ತುಮಕೂರು:ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ನಿರಂತರವಾಗಿ ಆರೋಪಗಳನ್ನು ಮಾಡುತ್ತ ಮುಜುಗರಕ್ಕೆ ಸಿಲುಕಿಸುತ್ತಾ ಬಂದಿರುವ ಬಿಜೆಪಿ-ಜೆಡಿಎಸ್​ ನಾಯಕರಿಗೆ ತಕ್ಕ ಮಟ್ಟಿಗೆ ಟಕ್ಕರ್​ ಕೊಡುತ್ತ ಬಂದಿರುವ ಕೈ ನಾಯಕರು ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಅದು ಎಷ್ಟರ ಮಟ್ಟಿಗೆ ಎಂದರೆ ಉದ್ಘಾಟನೆಗೆ ಸಿದ್ಧವಾಗಿದ್ದ ನೂತನ ಸಂಸದರ ಕಚೇರಿಯನ್ನು ವಾಪಸ್​ ಪಡೆಯುವ ಮೂಲಕ ಶಾಕ್​ ನೀಡಿದೆ.
ತುಮಕೂರು ಕ್ಷೇತ್ರದ ಸಂಸದ, ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ತುಮಕೂರು ರೈಲ್ವೆ ನಿಲ್ದಾಣದ ಬಳಿ ಇರುವ ಹಳೇ ಪರಿವೀಕ್ಷಣಾ ಮಂದಿರದಲ್ಲಿ ಸೋಮಣ್ಣ ಅವರು ಕಚೇರಿ ಉಪಯೋಗಕ್ಕೆ ಪಡೆದುಕೊಂಡಿದ್ದರು. ಅದರ ಉದ್ಘಾಟನೆಯೂ ಆಗಸ್ಟ್​ 18ರಂದು ನೆರವೇರಬೇಕಿತ್ತು. ಹೀಗಿರುವಾಗಲೇ ಅವರಿಗೆ ನೀಡಲಾಗಿದ್ದ ಕಚೇರಿಯನ್ನು ಹಿಂಪಡೆದಿದೆ.
ತುಮಕೂರಿನ ರೈಲ್ವೆ ನಿಲ್ದಾಣ ಬಳಿಯಿರುವ ಹಳೇ ಐಬಿಯನ್ನ ಸೋಮಣ್ಣ ಅವರ ಕಚೇರಿ ಉಪಯೋಗಕ್ಕೆ ನೀಡಲು ಅನುಮೋದನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ನೂತನ ಕಚೇರಿ ಎಂದು ಫರ್ನಿಚರ್ಸ್, ವುಡ್ ವರ್ಕ್ ಹಾಗೂ ಟೇಬಲ್ ಚೇರಗಳನ್ನ ಹಾಕಿಸಿದ್ದರು. ಅಲ್ಲದೇ ನಾಡಿದ್ದು ಅಂದರೆ ಭಾನುವಾರದಂದು (ಆಗಸ್ಟ್​ 18) ಕಚೇರಿ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿತ್ತು. ಆದ್ರೆ, ಕಚೇರಿ ಉದ್ಘಾಟನೆಗೆ ಎರಡು ದಿನ ಬಾಕಿ ಇರುವಾಗಲೇ ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ. ಈ ಮೂಲಕ ಸೋಮಣ್ಣಗೆ ಬಗ್ ಶಾಕ್ ಕೊಟ್ಟಿದೆ.
ಇದನ್ನೂ ಓದಿ:ಹರಿಯಾಣ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್​; ಅಕ್ಟೋಬರ್ 1ಕ್ಕೆ ಮತದಾನ, 4ಕ್ಕೆ ಎಣಿಕೆ
ನಾಲ್ಕು ಕೊಠಡಿಗಳನ್ನ ಸೋಮಣ್ಣರಿಗೆ ನೀಡಲಾಗಿತ್ತು. ಸರ್ಕಾರ ಒಪ್ಪಿಗೆ ನೀಡಿದ ಬಳಿಕ ಪರಿವೀಕ್ಷಣಾ ಮಂದಿರದ ನಾಲ್ಕು ಕೊಠಡಿಗಳನ್ನ ಉನ್ನತೀಕರಣ ಮಾಡಿಸಿದ್ದರು. ಆದ್ರೆ, ಕಚೇರಿ ಉಪಯೋಗಕ್ಕೆ ನೀಡಿದ ಅನುಮೋದನೆ ಈ ಕೂಡಲೇ ಹಿಂಪಡೆಯುವಂತೆ ತುಮಕೂರು ಜಿಲ್ಲಾಧಿಕಾರಿಗೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜಶೇಖರ್ ಸೂಚನೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ತುಮಕೂರು ನಗರ ಕ್ಷೇತ್ರದ ಶಾಸಕ ಜ್ಯೋತಿ ಗಣೇಶ್​, ಇಲ್ಲಿ ಇಷ್ಟು ವರ್ಷ ಏನಾಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಕ್ಷುಲ್ಲಕ ರಾಜಕಾರಣ ಮಾಡಬಾರದು. ಈ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವ ಮಾತೇ ಇಲ್ಲ. ಯಾರು ಏನು ಮಾಡುತ್ತಾರೋ ನೋಡೋಣ. ಈ ಭಾನುವಾರ ಕಚೇರಿ ಉದ್ಘಾಟನೆ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಜಿಲ್ಲೆಯ ಎಲ್ಲಾ ಮುಖಂಡರಿಗೆ ಆಹ್ವಾನ ನೀಡಲಾಗಿತ್ತು. ಈಗ ಏಕಾಏಕಿ ರದ್ದು ಮಾಡಿ ಆದೇಶ ಮಾಡಿದ್ದಾರೆ. ಈ ರೀತಿಯ ನಡೆ ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 − 4 =
Remember me
