ಬೆಂಗಳೂರು:ಇಂದು ಬೆಳಗ್ಗೆ 10:15ಕ್ಕೆ 2024-25ನೇ ಸಾಲಿನ ಬಜೆಟ್ ಮಂಡನೆ ಶುರುಮಾಡಿದ ಸಿಎಂ ಸಿದ್ದರಾಮಯ್ಯ, ಬಜೆಟ್ ಮಂಡನೆಗೂ ಮುನ್ನ ವಿಶೇಷ ಸಂಪುಟ ಸಭೆ ನಡೆಸಿದರು. ಇದು ಸಿದ್ದರಾಮಯ್ಯ ಮಂಡಿಸುತ್ತಿರುವ 15ನೇ ಬಜೆಟ್ ಆಗಿದ್ದು, ಲೋಕಸಭೆ ಚುನಾವಣೆ ಹೊತ್ತಲ್ಲೇ ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಗಳಿತ್ತು. ಈ ಬೆನ್ನಲ್ಲೇ ಸಿಎಂ ಹಲವು ಬಹುನಿರೀಕ್ಷಿತ ಯೋಜನೆಗಳನ್ನು ಘೋಷಿಸಿದ್ದಾರೆ.
ಇದನ್ನೂ ಓದಿ:ಗ್ಯಾರಂಟಿ ಯೋಜನೆಗಳು ಚುನಾವಣೆ ಗಿಮಿಕ್‌ ಅಲ್ಲ: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಕೃಷಿ ಬಜೆಟ್​ನಡಿ, ದೊಡ್ಡನಗರ ಬಳಿಯ ವಿತರಣಾ ತೊಟ್ಟಿಯವರೆಗೂ ವಿಸ್ತರಣೆ, ಮೇಕೆದಾಟು ಯೋಜೆನೆಗೆ ಪ್ರತ್ಯೇಕ ಯೋಜನಾ ವಿಭಾಗ ಸ್ಥಾಪನೆ, ಮನ್ರೇಗಾ ಯೋಜನೆಯಡಿ 5 ಸಾವಿರ ಸಣ್ಣ ಸರೋವರ ನಿರ್ಮಾಣ, ಕೃಷ್ಇ ಉತ್ಪನ್ನ ಪಿಎಂಎಫ್ಎಂಇ ಯೋಜನೆಯಡಿ 80 ಕೋಟಿ ರೂ., ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆ ವಿಸ್ತರಣೆ ಮಾಡುವುದಾಗಿ ಇಂದಿನ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.
ಇದರೊಟ್ಟಿಗೆ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸಮಿತಿಗಳ ಡಿಜಟಲೀಕರಣ, ಮಾರುಕಟ್ಟೆಗಳ ಸಮಿತಿಗಳ ಡಿಜಿಟಲೈಸ್​ಗೆ 10 ಕೋಟಿ ರೂ. ಮೀಸಲು, ರಾಯಚೂರಿನಲ್ಲಿ ಹೈಟೆಕ್​ ಒಣ ಮೆಣಸಿನಕಾಯಿ ಮಾರ್ಕೆಟ್​, 25 ಕೋಟಿ ರೂ. ವೆಚ್ಚದಲ್ಲಿ ಮೆಣಸಿನಕಾಯಿ ಮಾರುಕಟ್ಟೆ, ಮಂಗಳೂರಿನಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ, 35 ಕೋಟಿ ರೂ. ವೆಚ್ಚದ ಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪಿಸುವುದಾಗಿ ಘೋಷಿಸಲಾಗಿದೆ.
ರಾಜ್ಯ ಬಜೆಟ್ 2024: ಮದ್ಯ ಪ್ರಿಯರಿಗೆ ಶಾಕ್! ಬಿಯರ್​ ದರದಲ್ಲಿ ಹೆಚ್ಚಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 3 =
Remember me
