ಬೆಂಗಳೂರು:ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಅಧಿಸೂಚನೆ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿರುವ ಆದೇಶ ಪ್ರಶ್ನಿಸಿ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ.
ಮೀಸಲಾತಿ ನಿಗದಿಪಡಿಸಿ ಸರ್ಕಾರ ಅ.8ರಂದು ಹೊರಡಿಸಿದ್ದ ಅಧಿಸೂಚನೆ ರದ್ದುಕೋರಿ ಸಲ್ಲಿಕೆಯಾಗಿದ್ದ 25 ಪ್ರತ್ಯೇಕ ಅರ್ಜಿಗಳನ್ನು ನ.19ರಂದು ಮಾನ್ಯ ಮಾಡಿದ್ದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಪೀಠ, ಸರ್ಕಾರದ ಅಧಿಸೂಚನೆ ರದ್ದುಪಡಿಸಿತ್ತು. ಮೇಲ್ಮನವಿ ಸಲ್ಲಿಸಲು ಸರ್ಕಾರ ಕಾಲಾವಕಾಶ ಕೋರಿದ್ದ ಹಿನ್ನೆಲೆಯಲ್ಲಿ, ತನ್ನ ಆದೇಶಕ್ಕೆ 10 ದಿನಗಳ ವರೆಗೆ ತಡೆಯಾಜ್ಞೆ ನೀಡಿತ್ತು. ಶನಿವಾರ ಏಕಸದಸ್ಯ ಪೀಠದ ಆದೇಶ ರದ್ದುಕೋರಿ ಮೇಲ್ಮನವಿ ಸಲ್ಲಿಸಿರುವ ಸರ್ಕಾರ, ಅರ್ಜಿಯನ್ನು ಶೀಘ್ರ ವಿಚಾರಣೆಗೆ ಕೈಗೆತ್ತುಕೊಳ್ಳುವಂತೆ ಮನವಿ ಮಾಡಿ ಮೆಮೋ ಸಹ ಸಲ್ಲಿಸಿದೆ. ಮಂಗಳವಾರ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಇದನ್ನೂ ಓದಿ :ನಗ್ರೋಟಾ ಉಗ್ರರ ಉಸ್ತುವಾರಿ ನೋಡ್ಕೊಳ್ತಿದ್ದುದು ಜೆಇಎಂ ಮುಖ್ಯಸ್ಥ ಮಸೂದ್ ಅಜರ್​ನ ಸಹೋದರ!
ಪ್ರಕರಣವೇನು?:ಮೀಸಲಾತಿ ಕಲ್ಪಿಸುವ ವೇಳೆ ಆವರ್ತನೆ (ರೊಟೇಷನ್) ನಿಯಮ ಅನುಸರಿಸಲಾಗಿಲ್ಲ ಎಂದು ಆಕ್ಷೇಪಿಸಿ ಹಾಸನ, ಅರಸಿಕೇರೆ, ಕೊಪ್ಪಳ, ಶಿಡ್ಲಘಟ್ಟ, ಹರಿಹರ ನಗರಸಭೆ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪುರಸಭೆ, ಕೊಡಗು ಜಿಲ್ಲೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸೇರಿ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಸರ್ಕಾರದ ಅಧಿಸೂಚನೆ ರದ್ದುಪಡಿಸಿ, 4 ವಾರಗಳಲ್ಲಿ ರೊಟೇಷನ್ ಅನುಸಾರ ಮರು ಅಧಿಸೂಚನೆ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು.
ಮಿಟೂ ಕೇಸ್ – ಅಕ್ಬರ್ ಮತ್ತು ರಮಣಿ ನಡುವೆ ಸಂಧಾನಕ್ಕೇನಾದರೂ ಅವಕಾಶ ಇದೆಯೇ? – ಕೋರ್ಟ್ ಪ್ರಶ್ನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 14 =
Remember me
