ಬೆಂಗಳೂರು:ಕನ್ನಡ ನಾಮಫಲಕ ಕಡ್ಡಾಯ ಸುಗ್ರೀವಾಜ್ಞೆ ವಾಪಸು ಕಳುಹಿಸಿರುವ ರಾಜ್ಯಪಾಲರು ಈ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ:ನೀನು ನನ್ನ ಮನಸ್ಸು ಸೆಳೆದಿದ್ದೀಯಾ…ಎಂದ ಸ್ಟಾರ್​ ಕ್ರಿಕೆಟಿಗ​ ! ಹೀಗೆ ಹೇಳಿದ್ದು ಯಾರಿಗೆ ?ಕನ್ನಡ ನಾಮಫಲಕ ಕಡ್ಡಾಯ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಮಾಡದೆ ವಾಪಸ್ ಕಳುಹಿಸಿರುವ ವಿಚಾರವಾಗಿ ಮಾಧ್ಯಮದವರು ವಿಧಾನಸೌಧದ ಬಳಿ ಬುಧವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ಕನ್ನಡ ಭಾಷೆಯು ಭಾವಾನಾತ್ಮಕ ವಿಚಾರ. ಕರ್ನಾಟಕದಲ್ಲಿ ಇದ್ದೀರಿ, ನಮ್ಮ ರಾಜ್ಯಪಾಲರಾಗಿದ್ದೀರಿ. ಸರ್ಕಾರದ ಇಂತಹ ನೀತಿಯಲ್ಲಿ ತಪ್ಪು ಕಂಡು ಹಿಡಿಯಬಾರದು. ನಾಗರಿಕರು, ಇತರೇ ಪಕ್ಷದವರು ಈ ವಿಚಾರದಲ್ಲಿ ತಪ್ಪುಗಳಿವೆ ಎಂದು ಅವರ ಗಮನಕ್ಕೆ ತಂದಿದ್ದಾರೆಯೇ? ಯಾರೂ ಆಕ್ಷೇಪ ಸಲ್ಲಿಸಿಲ್ಲ. ಆದ ಕಾರಣ ಮತ್ತೊಮ್ಮೆ ಆದೇಶ ಪರಿಶೀಲಿಸುವಂತೆ ಸರ್ಕಾರದ ಪರವಾಗಿ ರಾಜ್ಯಪಾಲರಲ್ಲಿ ಮನವಿ ಮಾಡುತ್ತೇನೆ ಎಂದರು.
ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು ಎಂದು ಹೊರಡಿಸಿದ್ದ ಸುಗ್ರಿವಾಜ್ಞೆಯನ್ನು ರಾಜ್ಯಪಾಲರು ಸಹಿ ಹಾಕದೆ ಏಕೆ ವಾಪಸ್ಸು ಕಳುಹಿಸಿದ್ದಾರೆ ಎಂಬುದು ತಿಳಿದಿಲ್ಲ. ರಾಜ್ಯಪಾಲರು ವಿಧಾನಸಭೆ ಅಧಿವೇಶನ ನಡೆಯುವ ತನಕ ಕಾಯಬಾರದಿತ್ತು. ಈಗಲೇ ಸಹಿ ಮಾಡಬಹುದಿತ್ತು ಎಂದು ಹೇಳಿದರು.
ದೇಶದ ರಕ್ಷಣೆಯ ವಿಚಾರದಲ್ಲಿ ನಮ್ಮ ಸರ್ಕಾರಗಳು ಬದ್ಧವಾಗಿರುವಂತೆ, ರಾಜ್ಯದ ಗೌರವದ ವಿಚಾರದಲ್ಲೂ ನಾವು ಬದ್ಧವಾಗಿದ್ದೇವೆ. ನಾಮ ಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು ಎಂದು ಸುಗ್ರಿವಾಜ್ಞೆ ಹೊರಡಿಸಲಾಗಿತ್ತು. ಕನ್ನಡ ಭಾಷೆ, ಅಸ್ಮಿತೆ ಮತ್ತು ಸಂಸ್ಕೃತಿ ರಕ್ಷಣೆ ಎಂದು ಇದನ್ನು ಕರೆಯುತ್ತೇವೆ ಎಂದು ಹೇಳಿದರು.
ಕನ್ನಡದ ವಿಚಾರವಾಗಿ ಪ್ರತಿಭಟನೆ, ಹೋರಾಟಗಳು ನಡೆಯುತ್ತಿದ್ದವು. ಇದನ್ನು ಗಮನದಲ್ಲಿ ಇಟ್ಟುಕೊಂಡು ನಾವು ಕನ್ನಡಪರ ತೀರ್ಮಾನ ತೆಗೆದುಕೊಂಡಿದ್ದೆವು ಎಂದರು.
ಅಧಿವೇಶನದಲ್ಲಿ ಮಂಡನೆ:“ನಾಮಫಲಗಳಲ್ಲಿ ಶೇ. 60 ಕನ್ನಡ ಇರಬೇಕು ಎನ್ನುವ ವಿಧೇಯಕವನ್ನು ವಿಧಾನಸಭೆ ಅಧಿವೇಶನಲ್ಲಿ ಮಂಡಿಸಿ ಜಾರಿಗೆ ತರುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಇನ್ನು 10-15 ದಿನಗಳಲ್ಲಿ ಅಧಿವೇಶನ ಆರಂಭವಾಗಲಿದ್ದು, ಈ ವಿಧೇಯಕ ಮಂಡನೆಯಾಗಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಶಾಸಕ ಬಾಲಕೃಷ್ಣ ಹೇಳಿಕೆಗೆ ಸಚಿವ ಎಂಬಿ ಪಾಟೀಲ್​ ವಿರೋಧ; ಹೇಳಿಕೆ ಸಮರ್ಥಿಸಿಕೊಂಡ ಡಿಕೆಶಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
