ಬೆಂಗಳೂರು:ಇಡೀ ವಿಶ್ವವನ್ನೇ ವ್ಯಾಪಕವಾಗಿ ಕಾಡಿದ ಕೋವಿಡ್ ನಿರ್ವಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದ ಇತರೆ ರಾಜ್ಯಗಳಿಗೆ ಮಾದರಿಯಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿ ವ್ಯಾಪಕ ಸುಧಾರಣೆ ಹಾಗೂ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ಅಗತ್ಯ ಅನುದಾನ ಒದಗಿಸಲಾಗಿದೆ.
ಈಗಾಗಲೇ ದೇಶದ ಕೆಲ ರಾಜ್ಯಗಳಲ್ಲಿ ಕೋವಿಡ್ 2ನೇ ಅಲೆ ಪ್ರಾರಂಭವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ 2ನೇ ಅಲೆ ಹರಡದಂತೆ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ.
ಕೋವಿಡ್ ಅವಧಿಯಲ್ಲಿ ಒದಗಿಸಿದ ಮೌಲ್ಯಯುತ ವೈದ್ಯಕೀಯ ಸೌಕರ್ಯಗಳು ವ್ಯರ್ಥವಾಗದಂತೆ 60 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 19 ಜಿಲ್ಲಾ ಆಸ್ಪತ್ರೆಗಳಲ್ಲಿ 25 ಹಾಸಿಗೆ ಸಾಮರ್ಥ್ಯವುಳ್ಳ ಹಾಗೂ 10 ತಾಲೂಕು ಆಸ್ಪತ್ರೆಗಳಲ್ಲಿ ಆರು ಹಾಸಿಗೆ ಸಾಮರ್ಥ್ಯವುಳ್ಳ ತೀವ್ರ ನಿಗಾ ಘಟಕಗಳ (ಐಸಿಯು) ಸೌಲಭ್ಯ ಕಲ್ಪಿಸಲಾಗುವುದು.
ಕೋವಿಡ್ ಅವಧಿಯಲ್ಲಿ ಆರಂಭಿಸಲಾದ ಟೆಲಿ-ಐಸಿಯು ಸೌಲಭ್ಯಗಳನ್ನು ಬಲಪಡಿಸಿ, ವಿಶೇಷ ತಜ್ಞರ ಕೊರತೆ ನೀಗಿಸಲು ಎರಡು ಕೋಟಿ ರೂ. ಅನುದಾನ ಒದಗಿಸಲಾಗಿದೆ.
ಪೆಟ್ರೋಲ್​, ಡೀಸೆಲ್​ ತೆರಿಗೆಯಲ್ಲಿ ಬದಲಾವಣೆ ಇಲ್ಲ: ಇಂಧನ ದರ ಯಥಾಸ್ಥಿತಿ, ಜನರ ನಿರೀಕ್ಷೆ ಹುಸಿ

ರಾಜ್ಯ ಬಜೆಟ್​: ಇವುಗಳಿಗೆ ಕೋಟಿ ಕೋಟಿ ಹಣ ಮೀಸಲಿಟ್ಟ ಸಿಎಂ

“ಬಡವರ ಸೇವೆ ಮಾಡಬೇಕೆನ್ನೋ ಸ್ವಾರ್ಥದಲ್ಲಿ ಬಿಜೆಪಿ ಸೇರಿರುವೆ” : ಮಿಥುನ್ ಚಕ್ರವರ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 5 =
Remember me
