ಬೆಂಗಳೂರು: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್​ಡೌನ್ ಮಾಡಲು ಪೊಲೀಸ್ ಇಲಾಖೆ ಸಜ್ಜಾಗಿದೆ.ಕರೊನಾ ಸೋಂಕು ತಡೆಯುವ ಸಲುವಾಗಿ ಸರ್ಕಾರ ಮಂಗಳವಾರ ರಾತ್ರಿ 8ರಿಂದ ಜುಲೈ 22ರ ಬೆಳಗಿನ ಜಾವ 5 ಗಂಟೆವರೆಗೂ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್​ಡೌನ್ ಮಾಡಲು ಘೋಷಣೆ ಮಾಡಿದೆ.
ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಕಮಿಷನರೇಟ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ಲಾಕ್​ಡೌನ್​ಗೆ ಸಕಲ ಸಿದ್ಧತೆ ನಡೆಸಿದ್ದಾರೆ. ಮಂಗಳವಾರ ರಾತ್ರಿ 8 ಗಂಟೆಯಿಂದಲೇ ಜಿಲ್ಲೆಯ ಎಲ್ಲ ಗಡಿಭಾಗಗಳನ್ನು ಸಂಪೂರ್ಣ ಬಂದ್ ಮಾಡಲಿದ್ದಾರೆ. ಆರೋಗ್ಯ ಸೇವೆ, ದಿನಸಿ ವಸ್ತುಗಳ ಖರೀದಿ ಸೇರಿ ತುರ್ತು ಸೇವೆಗಳನ್ನು ಹೊರತು ಪಡಿಸಿ ಮತ್ಯಾವುದೇ ಕಾರಣಕ್ಕೂ ಜನರು ಹೊರಗಡೆ ಬರುವಂತಿಲ್ಲ. ಮಂಗಳವಾರ ಬೆಳಗ್ಗೆಯೇ ಎರಡೂ ಜಿಲ್ಲೆಗಳಲ್ಲಿ ಐಪಿಸಿ ಸೆಕ್ಷನ್ 144 ಅಡಿ ಪೊಲೀಸ್ ಅಧಿಕಾರಿಗಳು ನಿರ್ಬಂಧ ವಿಧಿಸಲಿದ್ದಾರೆ. ಇದು ಜು.22ರ ಬೆಳಗಿನ ಜಾವದವರೆಗೂ ಜಾರಿಯಲ್ಲಿ ಇರಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಬಿಬಿಎಂಪಿ ಲೆಕ್ಕಾಧೀಕ್ಷಕಿಗೆ ಲೈಂಗಿಕ ಕಿರುಕುಳ
ಭದ್ರತೆಗೆ ಪೊಲೀಸರ ಕೊರತೆ ಇಲ್ಲ:ಕೋವಿಡ್ ಸೋಂಕಿಗೆ ಮತ್ತು ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ ಪೊಲೀಸರಿಗೆ ಚಿಕಿತ್ಸೆ ಮತ್ತು ಕ್ವಾರಂಟೈನ್ ಮಾಡಲಾಗಿದೆ. ಬೆಂಗಳೂರು ನಗರದಲ್ಲಿಯೇ 560 ಪೊಲೀಸರಿಗೆ ಸೋಂಕು ತಗಲಿದೆ. ಇವರೊಂದಿಗೆ ಸಂಪರ್ಕದಲ್ಲಿ ಇದ್ದವರ ಪಟ್ಟಿ ಸಹ ಹೆಚ್ಚಾಗುತ್ತಿದೆ. ಜತೆಗೆ 50 ವರ್ಷ ಮೇಲ್ಪಟ್ಟ ಅಧಿಕಾರಿ/ಸಿಬ್ಬಂದಿಗೆ ರಜೆ ನೀಡಲಾಗಿದೆ. ಆದರೂ ಸಿಬ್ಬಂದಿಗೆ ಕೊರತೆ ಇಲ್ಲವೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಈಗಾಗಲೇ 6 ತಿಂಗಳ ಸೇವೆಗೆ 1,900 ಹೋಂ ಗಾರ್ಡ್​ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಜತೆಗೆ ನಗರದಲ್ಲಿ ಬಹುತೇಕರು ಯುವ ಸಿಬ್ಬಂದಿ ಇದ್ದಾರೆ. ತರಬೇತಿ ಪಡೆಯುತ್ತಿದ್ದ ಪೇದೆಗಳು ಮತ್ತು ಸಬ್​ಇನ್​ಸ್ಪೆಕ್ಟರ್​ಗಳು ಠಾಣೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆಗಾಗಿ ಪೊಲೀಸರ ಕೊರತೆ ಇಲ್ಲ. ಇದಲ್ಲದೆ, ಸಾರ್ವಜನಿಕರು ಸಹ ಸ್ವಯಂಘೋಷಿತ ಬಂದ್ ಮಾಡಿಕೊಳ್ಳುವ ವಿಶ್ವಾಸ ನಮಗಿದೆ. ಹೆಚ್ಚು ಕಡೆ ಪೊಲೀಸರ ಅಗತ್ಯ ಇರುವುದಿಲ್ಲ ಎಂದು ಅಧಿಕಾರಿಗಳು ವಿಜಯವಾಣಿಗೆ ಮಾಹಿತಿ ನೀಡಿದ್ದಾರೆ.
ದಂಡ, ಕೇಸ್ ಖಚಿತ ಲಾಕ್​ಡೌನ್-1ರಲ್ಲಿ ಜಾರಿಯಾಗಿದ್ದ ಎಲ್ಲ ನಿಯಮಗಳು ಈ ಬಾರಿಯೂ ಅನ್ವಯ ಆಗಲಿದೆ. ಅನಗತ್ಯವಾಗಿ ಓಡಾಡುವರನ್ನು ತಪಾಸಣೆ ನಡೆಸಿ ದಂಡ ವಿಧಿಸಲಾಗುತ್ತದೆ. ಗಂಭೀರ ಪ್ರಕರಣವಾದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್ ದಾಖಲಿಸಿ ವಾಹನ ಜಪ್ತಿ ಮಾಡ ಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಗಡಿ ಸಂಪೂರ್ಣ ಬಂದ್ ಮೈಸೂರು ರಸ್ತೆ, ತುಮಕೂರು ರಸ್ತೆ, ಹೊಸೂರು ರಸ್ತೆ, ಕೋಲಾರ, ಹಳೆ ಮದ್ರಾಸ್ ರಸ್ತೆ ಮತ್ತು ಕನಕಪುರ ರಸ್ತೆಗಳಲ್ಲಿ ಎರಡೂ ಜಿಲ್ಲಾ ಪೊಲೀಸರು ಸಮನ್ವಯ ಆಧಾರದ ಮೇಲೆ ಚೆಕ್​ಫೋಸ್ಟ್ ನಿರ್ಮಾಣ ಮಾಡಿಕೊಂಡಿದ್ದಾರೆ. ಜಿಲ್ಲೆಯಿಂದ ಹೊರ-ಒಳ ಬರುವ ವಾಹನಗಳನ್ನು ತಪಾಸಣೆ ನಡೆಸಿ ಕಳುಹಿಸಲಾಗುತ್ತದೆ.
ಹೊಲಿಗೆ ಯಂತ್ರ ಆಮದು: 1.44 ಕೋಟಿ ರೂಪಾಯಿ ಕಳೆದುಕೊಂಡ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 12 =
Remember me
