ಮೂರು ತಿಂಗಳಲ್ಲಿ ಚುನಾವಣೆ ಇಟ್ಟುಕೊಂಡು ಶಾಸ್ತ್ರಕ್ಕೆ ಮಂಡಿಸಿರುವ ಮುಂಗಡ ಪತ್ರ ರಾಜ್ಯದ ಜನರ ಸಂಕಷ್ಟಗಳನ್ನು ಪರಿಹಾರ ಮಾಡಲು ಮೂರು ಕಾಸಿನ ಕಿಮ್ಮತ್ತು ಕೊಟ್ಟಿಲ್ಲ. ವರ್ಷಕ್ಕೊಮ್ಮೆ ಜಾತ್ರೆ ಮುಗಿದ ಮೇಲೆ ಅಲ್ಲಿನ ಅಂಗಡಿಗಳು ಸ್ಟಾಕ್ ಕ್ಲಿಯರೆನ್ಸ್ ಸೇಲ್ ಬೋರ್ಡ್ ಹಾಕಿ ರಿಯಾಯಿತಿ ದರದ ಘೊಷಣೆ ಮಾಡುತ್ತವೆ. ಹಾಗಿದೆ ಈ ಬಜೆಟ್.
ಮೂರು ವರ್ಷಗಳಲ್ಲಿ ಬಿಜೆಪಿ ರಾಜ್ಯವನ್ನು ಆರ್ಥಿಕವಾಗಿ ಹಾಳು ಮಾಡಿದೆ. ಕೈಗಾರಿಕೆ, ಮೂಲಸೌಕರ್ಯ, ಸಾರಿಗೆ, ಶಿಕ್ಷಣ, ಕೃಷಿ ಸೇರಿ ಅನೇಕ ಕ್ಷೇತ್ರಗಳಲ್ಲಿ ಕರ್ನಾಟಕ ಬಸವಳಿದಿದೆ. ಕೇಂದ್ರದ ಮುಂದೆ ಭಿಕ್ಷಾಪಾತ್ರೆ ಹಿಡಿದು ನಿಲ್ಲುವ ದುಸ್ಥಿತಿ ಬಂದಿದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಅನುದಾನವನ್ನು ಭಿಕ್ಷೆಯಂತೆ ಹಾಕುತ್ತಿದೆ. ಇನ್ನು ಈ ಬಜೆಟ್ಟಿನ ಹಣೆಬರಹಕ್ಕೆ ದಿಕ್ಕೆಲ್ಲಿ?
ಬೊಮ್ಮಾಯಿ ಬಜೆಟ್​ಗೆ ಯಾವುದೇ ಮಹತ್ವ ಇಲ್ಲ. ಇದು ಅತ್ಯಂತ ನೀರಸ, ಮಾತ್ರವಲ್ಲ ನಿರುಪಯುಕ್ತ ಕೂಡ.
ಮಕ್ಕಳ ಬಸ್ ಯೋಜನೆಯನ್ನು ಬಜೆಟ್ ನಲ್ಲಿ ಘೊಷಣೆ ಮಾಡಲಾಗಿದೆ. ಆದರೆ ಈ ಯೋಜನೆಯನ್ನು ಚುನಾವಣೆಗೆ ಮೊದಲೇ ಜಾರಿ ಮಾಡುತ್ತಾರಾ? ಅಥವಾ ಚುನಾವಣೆ ನಂತರ ಜಾರಿ ಮಾಡುತ್ತಾರಾ? ಎನ್ನುವುದಕ್ಕೆ ಮುಖ್ಯಮಂತ್ರಿಗಳು ಏನೂ ಹೇಳಿಲ್ಲ, ಬುದ್ಧಿವಂತಿಕೆಯಿಂದ ಜಾರಿಕೊಂಡಿದ್ದಾರೆ.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹರಿಸುತ್ತಿರುವ ಬೆಂಗಳೂರು ಕೊಳಚೆ ನೀರಿನ ಮೂರನೇ ಹಂತದ ಸಂಸ್ಕರಣೆ ಬಗ್ಗೆ, ಟರ್ಸರಿ ಘಟಕ ಹಾಕುವ ಬಗ್ಗೆ ನೂರಾರು ಸಲ ನಾನು ಒತ್ತಾಯ ಮಾಡಿದ್ದೆ. ಆದರೆ, ಆ ನೀರು ಶುದ್ಧವಾಗಿದೆ, ಕುಡಿಯಲು ಯೋಗ್ಯವಾಗಿದೆ ಎಂದು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಅವರೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹೇಳಿಕೆ ನೀಡಿದ್ದರು. ಈಗ ಟರ್ಸರಿ ಘಟಕ ಹಾಕುವುದಾಗಿ ಬಜೆಟ್​ನಲ್ಲಿ ಘೊಷಣೆ ಮಾಡಲಾಗಿದೆ. ಅಂದರೆ ಈ ಸರ್ಕಾರಕ್ಕೆ ತಾನು ಮಾಡಿದ ಪಾಪದ ಅರಿವಾಗಿದೆ ಸರಿ, ಆದರೆ ಟರ್ಸರಿ ಘಟಕ ಸ್ಥಾಪನೆ ಮಾಡುವುದು ಯಾವಾಗ?.
ಬಿಜೆಪಿಯಿಂದ ರಾಮನಗರದಲ್ಲಿ ರಾಮಮಂದಿರ ಕಟ್ಟಲು ಸಾಧ್ಯವಿಲ್ಲ. ಆ ಘೊಷಣೆ ಬಜೆಟ್ ಬುಕ್​ನಲ್ಲೇ ಉಳಿಯುತ್ತದೆ. ರಾಮಮಂದಿರ ನಿರ್ಮಾಣ ನನ್ನಿಂದ ಸಾಧ್ಯ. ರಾಮನಗರದಲ್ಲಿ ಯಾವುದೇ ಜಪ ಮಾಡಿದರೂ ಏನೂ ಆಗಲ್ಲ.
ಕ್ರಿಕೆಟ್​ ವೇಳೆ ಕಿರಿಕ್​, ಚಾಕು ಇರಿತಕ್ಕೆ ಇಬ್ಬರ ಸಾವು: ಎರಡೂ ಊರುಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 18 =
Remember me
