ಬೆಂಗಳೂರು:ರಾಜ್ಯದಲ್ಲಿ ಗೃಹಜ್ಯೋತಿ(Gruha Jyothi)ನೋಂದಣಿಗೆ ಹಣ ವಸೂಲಿ ಮಾಡಿರುವ ಆರೋಪಗಳು ಕೇಳಿಬಂದ ಹಿನ್ನೆಲೆ ಇದೀಗ ರಾಜ್ಯ ಸರ್ಕಾರ(State Government)ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.
ಇದನ್ನೂ ಓದಿ:ಬಿಬಿಎಂಪಿ ವಾರ್ಡ್​ ಪುನರ್​ವಿಂಗಡಣೆ; ಸಮಿತಿ ರಚಿಸಿ ಸರ್ಕಾರ ಆದೇಶ
ಗೃಹಜ್ಯೋತಿ ನೋಂದಣಿಗೆ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಆರೋಪ ಕೇಳಿಬಂದಿದ್ದು, ಹಣ ವಸೂಲಿ ಮಾಡುವ ಕೇಂದ್ರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಗೃಹಜ್ಯೋತಿ ನೋಂದಣಿ ಸಂಪೂರ್ಣ ಉಚಿತವಾಗಿದ್ದು, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾ ಶುಲ್ಕ 20 ರೂ. ಮಾತ್ರ ವಿಧಿಸಲಾಗುತ್ತಿದೆ. ಸೇವಾ ಶುಲ್ಕದ ಹೊರತಾಗಿ ಹೆಚ್ಚಿನ ಹಣವನ್ನು ಸಿಬ್ಬಂದಿಗಳು ಕೇಳಿದ್ದಲ್ಲಿ, ಸಾರ್ವಜನಿಕರು 1912 ಸಹಾಯವಾಣಿಗೆ ಕರೆ ಮಾಡಿ ದೂರು(Complaint)ದಾಖಲಿಸಬಹುದು. ಹಣ ವಸೂಲಿ ಮಾಡುವ ಕೇಂದ್ರಗಳ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − seven =
Remember me
