ಬೆಂಗಳೂರು:ಕರೊನಾ ಸಂಕಷ್ಟವು ಒಂದು ದುಸ್ವಪ್ನವಾಗಿ ಕಾಡಿದೆ. ಈ ಸಂಕಷ್ಟದ ನಡುವೆಯೂ ಸರ್ಕಾರ ಉತ್ತಮವಾಗಿ ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ತಿಳಿಸಿದರು.
2021-22ನೇ ಸಾಲಿನ ಬಜೆಟ್​ ಮಂಡನೆ ಆರಂಭಕ್ಕೂ ಮುನ್ನ ಕರೊನಾ ಹಾಗೂ ನೆರೆ ಪರಿಸ್ಥಿತಿ ಬಗ್ಗೆ ಸಿಎಂ ಬಿಎಸ್​ವೈ ಮಾತನಾಡಿದರು. ನಮ್ಮ ಸರ್ಕಾರದಲ್ಲಿ ಅತಿವೃಷ್ಠಿ, ಅನಾವೃಷ್ಠಿ ನಿರಂತರ ಸವಾಲಾಗಿತ್ತು, ಇದರೊಂದಿಗೆ ಕರೊನಾ ದುಸ್ವಪ್ನವಾಗಿ ಕಾಡಿತು. ಕೋವಿಡ್​ನಿಂದಾಗಿ ಇಡೀ ಆರ್ಥಿಕ ವ್ಯವಸ್ಥೆ ಬುಡಮೇಲಾಗಿದೆ ಎಂದರು.
ಜನರಿಗೆ ಉಚಿತ ಕರೊನಾ ಚಿಕಿತ್ಸೆ ನೀಡಲಾಗಿದೆ. ಫೆಬ್ರವರಿ ಅಂತ್ಯಕ್ಕೆ 1.91 ಕೋಟಿ ಆರ್​ಟಿಪಿಸಿಆರ್​ ಟೆಸ್ಟ್​ ಮಾಡಲಾಗಿದೆ. ಕಟ್ಟಡ ಕಾರ್ಮಿಕರಿಗೆ ಆಹಾರ ಪೊಟ್ಟಣ ನೀಡಲಾಗಿದೆ. ರಾಜ್ಯ ಕಾರ್ಯಕ್ಷಮತೆಯನ್ನು ಪ್ರಧಾನಿ ಮೋದಿ ಮೆಚ್ಚಿದ್ದಾರೆ. ಪಿಪಿಇ ಕಿಟ್ ಉತ್ಪಾದನೆಯಲ್ಲಿ ಹೆಚ್ಚಳ ಮಾಡಲಾಗಿದೆ. ಕೋವಿಡ್ ಲಸಿಕೆ ಹಂಚಿಕೆಯಲ್ಲಿ ರಾಷ್ಟ್ರದ ಗಮನ ಸೆಳೆದಿದ್ದೇವೆ ಎಂದರು.
ಕೋವಿಡ್ ವಾರಿಯರ್ಸ್​ಗೆ ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸಿದ ಬಿ.ಎಸ್.ಯಡಿಯೂರಪ್ಪ, ಕೋವಿಡ್ ಕಾಲದಲ್ಲಿ ಕಲಿತ ಪಾಠ ಸ್ಮರಣೀಯವಾಗಿದೆ ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 2 =
Remember me
