ಚನ್ನಪಟ್ಟಣ:
ಸಂಕ್ರಾಂತಿ ವೇಳೆಗೆ ಸೂರ್ಯ ಪಥ ಬದಲಿಸುವ ರೀತಿ, ರಾಜಕೀಯ ಪಥ ಬದಲಾವಣೆಯಾಗಲಿದೆ. ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಇರೋದು ಡೌಟ್ ಎನ್ನುವ ಮೂಲಕ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಗಾಂಧಿಜಯಂತಿ ಪ್ರಯುಕ್ತ ನಗರದಲ್ಲಿ ಸ್ವಚ್ಚತಾ ಅಭಿಯಾನ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023 ಮುಗಿದ ಬಳಿಕ ರಾಜಕೀಯ ಬದಲಾವಣೆ ನಿರೀಕ್ಷೆ ಇದೆ.
ಪ್ರಸಕ್ತ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ನಾಯಕರ ನಡೆಯೇ ಇದಕ್ಕೆ ಕಾರಣ. ಕಾಂಗ್ರೆಸ್ ಅಸಮಾಧಾನಿತ ಶಾಸಕರು ವಿಮುಖವಾಗಿ ಯೋಚನೆ ಮಾಡುತ್ತಿದ್ದಾರೆ.
ಕೆಲ ಕಾಂಗ್ರೆಸ್ ಶಾಸಕರು ವೈಯಕ್ತಿಕವಾಗಿ ನನ್ನ ಜೊತೆ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರು ಡಮ್ಮಿಗಳಾಗಿದ್ದಾರೆ‌. ಅವರಿಗೆ ಶಾಸಕರ ಕಾರ್ಯ ನಿರ್ವಹಿಸಲು ಆಗುತ್ತಿಲ್ಲ. ಈ ಎಲ್ಲಾ ಕಾರಣಗಳಿಂದ ಶಾಸಕರು ಅಸಮಾಧಾನ ವಾಗಿದ್ದಾರೆ ಎಂದರು.
ಸರ್ಕಾರ ಐದು ಗ್ಯಾರಂಟಿ ಕೊಟ್ಟಿದೆ. ಹಾಗಾಗಿ, ಅನುದಾನ ಕೊಡಲ್ಲ ಅಂತ ಹೇಳಿದ್ದಾರೆ‌. ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರದಲ್ಲಿ ದುಡ್ಡಿಲ್ಲ. ಹೀಗಾಗಿ, ಕಾಂಗ್ರೆಸ್ ಶಾಸಕರು ನಿರುದ್ಯೋಗಿಗಳಾಗಿದ್ದಾರೆ‌. ಅವರಿಗೆ ರಾಜಕೀಯ ಭವಿಷ್ಯದ ಆತಂಕ ಇದೆ.
ಹಾಗಾಗಿ, ಇದರ ಪರಿಣಾಮವನ್ನ ಸಂಕ್ರಾಂತಿ ವೇಳೆಗೆ ಎಲ್ಲರೂ ನೋಡುತ್ತೀರಾ? ನಾವು ಯಾವುದೇ ರೀತಿಯ ಆಪರೇಷನ್ ಮಾಡುತ್ತಿಲ್ಲ, ನಮ್ಮ ಸಂಪರ್ಕದಲ್ಲಿ ಯಾರೂ ಇಲ್ಲ. ಡಿಕೆಶಿ ರೀತಿ ಆಪರೇಷನ್ ಹಸ್ತದ ಕೆಲಸವನ್ನೂ ನಾವು ಮಾಡಲ್ಲ. ಆದರೆ, ಸದ್ಯ ನನಗಿರುವ ಮಾಹಿತಿ ಪ್ರಕಾರ ಈ ವಿಚಾರ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಖಾಸಗಿಯಾಗಿ ಸಿಕ್ಕಾಗ ಕೆಲವರು ನೋವನ್ನ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಭವಿಷ್ಯ ನುಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
