ಬೆಂಗಳೂರು:ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಇದನ್ನೂ ಓದಿ:ಪ್ರಜ್ವಲ್‌ ರೇವಣ್ಣ ಬಗ್ಗೆ ಸಹನೆ ತೋರಬೇಕಾಗಿಲ್ಲ: ಕಾಂಗ್ರೆಸ್‌ನ ನಡೆಯನ್ನು ಪ್ರಶ್ನಿಸಿದ ಪ್ರಧಾನಿ ಮೋದಿ
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ‘‘ಎಸ್​ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್’’ ಎಂದು ರಾಜ್ಯ ಬಿಜೆಪಿ ನಾಯಕ ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ. ಇದು ಅಪರಾಧಿಗಳನ್ನು ರಕ್ಷಿಸುವ ದುರುದ್ದೇಶದಿಂದ ತನಿಖೆಯ ಹಾದಿ ತಪ್ಪಿಸಲು ಮಾಡಿರುವ ಕುತಂತ್ರವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಎಸ್​ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಈ ಉದ್ದೇಶದಿಂದಲೇ ಆಯ್ದ ದಕ್ಷ ಅಧಿಕಾರಿಗಳನ್ನು ಸೇರಿಸಿಕೊಂಡು ಎಸ್ ಐಟಿ ರಚಿಸಲಾಗಿದೆ ಎಂದರು.
ಈ ಪ್ರಕರಣದಿಂದಾಗಿ ಪ್ರಧಾನಿ ನರೇಂದ್ರ ಅವರ ಹೆಸರು ಹಾಳಾಗುತ್ತಿದೆ ಎಂದು ಬಿಜೆಪಿ ನಾಯಕರು ಈಗ ಗೋಳಾಡುವುದರಿಂದ ಏನೂ ಪ್ರಯೋಜನವಾಗದು, ಜೆಡಿ(ಎಸ್) ಜೊತೆ ಮೈತ್ರಿ ಮಾಡಿಕೊಡುವಾಗಲೇ ಇದನ್ನು ಯೋಚನೆ ಮಾಡಬೇಕಾಗಿತ್ತು ಎಂದು ಬಿಜೆಪಿ ವಿರುದ್ಧ ಗುಡುಗಿದ್ದಾರೆ.
ಎಸ್‌ಐಟಿ ತನಿಖೆಯ ಯಶಸ್ಸು ಈಗ ಸಂಪೂರ್ಣವಾಗಿ ಕೇಂದ್ರ ಸರ್ಕಾರ ನೀಡುವ ಸಹಕಾರವನ್ನು ಅವಲಂಬಿಸಿದೆ. ವಿದೇಶದಲ್ಲಿದ್ದಾನೆ ಎಂದು ಹೇಳಲಾದ ಆರೋಪಿ ಪ್ರಜ್ವಲ್ ರೇವಣ್ಣನವರನ್ನು ಭಾರತಕ್ಕೆ ಕರೆತರಲು ಸಹಕಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ. ಜೆಡಿಎಸ್ ಜೊತೆ ಈಗಲೂ ರಾಜಕೀಯ ಮೈತ್ರಿ ಹೊಂದಿರುವ ಕೇಂದ್ರ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಪ್ರಜ್ವಲ್‌ ರೇವಣ್ಣ ಬಗ್ಗೆ ಸಹನೆ ತೋರಬೇಕಾಗಿಲ್ಲ: ಕಾಂಗ್ರೆಸ್‌ನ ನಡೆಯನ್ನು ಪ್ರಶ್ನಿಸಿದ ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
