ಬೆಳಗಾವಿ:ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ​ ಸರ್ಕಾರ ಪರಿಹಾರ ಘೋಷಿಸಿದೆ.
ಸಿಎಂ ಸಿದ್ದರಾಮಯ್ಯ ಅವರು ಸಂತ್ರಸ್ತ ಮಹಿಳೆಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ರಾಜ್ಯ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ಮಾತ್ರವಲ್ಲದೇ ಬೆಳಗಾವಿ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಸಚಿವ ಸತೀಶ್​ ಜಾರಕಿಹೊಳಿ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಅವರ ಮೇಲೆ ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಲಾಗಿತ್ತು. ಈ ಪ್ರಕರಣವನ್ನು ಸದನದಲ್ಲಿ ಚರ್ಚಿಸುವಂತೆ ಬಿಜೆಪಿ ಹೈಕಮಾಂಡ್​​ ರಾಜ್ಯ ನಾಯಕರಿಗೆ ಸೂಚನೆ ನೀಡಿತ್ತು. ಸೂಚನೆ ಬೆನ್ನಲ್ಲೇ ಇಂದು ಬೆಳಗಾವಿಯಲ್ಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ:ಹಣ ಕೊಡಲಿಲ್ಲವೆಂದು ಹೆತ್ತ ತಾಯಿಯ ಹತ್ಯೆ; ಸೂಟ್​ಕೇಸ್​ಗೆ ತುಂಬಿ ಎಸೆದ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಸಂಸದೆ ಅಪ್ರಜಿತಾ ಸಾರಂಗಿ, ಸುನೀತಾ ದುಗ್ಗಲ್, ಲಾಕೆಟ್ ಚಟರ್ಜಿ, ರಂಜಿತಾ ಕೋಲಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾ ಅವರೊನ್ನಳಗೊಂಡ ಸತ್ಯಶೋಧನಾ ಸಮಿತಿಯನ್ನು ರಚಿಸಿದ್ದು, ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದ ದುಂಡಪ್ಪ ನಾಯಕ್ ಅನ್ನೋ ಯುವಕ ಮತ್ತು ಪ್ರಿಯಾಂಕ ಎಂಬುವ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಇದಕ್ಕೆ ಯುವತಿ ಕುಟುಂಬಸ್ಥರ ವಿರೋಧವಿತ್ತು. ಯುವತಿ ಪ್ರಿಯಾಂಕಾಗೆ ಬೇರೊಂದು ಯುವಕನ ಜೊತೆ ಮದುವೆ ಮಾಡಿಸಲು ಮುಂದಾಗಿದ್ರು. ಆದರೆ, ರಾತ್ರಿಯೇ ದುಂಡಪ್ಪ ಮತ್ತು ಪ್ರಿಯಾಂಕ ಇಬ್ಬರೂ ಊರು ಬಿಟ್ಟು ಓಡಿ ಹೋಗಿದ್ದರು. ಇದರಿಂದ ಕೆರಳಿದ ಪ್ರಿಯಾಂಕಾ ಕುಟುಂಬಸ್ಥರು, ದುಂಡಪ್ಪನ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದರು. ಅಲ್ಲದೇ ದುಂಡಪ್ಪ ತಾಯಿಯ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ನಡೆಸಿ ಬಳಿಕ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು. ಘಟನೆ ಸಂಬಂಧ ಪೊಲೀಸರ್ಉ ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ನಾಪತ್ತೆಯಾಗಿದ್ದ ಜೋಡಿ ಬೆಳಗಾವಿ ಬೆಳಗಾವಿ ಪೊಲೀಸ್​ ಆಯುಕ್ತ ಮುಂದೆ ಹಾಜರಾಗಿ ತಮಗೆ ರಕ್ಷಣೆ ನೀಡುವಂತೆ ಕೋರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + fourteen =
Remember me
