ಬೆಂಗಳೂರು:ಇಂದಿನ ರಾಜ್ಯ ಬಜೆಟ್​ 2024ರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬಜೆಟ್​ನಲ್ಲಿ ಘೋಷಿಸಲಾದ ಅನುದಾನಗಳು ಹೀಗಿವೆ. ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು ಸ್ಥಾಪಿಸಲಾಗುವುದು. ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಸಾಲಿನಲ್ಲಿ ಉಳಿದ 9 ಜಿಲ್ಲೆಗಳಲ್ಲಿಯೂ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:ಆಗದು ಎಂದು ಕೈಕಟ್ಟಿ ಕುಳಿತರೆ…ಡಾ.ರಾಜ್ ಕುಮಾರ್ ಹಾಡಿನ ಸಾಲು ಉಲ್ಲೇಖಿಸಿದ ಸಿದ್ದರಾಮಯ್ಯ
ತಾಲ್ಲೂಕು ಆಸ್ಪತ್ರೆಗಳಿಲ್ಲದ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಆರೋಗ್ಯ ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗುವುದು.
ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಗ್ರಾಮೀಣ ಪ್ರದೇಶದ ಜನರಿಗೆ 24×7 ತುರ್ತು ಆರೋಗ್ಯ ಸೇವೆಯನ್ನು ನೀಡಲು ಮುಂದಿನ ೨ ವರ್ಷಗಳಲ್ಲಿ 350 ಕೋಟಿ ರೂ.ಗಳ ವೆಚ್ಚದಲ್ಲಿ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 15 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮಾನವ ಸಂಪನ್ಮೂಲದೊಂದಿಗೆ ಕಾರ್ಯಗತಗೊಳಿಸಲಾಗುವುದು.
ಇದನ್ನೂ ಓದಿ:ಶಿವಮೊಗ್ಗ: ಪ್ರಾಣಿ, ಪಕ್ಷಿಗಳನ್ನು ಓಡಿಸುವುದಕ್ಕೂ ಕೆಲಸ‌ ಖಾಲಿ ಇದೆ…ಅದೂ ವಿಮಾನ ನಿಲ್ದಾಣದಲ್ಲಿ!
ಕಲ್ಯಾಣ ಕರ್ನಾಟಕ ಭಾಗದಲ್ಲಿ 46 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ.ಗಳ ವೆಚ್ಚದಲ್ಲಿ KKRDB ಮೂಲಕ ಸ್ಥಾಪಿಸಲಾಗುವುದು. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು 6,493 ಆರೋಗ್ಯ ಕ್ಷೇಮಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 199 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಟ್ಟಡ ಕಾಮಗಾರಿಗಾಗಿ 130 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗುವುದು.
ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ Chemotherapy ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪಿಸಲಾಗುವುದು. ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆಂಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣಗಳ ಖರೀದಿಗೆ ಒಟ್ಟಾರೆಯಾಗಿ 21 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.
ಇದನ್ನೂ ಓದಿ:ತಡರಾತ್ರಿವರೆಗೆ ಓದಿ ಮಲಗಿದ ವಿದ್ಯಾರ್ಥಿನಿ ಮತ್ತೆ ಏಳಲೇ ಇಲ್ಲ!
ಕಲ್ಯಾಣ ಕರ್ನಾಟಕದಲ್ಲಿ Haemophilia ಮತ್ತು Thalassemia ರೋಗಿಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯಗಳ ಕೊರತೆಯಿರುವುದರಿಂದ ಕಲಬುರಗಿ ಮತ್ತು ಕೊಪ್ಪಳದ ICDT ಕೇಂದ್ರಗಳ ಬಲವರ್ಧನೆಗೆ 7 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳ First Referral Unit (FRU) ಗಳಲ್ಲಿ ರಕ್ತ ಸಂಗ್ರಹ ಘಟಕಗಳಿಲ್ಲದ ಕಾರಣ, ರೋಗಿಗಳಿಗೆ ತುರ್ತು ಸಮಯದಲ್ಲಿ ರಕ್ತ ಪೂರೈಸಲು ತೊಂದರೆ ಉಂಟಾಗುತ್ತಿದೆ. ಇದನ್ನು ನೀಗಿಸಲು ೫೦ ಹೊಸ ರಕ್ತ ಶೇಖರಣಾ ಘಟಕಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಸ್ಥಾಪನೆ.
ಮುಂದಿನ 4 ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು (IPHL) ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಚಿಕ್ಕಮಗಳೂರು, ವಿಜಯನಗರ, ಶಿವಮೊಗ್ಗ, ಬೆಳಗಾವಿ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮತ್ತು 2025-26ನೇ ಸಾಲಿನಲ್ಲಿ ಚಿತ್ರದುರ್ಗ, ಬಾಗಲಕೋಟೆ, ಚಾಮರಾಜನಗರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರಯೋಗಾಲಯವನ್ನು (IPHL) ಸ್ಥಾಪಿಸಲಾಗುವುದು.
ಇದನ್ನೂ ಓದಿ:ಬಜೆಟ್​ ಅಧಿವೇಶನದಲ್ಲಿ ಡಾ. ರಾಜ್​ಕುಮಾರ್​ ಹಾಡು ಉಲ್ಲೇಖಿಸಿದ ಸಿದ್ದು!
ಇದಲ್ಲದೇ ಪ್ರಸಕ್ತ ಸಾಲಿನಲ್ಲಿ ಹುನಗುಂದ, ಸಿರಾ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಇದಕ್ಕೆ ಒಟ್ಟಾರೆಯಾಗಿ 11 ಕೋಟಿ ರೂ.ಗಳ ಅನುದಾನವನ್ನು ನೀಡಲಾಗುವುದು ಎಂದು ಘೋಷಿಸಿದ್ದಾರೆ.
VIDEO | ಹಾಲಿಗೆ ಕಾಫಿ ಪುಡಿ, ಮ್ಯಾಗಿ… ಇದೆಂಥಾ ಗೋಳು! ಹೇಗಪ್ಪಾ ತಿನ್ನೋದು? ಎಂದ ಗ್ರಾಹಕರು

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:12 − 2 =
Remember me
