ಬೆಂಗಳೂರು: ಯಲಹಂಕದ ಬಳಿ ನಿರ್ಮಿಸಲಾಗಿರುವ ಫ್ಲೈಓವರ್‌ಗೆ ಸ್ವಾತಂತ್ರೃವೀರ ಸಾವರ್ಕರ್ ಅವರ ಹೆಸರಿಟ್ಟಿದ್ದು ವಿವಾದದ ಸ್ವರೂಪ ಪಡೆಯುತ್ತಿದ್ದಂತೆಯೇ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ತಮ್ಮ ನಿರ್ಧಾರವನ್ನು ಹಿಂತೆಗೆದುಕೊಂಡಿವೆ.
ಗುರುವಾರ ನಡೆಯಲಿರುವ ಮೇಲ್ಸೇತುವೆ ಉದ್ಘಾಟನಾ ಕಾರ‌್ಯಕ್ರಮದ ಕುರಿತು ಮಾಧ್ಯಮ ಸಂಸ್ಥೆಗಳಿಗೆ ಈ ಮೊದಲು ಕಳಿಸಿದ್ದ ಆಮಂತ್ರಣ ಪತ್ರಿಕೆಯಲ್ಲಿ ‘ವೀರ ಸಾವರ್ಕರ್ ಮೇಲ್ಸೇತುವೆ’ ಎಂದು ಸ್ಪಷ್ಟವಾಗಿ ನಮೂದಿಸಲಾಗಿತ್ತು. ಬುಧವಾರ ಸಂಜೆ ಹೊರಡಿಸಿರುವ ಪರಿಷ್ಕೃತ ಪತ್ರಿಕಾ ಹೇಳಿಕೆಯಲ್ಲಿ ಮತ್ತು ಆಮಂತ್ರಣ ಪತ್ರಿಕೆಯಲ್ಲಿ ವೀರ ಸಾವರ್ಕರ್ ಹೆಸರನ್ನು ತೆಗೆದುಹಾಕಲಾಗಿದೆ.
ಇದನ್ನೂ ಓದಿಮೇಲ್ಸೇತುವೆಗೆ ಸಾವರ್ಕರ್ ಹೆಸರು: ಪ್ರತಿಪಕ್ಷ ನಾಯಕರ ವಿರೋಧ
ಮೇ 28ರ ಬೆಳಗ್ಗೆ 9.30ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೇಲ್ಸೇತುವೆ ಉದ್ಘಾಟಿಸಲಿದ್ದು, ಸ್ಥಳೀಯ ಶಾಸಕರು, ಮಹಾಪೌರರು ಭಾಗವಹಿಸಲಿದ್ದಾರೆ ಎಂಬುದನ್ನಷ್ಟೇ ಅದರಲ್ಲಿ ತಿಳಿಸಲಾಗಿದೆ.
ಈ ವಿಷಯದಲ್ಲಿ ಪ್ರತಿಪಕ್ಷಗಳ ನಾಯಕರ ಆಕ್ಷೇಪಕ್ಕೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಮಣಿದವೇ ಎಂಬ ಅನುಮಾನ ಮೂಡಿದೆ. ‘ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡುವುದು ಅನಗತ್ಯ. ನಮ್ಮ ರಾಜ್ಯದ ಹೋರಾಟಗಾರರ ಹೆಸರಿಡಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬುಧವಾರ ಬೆಳಗ್ಗೆಯಷ್ಟೇ ಒತ್ತಾಯಿಸಿದ್ದರು. ಇದಕ್ಕೆ ಸಚಿವ ಸಿ.ಟಿ. ರವಿ ಸೇರಿದಂತೆ ಕೆಲವು ಬಿಜೆಪಿ ನಾಯಕರು ತಿರುಗೇಟನ್ನೂ ನೀಡಿದ್ದರು.
ಇದನ್ನೂ ಓದಿಫ್ಲೈಓವರ್‌ಗೆ ಸಾವರ್ಕರ್ ಹೆಸರು: ಪ್ರತಿಪಕ್ಷ ನಾಯಕರಿಗೆ ಸಿ.ಟಿ. ರವಿ ತಿರುಗೇಟು
ವಿಶ್ವಸನೀಯ ಮೂಲಗಳ ಪ್ರಕಾರ, ‘‘ಯಾರ ಹೆಸರಿಡಬೇಕೆಂಬುದನ್ನು ನಂತರ ನಿರ್ಧಾರ ಮಾಡೋಣ. ಸದ್ಯಕ್ಕೆ ಸಾವರ್ಕರ್ ಹೆಸರನ್ನು ಇಡದೇ ಮೇಲುಸೇತುವೆ ಉದ್ಘಾಟನಾ ಕಾರ‌್ಯಕ್ರಮ ಆಯೋಜಿಸಿ’’ ಎಂಬುದಾಗಿ ಮುಖ್ಯಮಂತ್ರಿ ಕಚೇರಿಯಿಂದ ಬಿಬಿಎಂಪಿಗೆ ಮೌಖಿಕ ಆದೇಶ ನೀಡಲಾಗಿದೆ ಎಂದು ತಿಳಿದುಬಂದಿದೆ.
ಇನ್ನೊಂದು ಮೂಲದ ಪ್ರಕಾರ, ಯಾವುದೇ ಮೇಲುಸೇತುವೆಗೆ ಯಾರದೇ ಹೆಸರಿಡಬೇಕೆಂದರೂ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಬೇಕಾಗುತ್ತದೆ. ಅದಕ್ಕೆ ಮುನ್ನ ಜನರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಬೇಕಾಗುತ್ತದೆ. ಈ ಕಾನೂನು ಪ್ರಕ್ರಿಯೆ ಇನ್ನೂ ಪೂರ್ಣಗೊಳ್ಳದೇ ಆಹ್ವಾನ ಪತ್ರಿಕೆಯಲ್ಲಿ ಸಾವರ್ಕರ್ ಹೆಸರು ನಮೂದಿಸುವುದು ತಪ್ಪಾಗುತ್ತದೆ. ಆದ್ದರಿಂದ ಸದ್ಯಕ್ಕೆ ಹೆಸರನ್ನು ಹಿಂತೆಗೆದುಕೊಳ್ಳಲಾಗಿದೆ. ಪ್ರಕ್ರಿಯೆ ಪೂರ್ಣಗೊಂಡ ನಂತರ ಸಾವರ್ಕರ್ ಹೆಸರನ್ನೇ ಇಡಲಾಗುತ್ತದೆ ಎಂದು ಹೇಳಲಾಗಿದೆ.
ಬಿಜೆಪಿ ರಾಜ್ಯ ಅಧ್ಯಕ್ಷ ಕಟೀಲ್ ವಿರುದ್ಧ ಪೊಲೀಸರಿಗೆ ಕಾಂಗ್ರೆಸ್ ನಾಯಕರ ದೂರು

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:1 × 3 =
Remember me
