ಬೆಂಗಳೂರು:ಕರೊನಾದಿಂದಾಗಿ ಬಿಗಡಾಯಿಸಿರುವ ರಾಜ್ಯದ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಂಪನ್ಮೂಲ ಸಂಗ್ರಹದ ಹಲವು ಮಾರ್ಗೋಪಾಯಗಳ ಬಗ್ಗೆ ಸಿಎಂ ಯಡಿಯೂರಪ್ಪ ಸೋಮವಾರ ಸಂಪುಟ ಸಭೆಯಲ್ಲಿ ಸಚಿವರು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಇದಲ್ಲದೇ. ಲಾಕ್​ಡೌನ್​ ಸಡಿಲಗೊಳಿಸುವ ಸಾಧ್ಯತೆಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು.
ಅನಧಿಕೃತ ಕಟ್ಟಡಗಳ ಕುರಿತು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರಯತ್ನಿಸುವಂತೆ ಸೂಚಿಸಲಾಯಿತು. ನ್ಯಾಯಾಲಯಗಳಲ್ಲಿ ಪ್ರಕರಣ ಇತ್ಯರ್ಥವಾದರೆ ನಾಗರಿಕರಿಗೂ ಅನುಕೂಲವಾಗಲಿದೆ. ಹಾಗೂ ರಾಜ್ಯಕ್ಕೂ ಸಂಪನ್ಮೂಲ ದೊರೆಯಲಿದೆ ಎಂಬ ನಿರ್ಧಾರಕ್ಕೆ ಬರಲಾಯಿತು.
ಇದಲ್ಲದೇ, ಬಿಡಿಎ ವ್ಯಾಪ್ತಿಯಲ್ಲಿರುವ 12 ಸಾವಿರ ಮೂಲೆ ನಿವೇಶನಗಳನ್ನು ಹರಾಜು ಹಾಕಲು ಚಿಂತನೆ ನಡೆಸಲಾಗುತ್ತಿದೆ. ಜತೆಗೆ, ರಾಜ್ಯದ ಇತರ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿಯೂ ಮೂಲೆ ನಿವೇಶನಗಳು ಹಾಗೂ ಖಾಲಿ ಇರುವ ನಿವೇಶನಗಳನ್ನು ಹರಾಜು ಹಾಕಲು ಸಂಪುಟ ಸಭೆ ನಿರ್ಧರಿಸಿದೆ. ಖಾಸಗಿ ಮತ್ತು ಸಹಕಾರಿ ಸಂಘಗಳ ಬಡಾವಣೆ ನಿರ್ಮಾಣ ಹಾಗೂ ನಿವೇಶನಕ್ಕೆ ಸಂಬಂಧಿಸಿದಂತೆ ಕಾನೂನು ತಿದ್ದುಪಡಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಅನುಮತಿಗೆ ಕಾಯುತ್ತಿರುವ ನೂರಾರು ವಸತಿ ನಿರ್ಮಾಣ ಸೊಸೈಟಿಗಳಿಗೆ ಅನುಮತಿ ನೀಡಲು ಸಾಧ್ಯವಾಗುತ್ತದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಮೂಲಸೌಕರ್ಯಗಳಿಗೆ ಬಳಕೆ:ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ 1000 ಕೋಟಿ ರೂಪಾಯಿಗಳನ್ನು ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯ ಅಭಿವೃದ್ಧಿಗೆ ಬಳಸಲು ತೀರ್ಮಾನಿಸಲಾಯಿತು.
ಉಚಿತ ಹಾಲು ವಿತರಣೆ ಮುಂದುವರಿಕೆ:ಕರೊನಾದಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ಉಚಿತ ಹಾಲು ವಿತರಿಸುವುದನ್ನು ಮುಂದಿನ ಒಂದು ವಾರದವರೆಗೆ ವಿಸ್ತರಿಸಲಾಗುವುದು.
ಏಕೀಕೃತ ಪೋರ್ಟಲ್​:ಪ್ರಸ್ತುತ ಕೋವಿಡ್ 19ಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಡಿ ಪೋರ್ಟಲ್ ಗಳನ್ನು ನಿರ್ವಹಿಸಲಾಗುತ್ತಿದ್ದು, ಇವುಗಳನ್ನು ಏಕೀಕೃತ ಪೋರ್ಟಲ್ ವ್ಯವಸ್ಥೆಯಡಿ ತರಲು ತೀರ್ಮಾನಿಸಲಾಯಿತು.
ಕೇಂದ್ರದ ಮಾರ್ಗಸೂಚಿಗೆ ನಿರೀಕ್ಷೆ:ಕೇಂದ್ರದ ಮಾರ್ಗಸೂಚಿ ಬಂದ ಬಳಿಕ ಲಾಕ್​ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಪ್ರಧಾನಿ ನೀಡಿದ ಸೂಚನೆಯನುಸಾರ ಯಾವುದಕ್ಕೆ ವಿನಾಯ್ತಿ ನೀಡಬೇಕೆಂದು ತೀರ್ಮಾನಿಸಲಾಗುವುದು. ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಏಪ್ರಿಲ್​ 30ರೊಳಗಾಗಿ ನಿಮ್ಮವರನ್ನು ಕರೆಯಿಸಿಕೊಳ್ಳಿ: ಭಾರತೀಯರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಯುಎಇ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
