ಬೆಂಗಳೂರು:ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ಇನ್ನು ಮುಂದೆ ಮರುಮೌಲ್ಯಮಾಪನದಲ್ಲಿ ವಿದ್ಯಾರ್ಥಿಯು ಮುಖ್ಯ ಪರೀಕ್ಷೆಯಲ್ಲಿ ಪಡೆದಿರುವುದಕ್ಕಿಂತ ಒಂದು ಅಂಕ ಹೆಚ್ಚು ಬಂದರೂ ಪರಿಗಣಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.2023ರ ಮಾರ್ಚ್‌ನಲ್ಲಿ ನಡೆಯುವ 'ವಾರ್ಷಿಕ ಪರೀಕ್ಷೆ'ಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ. (1/3)— B.C Nagesh (@BCNagesh_bjp)February 9, 2023
ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.2023ರ ಮಾರ್ಚ್‌ನಲ್ಲಿ ನಡೆಯುವ 'ವಾರ್ಷಿಕ ಪರೀಕ್ಷೆ'ಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ. (1/3)
2023ರ ಮಾರ್ಚ್‌ನಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಯಿಂದಲೇ ಈ ಹೊಸ ನಿಯಮ ಅನ್ವಯವಾಗಲಿದೆ. ಹಾಲಿ ಇರುವ ನಿಯಮದ ಪ್ರಕಾರ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಕನಿಷ್ಠ 6 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳು ಬಂದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಅದಕ್ಕಿಂತ ಕಡಿಮೆ ಅಂಕಗಳು ಬಂದಲ್ಲಿ ಪರಿಗಣಿಸುತ್ತಿರಲಿಲ್ಲ.
ಆದರೆ, ಹೊಸ ನಿಯಮಗಳ ಪ್ರಕಾರ ಪ್ರತಿ ಅಂಕವನ್ನೂ ಪರಿಗಣಿಸಲಾಗುತ್ತದೆ ಮತ್ತು ಶುಲ್ಕವನ್ನು ವಾಪಸ್ ನೀಡಲಾಗುತ್ತದೆ. ಈ ಸಂಬಂಧ ಶೀಘ್ರದಲ್ಲೇ ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮಗಳು-1997ಕ್ಕೆ ತಿದ್ದುಪಡಿ ತರಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿಯಲ್ಲಿ ಈಗಾಗಲೇ ಈ ನಿಯಮ ಜಾರಿಯಲ್ಲಿದ್ದು, ಇದನ್ನು ದ್ವಿತೀಯ ಪಿಯುಸಿಗೂ ಅಳವಡಿಸಿಕೊಳ್ಳಲಾಗಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen − 4 =
Remember me
