒಟ್ಟಿಗೆ ಪ್ರಯಾಣಿಸಿದ್ದರು. ಆ ಸಂಧರ್ಭವನ್ನು ತಮಗೆ ಲಾಭವಾಗುವ ಹಾಗೆ ಸುದ್ದಿ ಹಬ್ಬಿಸಿ ಕಾಂಗ್ರೆಸ್ ಹೈಕಮಾಂಡ್‌ಗೆ ಬೆದರಿಸಿದ್ದರು. ಬೆದರಿಕೆಗೆ ಬಗ್ಗಿದ ಹೈಕಮಾಂಡ್ ಒಲ್ಲದ ಮನಸ್ಸಿನಿಂದಲೇ ಸಿದ್ದರಾಮಯ್ಯರಿಗೆ ವಿಪಕ್ಷ ನಾಯಕ ಸ್ಥಾನ ನೀಡಿತ್ತು” ಎಂದು ಟ್ವೀಟ್​​ನಲ್ಲಿ ಹೇಳಿದೆ.
ಇದನ್ನೂ ಓದಿ:ಜಿಲ್ಲಾ ಆಸ್ಪತ್ರೆಯ ನವಜಾತ ಶಿಶು ಕೇಂದ್ರದಲ್ಲಿ ಎಸಿ ಸ್ಟೆಬಿಲೈಜರ್ ಸ್ಪೋಟ:ತಪ್ಪಿದ ಭಾರಿ ಅನಾಹುತ
“ಈ ಬೆಳವಣಿಗೆಯನ್ನು ಕಟುವಾಗಿ ಟೀಕಿಸಿದ್ದ ವಿರೋಧ ಪಕ್ಷದ ನಿರ್ಗಮಿತ ನಾಯಕ ಖರ್ಗೆಯವರು, ‘10 ಜನ ಶಾಸಕರೊಂದಿಗೆ ಬಂದ ಸಿದ್ದರಾಮಯ್ಯ, ಈಗ 100 ಶಾಸಕರ ಮುಖ್ಯಸ್ಥರಾಗಿದ್ದಾರೆ’ ಎಂದು ಮಾರ್ಮಿಕವಾಗಿ ನುಡಿದಿದ್ದರು. ಈ ಎಲ್ಲಾ ಘಟನೆಗಳನ್ನು ಕಾಂಗ್ರೆಸ್​​ ಮರೆತಂತೆ ಕಾಣುತ್ತಿದೆ. ಚಿಂತಿಸಬೇಡಿ, ಕೆಲವೇ ದಿನಗಳಲ್ಲಿ ಈ ಘಟನೆಗಳು ಮತ್ತಷ್ಟು ವಿಭಿನ್ನವಾಗಿ ಪುನರಾವರ್ತನೆಯಾಗಲಿವೆ. ನಮ್ಮ ವಿಪಕ್ಷ ನಾಯಕ ಸ್ಥಾನದ ಬಗ್ಗೆ ನಮ್ಮ ವರಿಷ್ಠರು ಸದನ ಪ್ರಾರಂಭಕ್ಕಿಂತಲೂ ಮೊದಲೆ, ಸೂಕ್ತ ಸಮಯದಲ್ಲಿ ಘೋಷಿಸುತ್ತಾರೆ” ಎಂದು ಟ್ವೀಟ್​​ ಮಾಡಿದೆ.
“ಕಾಂಗ್ರೆಸ್​​ ಇದರ ಬಗ್ಗೆ ತಲೆ ಕೆರೆದುಕೊಳ್ಳುವುದನ್ನು ಬಿಟ್ಟು, ಅವಾಸ್ತವಿಕ ಗ್ಯಾರಂಟಿಗಳ ಅಪ್ರಬುದ್ಧ ಅನುಷ್ಠಾನದ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ದವಾಗಿರುವ ನಮ್ಮ ಪಕ್ಷದ ಶಾಸಕರನ್ನು ಹೇಗೆ ಎದುರಿಸಬೇಕೆಂದು ತಮ್ಮ ಸರಕಾರಕ್ಕೆ ಸಲಹೆ ನೀಡಲಿ” ಎಂದು ಟ್ವೀಟ್ (Tweet) ಮೂಲಕ ವ್ಯಂಗ್ಯವಾಡಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 20 =
Remember me
