ಬೆಂಗಳೂರು:ಗ್ರಾಮ ಸ್ವರಾಜ್​ ಸಮಾವೇಶ, ಪ್ರಜಾಪ್ರತಿನಿಧಿ ಸಭೆಗಳನ್ನು ನಡೆಸಿ ಪಕ್ಷಾತೀತವಾಗಿ ನಡೆಯಬೇಕಿದ್ದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜಕೀಯ ಬೆರೆಸುವುದನ್ನು ರಾಜ್ಯ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.
ಗ್ರಾಪಂ ಸದಸ್ಯತ್ವ ಹರಾಜು ಹಾಕುವುದರ ಬಗ್ಗೆ ಕಠಿಣ ಕ್ರಮ ಕೈಗೊಂಡ ಬೆನ್ನಲ್ಲೇ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ ತಡೆಯಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.
ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವ, ಸಭೆ- ಸಮಾರಂಭ ನಡೆಸುವ, ರಾಜಕೀಯ ಮುಖಂಡರ ಭಾವಚಿತ್ರಗಳನ್ನು ಕರಪತ್ರಗಳಲ್ಲಿ ಮುದ್ರಿಸಿ ಪಕ್ಷಗಳ ಬಾವುಟ ಮತ್ತು ಚಿಹ್ನೆ ಬಳಸಿಕೊಂಡು ಪ್ರಚಾರ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.ಕರ್ನಾಟಕ ಗ್ರಾಮ ಸ್ವರಾಜ್​ ಮತ್ತು ಪಂಚಾಯತ್​ ರಾಜ್​ ಅಧಿನಿಯಮ 1993ರ ಪ್ರಕರಣ 7(2)ರಂತೆ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಆಯೋಗ ಮುಕ್ತ ಚಿಹ್ನೆಗಳನ್ನು ಹಂಚಿಕೆ ಮಾಡಲಿದೆ.
ಆಯೋಗ ಏನು ಹೇಳಿದೆ?
ಈ ನಿಯಮ ಉಲ್ಲಘಿಸಿರುವುದು ಕಂಡು ಬಂದಲ್ಲಿ ಅಂತಹ ಚುನಾವಣಾ ಪ್ರಚಾರ ಸಾಮಗ್ರಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಜತೆಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಚುನಾವಣಾ ಆಯೋಗ ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದೆ.
ಇಂದು ರಾತ್ರಿಯಿಂದಲೇ ಸಾರಿಗೆ ಬಸ್​ ಸಂಚಾರ ಆರಂಭ

https://www.vijayavani.net/love-case-suicide/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + twelve =
Remember me
