ಇದು ಬಿಜೆಪಿ ಸರ್ಕಾರದ ಚುನಾವಣಾ ಬಜೆಟ್. ಇನ್ನು 2 ತಿಂಗಳಲ್ಲಿ ಚುನಾವಣೆ ಇರುವುದರಿಂದ ಇದನ್ನು ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್ ಎನ್ನಬಹುದು. ಬಜೆಟ್ ಗಾತ್ರ 3,09,182 ಕೋಟಿ ಇದೆ. ಕಳೆದ ಬಜೆಟ್ ನಲ್ಲಿ ಘೊಷಣೆ ಮಾಡಿದ್ದರಲ್ಲಿ 56 ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿಲ್ಲ. ಈ ಬಜೆಟ್ ಪುಸ್ತಕದಲ್ಲಿ ಬಿಜೆಪಿ ಸರ್ಕಾರದ ಸಾಧನೆಗಳ ಮಾಹಿತಿಯೇ ಇಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಎಸ್,ಸಿ,ಪಿ/ಟಿ,ಎಸ್,ಪಿ ಯೋಜನೆಗೆ 30,000 ಕೋಟಿ ಹಣ ನೀಡಿದ್ದೆವು, ಆದರೆ ಈಗಿನ ಬಜೆಟ್ ಗಾತ್ರ 3 ಲಕ್ಷದ 9ಸಾವಿರ ಕೋಟಿ ಇದ್ದರೂ ಈ ಯೋಜನೆಗೆ ನೀಡಿದ್ದು 30,000 ಕೋಟಿಯೇ. ಕನಿಷ್ಠ 50,000 ಕೋಟಿ ರೂ. ಆಗಬೇಕಿತ್ತು. ಇದು ದಲಿತರಿಗೆ, ಪರಿಶಿಷ್ಟ ಜಾತಿ ಮತ್ತು ವರ್ಗದ ಜನರಿಗೆ ಮಾಡಿರುವ ದೊಡ್ಡ ದ್ರೋಹ.
ಈ ವರ್ಷದ ಅಂತ್ಯಕ್ಕೆ 5,64,896 ಕೋಟಿ ರೂ. ಸಾಲ ಆಗುತ್ತದೆ ಎಂದು ಹೇಳಿದ್ದಾರೆ. ಇಷ್ಟೊಂದು ಸಾಲ ಆಗಲು ಕೇಂದ್ರ ಸರ್ಕಾರದಿಂದ ಬರುತ್ತಿರುವ ಅನುದಾನ ಕಡಿಮೆಯಾಗುತ್ತಿರುವುದು ಕಾರಣ. ನಮ್ಮ ತೆರಿಗೆ ಪಾಲು, ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ಕೇಂದ್ರದ ಪಾಲು ಕಡಿಮೆಯಾದದ್ದು ಹಾಗೂ ಕೇಂದ್ರದಿಂದ ಬರುವ ಆರ್ಥಿಕ ನೆರವಿನ ಪ್ರಮಾಣ ಇಳಿಕೆಯಾಗಿರುವುದರಿಂದ ಸುಮಾರು 80,000 ಕೋಟಿಯಷ್ಟು ಸಾಲ ಮಾಡಬೇಕಾಗಿದೆ. ಸಾಲದ ಪ್ರಮಾಣ 95% ಹೆಚ್ಚಾಗಿದೆ. ಕರ್ನಾಟಕದಿಂದ ವಿವಿಧ ತೆರಿಗೆಗಳ ರೂಪದಲ್ಲಿ 4 ಲಕ್ಷದ 75 ಸಾವಿರ ಕೋಟಿ ರೂ. ಕೇಂದ್ರ ಸರ್ಕಾರಕ್ಕೆ ಹೋಗುತ್ತದೆ. ಆದರೆ ಕೇಂದ್ರದ ಸಹಾಯಧನ ಬರುವುದು 50,257 ಕೋಟಿ. ಇದು ಕೇಂದ್ರ ಸರ್ಕಾರದಿಂದ ರಾಜ್ಯದ ಜನರಿಗೆ ಆಗಿರುವ ದೊಡ್ಡ ಅನ್ಯಾಯ.
ಈ ಬಜೆಟ್ ನಲ್ಲಿ ಬದ್ಧ ವೆಚ್ಚಗಳು ಎಷ್ಟಾಗಿದೆ ಎಂದು ಹೇಳಿಲ್ಲ. ಕಳೆದ ಬಾರಿ ಅದು ಶೇ. 92 ಇತ್ತು. ಬದ್ಧ ವೆಚ್ಚ ಕಡಿಮೆಯಾದರೆ ಅಭಿವೃದ್ಧಿ ಕಾರ್ಯಗಳಿಗೆ ಹಣ ಹೆಚ್ಚು ಸಿಗುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಬದ್ಧ ವೆಚ್ಚ 72 ರಿಂದ 73% ಇತ್ತು. ಕೇಂದ್ರ ಮಜ್ಜಿಗೆ, ಮೊಸರು, ಅಕ್ಕಿ, ಗೋದಿ, ಮಂಡಕ್ಕಿ, ಪೆನ್ನು, ಪೆನ್ಸಿಲ್ ಮೇಲೆ ತೆರಿಗೆ ಹಾಕಿರುವುದರಿಂದ ತೆರಿಗೆ ಸಂಗ್ರಹ ಜಾಸ್ತಿಯಾಗಿದೆ. ಕಳೆದ ವರ್ಷ ಅಸಲು 14,000 ಕೋಟಿ ಸಂದಾಯ ಮಾಡಬೇಕಿತ್ತು, ಬಡ್ಡಿ ರೂಪದಲ್ಲಿ 34,000 ಕೋಟಿ ಕಟ್ಟಬೇಕಿರುವುದರಿಂದ ಸುಮಾರು 48,000 ಕೋಟಿ ಸಾಲ ಮರುಪಾವತಿಗೆ ಹೋಗುತ್ತದೆ. ಈ ಬಜೆಟ್ ನಿಂದ ಜನರ ಸಮಸ್ಯೆಗಳು ಬಗೆಹರಿಯಲ್ಲ, ರೈತರ ಆದಾಯವನ್ನು ದುಪ್ಪಟ್ಟು ಮಾಡುವುದಾಗಿ ಹೇಳಿದ್ದರು. ಎಲ್ಲಿಯೂ ಆ ಪ್ರಯತ್ನ ಮಾಡಿಲ್ಲ. 5 ವರ್ಷದಲ್ಲಿ ಶೇ.6 ರಷ್ಟು ಬೆಲೆಯೇರಿಕೆಯಾಗಿದೆ. ಇದನ್ನು ಲೆಕ್ಕ ಹಾಕಿದರೆ ತಲಾ ಆದಾಯ ಕಡಿಮೆಯಾಗುತ್ತದೆ. ಇದು ಜನಸಾಮಾನ್ಯರ, ರೈತರ, ಬಡವರ ವಿರೋಧಿ ಬಜೆಟ್. ಮಾರ್ಚ್ ತಿಂಗಳಿನಲ್ಲಿ ಆರ್ಥಿಕ ಇಲಾಖೆಯವರು ಹಣ ಖರ್ಚು ಮಾಡಲು ಒಪ್ಪಿಗೆಯನ್ನೇ ನೀಡಲ್ಲ. ಪ್ರಸಕ್ತ ವರ್ಷ ಘೊಷಣೆ ಮಾಡಿದ ಅನುದಾನದಲ್ಲಿ ಖರ್ಚಾಗಿರುವ ಹಣ ಶೇ. 56 ಮಾತ್ರ. ಇನ್ನುಳಿದ 15 ದಿನದಲ್ಲಿ ಶೇ. 44 ಖರ್ಚು ಮಾಡಲು ಆಗುತ್ತಾ?
ಕ್ರಿಕೆಟ್​ ವೇಳೆ ಕಿರಿಕ್​, ಚಾಕು ಇರಿತಕ್ಕೆ ಇಬ್ಬರ ಸಾವು: ಎರಡೂ ಊರುಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ

ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಅಪ್ರಾಪ್ತ ವಯಸ್ಕಳ ಮುಖಕ್ಕೇ ಆ್ಯಸಿಡ್ ಎರಚಿದ!; ಆರೋಪಿ ಪರಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 5 =
Remember me
