ಬೆಂಗಳೂರು:ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಪ್ರತಿವರ್ಷ 10,000 ರೂಪಾಯಿ ವಾರ್ಷಿಕ ಹಣಕಾಸು ನೆರವು ನೀಡುವುದರ ಜತೆಗೆ ಎಲ್ಲ ರೈತರು ಮತ್ತು ಮೀನುಗಾರರಿಗೆ ಕಿಸಾನ್​ ಕ್ರೆಡಿಟ್​ ಕಾರ್ಡ್​ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್​ನಲ್ಲಿ ಘೋಷಿಸಿದ್ದಾರೆ.
ರೈತರು ಅಧಿಕ ಬಡ್ಡಿದರ ಅನೌಪಚಾರಿಕ ಸಾಲದ ಸುಳಿಯಲ್ಲಿ ಸಿಲುಕುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಂಡಿದ್ದಾಗಿ ಸಿಎಂ ತಿಳಿಸಿದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್​ ಯೋಜನೆಯಡಿ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಕೇಂದ್ರ ಸರ್ಕಾರ ನೀಡುವ 6000 ರೂ.ಜತೆ ನಮ್ಮ ಸರ್ಕಾರ 4000 ರೂ.ಹೆಚ್ಚುವರಿ ನೆರವು ನೀಡಲಿದೆ. ಒಟ್ಟು ವಾರ್ಷಿಕವಾಗಿ 10,000 ರೂ.ನೆರವು ನೀಡಲಾಗುವುದು.
ಈವರೆಗೆ ಸುಮಾರು 41 ಲಕ್ಷ ಬ್ಯಾಂಕ್​ ಖಾತೆಗಳಿಗೆ 825 ಕೋಟಿ ರೂಪಾಯಿಯನ್ನು ವರ್ಗಾಯಿಸಲಾಗಿದೆ. ಈ ಯೋಜನೆಯನ್ನು ಮುಂದುವರಿಸಲು ಪ್ರಸಕ್ತ ಸಾಲಿನ ಬಜೆಟ್​ನಲ್ಲಿ 2600 ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ತಿಳಿಸಿದರು.
#BUDGET2020-21pic.twitter.com/loQTdNaS20
— CM of Karnataka (@CMofKarnataka)March 5, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
