ಬೆಂಗಳೂರು:ಲೋಕೋಪಯೋಗಿ ಇಲಾಖೆಯು 2020-21ನೇ ಸಾಲಿನ ಬಜೆಟ್​ನಲ್ಲಿ ಪ್ರವಾಹ ಹಾಗೂ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ಮರುನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದ ಹಾನಿಗೊಳಗಾದ ರಸ್ತೆಗಳನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಇ ಪ್ರೊಕ್ಯೂರ್​ಮೆಟ್‍ನಿಂದಾಗಿ ಕೆಲವು ಟೆಂಡರ್ ಪ್ರಕ್ರಿಯೆಗೆ ತಾಂತ್ರಿಕವಾಗಿ ವಿಳಂಬವಾಗಿದೆ. ಈ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು.
ಮುಂಬರುವ ಆಯವ್ಯಯದಲ್ಲಿ ಈ ಕಾಮಗಾರಿಗಳಲ್ಲಿ ರಸ್ತೆ ಮರುನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಫಾಸ್ಟ್​ಟ್ರ್ಯಾಕ್​ನಲ್ಲಿ ಸಂಭವಿಸುತ್ತಿರುವ ಕೆಲವು ನ್ಯೂನತೆಗಳ ಕುರಿತು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಗಮನಕ್ಕೆ ತರಲಾಗಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ 94 ಅಪಘಾತ ಸ್ಥಳಗಳನ್ನು ಬ್ಲಾಕ್‍ಸ್ಪಾಟ್ ಎಂದು ಗುರುತಿಸಲಾಗಿದೆ. ಲೋಕೋಪಯೋಗಿ ಇಲಾಖೆಯ 249, ಕೆಶಿಪ್​ನ​ 20, ರಸ್ತೆ ಸಾರಿಗೆ ನಿಗಮದ 2, ರಾಷ್ಟ್ರೀಯ ಹೆದ್ದಾರಿಯ 172, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ 392, ರಾಷ್ಟ್ರೀಯ ಹೆದ್ದಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ 69, ಬಿಬಿಎಂಪಿಯ 31, ಬೆಳಗಾವಿಯ ಮಹಾನಗರ ಪಾಲಿಕೆಯ 2, ತುಮಕೂರು ಮಹಾನಗರ ಪಾಲಿಕೆಯ 3 ಸ್ಥಳಗಳನ್ನು ಗುರುತಿಸಲಾಗಿದೆ ಎಂದರು.
ಈ ಅಪಘಾತ ಸ್ಥಳಗಳಲ್ಲಿ ರಸ್ತೆಯನ್ನು ವಿಸ್ತರಿಸಿ, ಅಪಘಾತ ತಡೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಾರಜೋಳ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
