ಬೆಂಗಳೂರು: ರೇಷ್ಮೆ ಕೃಷಿ ನಂಬಿರುವವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ಸಿಹಿ ಸುದ್ದಿ ನೀಡಿದ್ದಾರೆ. ರೇಷ್ಮೇ ಖರೀದಿಗೆ ಐದು ಲಕ್ಷ ರೂ. ವರೆಗೂ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಇಂದು ತಮ್ಮ 14ನೇ ಬಜೆಟ್ ಮಂಡನೆ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ರೇಷ್ಮೆ ಕೃಷಿಗೆ ವಿಶೇಷ ಒತ್ತು ನೀಡಿದರು. ರಾಮನಗರ ಮತ್ತು ಶಿಡ್ಲಘಟ್ಟದ ರೇಷ್ಮೆಗೂಡಿನ ಮಾರುಕಟ್ಟೆಗಳಲ್ಲಿ ಏಷ್ಯಾದಲ್ಲಿಯೇ ಅತಿ ಹೆಚ್ಚಿನ ವಹಿವಾಟು ನಡೆಯುತ್ತದೆ. ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಅತಿದೊಡ್ಡ ಹೈಟೆಕ್ ಮಾರುಕಟ್ಟೆಯನ್ನು ನಿರ್ಮಿಸಲಾಗುತ್ತಿದ್ದು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯವನ್ನು ಬಲಪಡಿಸಲಾಗುವುದು. ಇದರಿಂದ ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ, ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ, ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಸುಲಭವಾಗಿ ದುಡಿಯುವ ಬಂಡವಾಳವನ್ನು ಒದಗಿಸಲು ಮತ್ತು ರೇಷ್ಮೆಗೂಡಿನ ಖರೀದಿಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
LIVE| ರಾಜ್ಯ ಬಜೆಟ್ 2023​: ಆಯವ್ಯಯ​ ಮಂಡನೆ ಆರಂಭ, ಕ್ಷಣ ಕ್ಷಣದ ಮಾಹಿತಿಯ ನೇರಪ್ರಸಾರ ಇಲ್ಲಿದೆ…

ಗೃಹಲಕ್ಷ್ಮಿ ಯೋಜನೆ ಯಶಸ್ವಿಗೊಳಿಸಿ ; ಶಾಸಕರಿಗೆ ಸಿಎಂ, ಡಿಸಿಎಂ ಪಾಠ

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಈ ಬಜೆಟ್​ನ ಮೂಲಮಂತ್ರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
