ಬೆಂಗಳೂರು:ಇಂದು ಬೆಳಗ್ಗೆ 10.15ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡನೆ​ ಆರಂಭಿಸುತ್ತಿದ್ದಂತೆ ಪ್ರತಿಪಕ್ಷ ಕಾಂಗ್ರೆಸ್​ ವಿರೋಧ ವ್ಯಕ್ತಪಡಿಸಿ ಸದನದಲ್ಲಿ ಗದ್ದಲ ಸೃಷ್ಟಿಸಿದೆ.
ಕಲಾಪಕ್ಕೆ ಆಗಮಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಿವಿ ಮೇಲೆ ಹೂ ಇಟ್ಟುಕೊಂಡು ಬಂದಿರುವುದನ್ನು ಉಲ್ಲೇಖಿಸಿದ ಸಿಎಂ ಬೊಮ್ಮಾಯಿ, ಕಿವಿ ಮೇಲೆ ಹೂ ಇಟ್ಟುಕೊಳ್ಳುವುದು ಬೇಡ ಎಂದು ನಾನು ಹೇಳುತ್ತೇನೆ. ಆದರೂ ಅವರು ಹೂ ಇಟ್ಟುಕೊಂಡು ಬಂದಿದ್ದಾರೆ. ಇದು ಸರಿಯಲ್ಲ ಎಂಬುದು ನನ್ನ ಭಾವನೆ. ಇಷ್ಟು ದಿನ ಜನಗಳ ಕಿವಿ ಮೇಲೆ ಹೂ ಇಡುತ್ತಿದ್ದರು. ಈಗ ಜನ ಅವರ ಕಿವಿ ಮೇಲೆ ಹೂ ಇಟ್ಟುಕೊಳ್ಳುತ್ತಿದ್ದಾರೆ. ಮುಂದೆಯು ಇಡುತ್ತಾರೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಈ ಬಜೆಟ್​ ಮೂಲಕ ರಾಜ್ಯದ 7 ಕೋಟಿ ಜನರ ಕಿವಿಗೆ ಹೂ ಇಡಲು ಹೊರಟಿದ್ದಾರೆ ಎಂದು ತಿರುಗೇಟು ನೀಡಿದರು. ಈ ವೇಳೆ ಸದನದಲ್ಲಿ ಗದ್ದಲ ಏರ್ಪಟ್ಟಿತು. ಬಳಿಕ ಸ್ಪೀಕರ್​ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್​ ಮಂಡನೆಯಾಗಿದೆ.
LIVE| ರಾಜ್ಯ ಬಜೆಟ್ 2023​: ತಜ್ಞರ ಚರ್ಚೆ-ವಿಶ್ಲೇಷಣೆ ಜತೆಗೆ ಕ್ಷಣ ಕ್ಷಣದ ಮಾಹಿತಿಯ ನೇರಪ್ರಸಾರ

ಒಟ್ಟು 3 ಲಕ್ಷ 9 ಸಾವಿರ 182 ಕೋಟಿ ರೂ. ಮೊತ್ತದ ಬಜೆಟ್!

ರಾಜ್ಯದ ಜನತೆಗೆ ಒಳಿತಾಗಲೆಂದು ಪೂಜೆ: ಸಿಎಂ ಬೊಮ್ಮಾಯಿ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
