ಬೆಂಗಳೂರು:ಕೇಂದ್ರ ಸರ್ಕಾರ ಜಾರಿಗೆ ತಂದ ಹೊಸ 3 ಕಾನೂನುಗಳನ್ನು ರಾಜ್ಯ ಸರ್ಕಾರ ತಾತ್ವಿಕ ವಿರೋಧ ವ್ಯಕ್ತಪಡಿಸಿದ್ದು, ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಈ ಕಾಯ್ದೆಗಳಿಗೆ ತಿದ್ದುಪಡಿ ತರಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ ಬದಲಾವಣೆ ಮಾಡಿ ಹೊಸ ಕಾನೂನು ಜಾರಿಗೆ ತಂದಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಮಸೂದೆ ಅಂಗೀಕರಿಸಿ, ಈಗ ಜಾರಿ ಮಾಡುತ್ತಿರುವುದು ಅಸಂಬದ್ಧ ಕ್ರಮವಾಗಿದೆ. ಹಾಗಾಗಿ ಸರ್ಕಾರ ಈ ಮೂರು ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಈ ಕಾಯ್ದೆ ಜಾರಿಗೆ ಮುನ್ನ 2023 ರಲ್ಲಿ ಗೃಹ ಸಚಿವ ಅಮಿತ್ ಶಾ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಈ ಕಾನೂನುಗಳ ಕುರಿತು ಪರಿಶೀಲನೆ, ಸಲಹೆ ಸೂಚನೆ ಕೇಳಿದ್ದರು. ಆಗ ಸಿಎಂ ನಮಗೊಂದು ಪತ್ರ ಬರದು ಈ ಕಾನೂನುಗಳ ಕುರಿತು ತಜ್ಞರ ಸಮಿತಿ ರಚನೆ ಮಾಡಿ ವರದಿ ನೀಡಲು ಸೂಚಿಸಿದ್ದರು. ಹೀಗಾಗಿ ನಾವು ತಜ್ಞರ ಸಮಿತಿ ವರದಿ ಹಾಗೂ ನನ್ನ ಅಭಿಪ್ರಾಯ ತಿಳಿಸಿ ಸಿಎಂಗೆ ಪತ್ರ ಕಳಿಸಿದ್ದೆ. ಇದನ್ನು ಉಲ್ಲೇಖಿಸಿ ಅಮಿತ್ ಶಾ ಗೆ ಸಿದ್ದರಾಮಯ್ಯ ಪತ್ರ ಬರೆದು, ವರದಿಯನ್ನು ನೀಡಿದ್ದರು. ನಾವು ಆ ಸುಧೀರ್ಘ ಪತ್ರದಲ್ಲಿ ಒಟ್ಟು 23 ಸಲಹೆಗಳನ್ನು ನೀಡಿದ್ದೆವು. ಆದರೆ ಕೇಂದ್ರ ಸರ್ಕಾರ ನಮ್ಮ ಯಾವುದೇ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ. ಈಗ ಮಂಡನೆ ಮಾಡಿದ ಮಸೂದೆಯನ್ನೇ ಯಥಾವತ್ತಾಗಿ ಜಾರಿ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಹೊಸ ಕಾನೂನಿನಲ್ಲಿ ಅನುಕೂಲಗಳಿಗಿಂತ ಅನಾನುಕೂಲಗಳೇ ಹೆಚ್ಚು ಇವೆ. ಜತೆಗೆ ಗೊಂದಲ ಮೂಡಿಸುವ ತಿದ್ದುಪಡಿಗಳು ಇವಾಗಿವೆ. ಜನಾಭಿಪ್ರಾಯ ನಿರ್ಲಕ್ಷ್ಯ ಮಾಡಿ, ವಕೀಲರ ಅಭಿಪ್ರಾಯ ನಿರ್ಲಕ್ಷ್ಯ ಮಾಡಿ ಕಾನೂನು ಮಾಡಿದ್ದಾರೆ. ಹೀಗಾಗಿ ಈ ಮೂರು ಕಾನೂನುಗಳನ್ನು ರಾಜ್ಯ ಸರ್ಕಾರ ವಿರೋಧ ಮಾಡುತ್ತದೆ. ಇದರ ಜೊತೆಗೆ ಈ ಕಾನೂನುಗಳನ್ನು ತಿದ್ದುಪಡಿ ಮಾಡಬೇಕಾಗಿದೆ ಎಂದರು.
ಸಂವಿಧಾನ ಅನುಚ್ಛೇದ 7, 3 ನೇ ಪಟ್ಟಿಯ ಅಧಿಕಾರ ಬಳಸಿ ಕಾನೂನುಗಳನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಪೊಲೀಸ್ ಕಮಿಷನರ್ ಅವರು ಹೊಸ ಕಾನೂನು ಜಾರಿ ಮಾಡುತ್ತೇವೆ ಎಂಬ ಹೇಳಿಕೆ ಕುರಿತ ಪ್ರಶ್ನೆಗೆ, ಕಾಯ್ದೆ ಅನುಷ್ಠಾನಕ್ಕೆ ಬಂದಿರುವುದರಿಂದ ಜಾರಿ ಮಾಡಬೇಕಾಗುತ್ತದೆ. ನಾನು ಕಾನೂನು ಮಂತ್ರಿಯಾಗಿ ತಿದ್ದುಪಡಿ ಮಾಡುವ ಅವಕಾಶವಿದೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಸದ್ಯ ಈಗ ಹೊಸ ಕಾನೂನಿನ ಪ್ರಕಾರ ಎ್ಐಆರ್ ಆಗುತ್ತಿವೆ. ತಿದ್ದುಪಡಿ ಆದ ಬಳಿಕ ಅದರಂತೆ ಪಾಲಿಸಬೇಕಾಗುತ್ತದೆ ಎಂದು ಎಚ್.ಕೆ.ಪಾಟೀಲ ಹೇಳಿದರು.
*ಸರ್ಕಾರದ ಕ್ರಮಗಳನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ಮಾಡುವುದು ಈ ಕಾನೂನಿನ ಅಪರಾಧವಾಗಿದೆ. ಆದರೆ ಆತ್ಮಹತ್ಯೆ ಮಾಡುವುದು ಅಪರಾಧ ಅಲ್ಲ ಈ ಕಾನೂನಿನಲ್ಲಿ. ಇದು ದುರ್ದೈವದ ಸಂಗತಿ. ಇದು ಸ್ವಾತಂತ್ರ್ಯ ಹೋರಾಟಕ್ಕೆ, ಹೋರಾಟಗಾರರನ್ನು ತಿರಸ್ಕಾರ ಮಾಡಲಾಗಿದೆ. ಈ ನಿಟ್ಟಿನಲ್ಲಿ ಉಪವಾಸ ಸತ್ಯಾಗ್ರಹ ಅಪಾರಾಧ ಎಂಬುವುದಕ್ಕೆ ತಿದ್ದುಪಡಿ ಮಾಡುತ್ತೇವೆ.
*ರಾಷ್ಟ್ರಪಿತ, ರಾಷ್ಟ್ರೀಯ ಲಾಂಚನ, ಬಾವುಟಕ್ಕೆ ಅಗೌರವ ತೋರಿಸಿದವದ ವಿರುದ್ಧ ಕ್ರಮಕ್ಕೆ ತಿದ್ದುಪಡಿ ಮಾಡಲು ಸೂಚಿಸಿದ್ದೆವು. ಆದರೆ ಅದಕ್ಕೆ ಕೇಂದ್ರ ಸರ್ಕಾರ ಒಪ್ಪಿಲ್ಲ. ಈ ನಿಟ್ಟಿನಲ್ಲಿ ತಿದ್ದುಪಡಿಗೆ ಸರ್ಕಾರ ಚಿಂತನೆ ನಡೆಸಿದೆ.
*ಸಂಘಟಿತ ಅಪರಾಧ ಎಂದು ಆರೋಪಿಸಿ ವ್ಯಕ್ತಿಗಳ ಮೇಲೆ ಮೊಕದ್ದಮೆ ಹೂಡಲು ತನಿಖಾ ಸಂಸ್ಥೆಗಳಿಗೆ ಏಕಪಕ್ಷೀಯ ಮತ್ತು ವಿವೇಚನಾಧಿಕಾರಗಳು ಹೊಸ ಕಾನೂನಿನಲ್ಲಿ ಅವಕಾಶವಿದೆ. ಇದರ ತಿದ್ದುಪಡಿ ಅವಶ್ಯವಿದೆ.
*ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವ ಅಪರಾಧಗಳಿಗೆ 3 ವರ್ಷ ಜೈಲು ಹಾಗೂ ದಂಡಕ್ಕೆ ಅವಕಾಶ ಇದೆ. ಕಠಿಣ ಕ್ರಮ ಕೈಗೊಳ್ಳಬೇಕೆಂಬ ಉದ್ದೇಶದಿಂದ ಈ ಕನಿಷ್ಟ ದಂಡನೆಗೆ ತಿದ್ದುಪಡಿ ತರಲಾಗುವುದು.
*ಸೈಬರ್ ಅಪರಾಧ, ಹ್ಯಾಕಿಂಗ್, ಆರ್ಥಿಕ ಅಪರಾಧ, ಅಣ್ವಸ್ತ್ರ ಗೌಪ್ಯತೆ ಹಾಗೂ ತಂತ್ರಜ್ಞಾನ ಮೂಲಕ ವಿಧ್ವಂಸಕ ಕೃತ್ಯ ಎಸಗುವ ಅಪರಾಧಗಳಿಗೆ ಪ್ರತ್ಯೇಕ ಅಧ್ಯಾಯದ ಮೂಲಕ ಕ್ರಮಕ್ಕೆ ತಿದ್ದುಪಡಿ ಮಾಡಲಾಗುತ್ತದೆ.
*ಮೃತ ದೇಹದ ಮೇಲೆ ಅತ್ಯಾಚಾರ ಎಸಗುವುದು ಅಕ್ಷ್ಮಮ್ಯ ಅಪರಾಧ ಇದರ ಅಪರಾಧಿಕರಣಗೊಳಿಸುವ ನಿಟ್ಟಿನಲ್ಲಿ ತಿದ್ದುಪಡಿ ಮಾಡುತ್ತೇವೆ.
*ಹೊಸ ಕಾಯ್ದೆ ಅಡಿ ಪೊಲೀಸ್ ಕಸ್ಟಡಿ ಅವಧಿಯಲ್ಲಿ 90 ದಿನಗಳವರೆಗೆ ಅವಕಾಶ ಇದೆ. ಇದು ಧೀರ್ಘಕಾಲದ ಅವದಿಯಾಗುತ್ತದೆ. ಮೊದಲು 15 ದಿನ ಇತ್ತು. ಆದರೆ ಈಗ ಅದನ್ನು ಹೆಚ್ಚು ದಿನಗಳ ವರೆಗೆ ಮಾಡಿದ್ದಾರೆ. ಇದನ್ನು ಕಡತಗೊಳಿಸಲು ತಿದ್ದುಪಡಿ ಮಾಡಬೇಕು.
*ಅಪರಾಧ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಆಸ್ತಿ ಪಾಸ್ತಿ ಜಪ್ತಿ ಮಾಡಲು ಮೊದಲು ಕೋರ್ಟ್ ಅನುಮತಿ ಬೇಕಾಗಿತ್ತು. ಆದರೆ ಹೊಸ ಕಾನೂನಿನಲ್ಲಿ ಪೊಲೀಸರಿಗೆ ಅನುಮತಿ ನೀಡಲಾಗಿದೆ. ಇದನ್ನು ತಿದ್ದುಪಡಿ ಮಾಡಲಾಗುತ್ತದೆ.
ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸುತ್ತೇನೆ. ಸಂಪುಟದ ತೀರ್ಮಾನದ ಬಳಿಕ ವಿಧಾನ ಮಂಡಲದ ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲಾಗುವುದು ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ಕೇಂದ್ರ ಸರ್ಕಾರಕ್ಕೆ ಭಾರತೀಯ ನ್ಯಾಯ ಸಂಹಿತೆಗೆ 9, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಗೆ 9 ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮಕ್ಕೆ 5 ಸೇರಿದಂತೆ 23 ಸಲಹೆಗಳನ್ನು ನೀಡಿದ್ದೆವು. ಈ ಯಾವ ಸಲಹೆಗಳನ್ನೂ ಕೇಂದ್ರ ಸರ್ಕಾರ ಪರಿಗಣಿಸಿಲ್ಲ ಎಂದು ಎಚ್.ಕೆ.ಪಾಟೀಲ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
