ಬೆಂಗಳೂರು:ಇತ್ತೀಚಿನ ವರ್ಷಗಳಲ್ಲಿ ಜನ ಸಿನಿಮಾವನ್ನು ವೀಕ್ಷಿಸಲು ಥಿಯೇಟರ್​ನತ್ತ ಹೆಚ್ಚು ಬಾರದ ಕಾರಣ ಚಿತ್ರಮಂದಿರಗಳು ಮುಚ್ಚಿಹೋಗುತ್ತಿದ್ದು, ಅನೇಕ ಸಿನಿಮಾಗಳು ಬಾಕ್ಸ್​ಆಫೀಸ್​ನಲ್ಲಿ ಮಕಾಡೆ ಮಲಗಿವೆ. ಸ್ಟಾರ್​ನಟರ ಸಿನಿಮಾಗಳು ವರ್ಷಕ್ಕೊಮ್ಮೆ ತೆರೆ ಕಾಣುತ್ತಿರುವ ಈ ಸಮಯದಲ್ಲಿ ಜನರನ್ನು ಥಿಯೇಟರ್​ಗೆ ಕರೆತರುವುದು ದೊಡ್ಡ ಸವಾಲಿನ ಕೆಲಸವಾಗಿದೆ. ಇದರ ನಡುವೆಯೇ ರಾಜ್ಯ ಕಾಂಗ್ರೆಸ್​ ಸರ್ಕಾರ ಸಿನಿಮಾ ಹಾಗೂ ಒಟಿಟಿ ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್ ವಿಧಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ.
ಹಾಲಿ ನಡೆಯುತ್ತಿರುವ ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್​ ಸರ್ಕಾರವು  ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ 2024 ಅನ್ನು ಮಂಡಿಸಿದೆ. ಸರ್ಕಾರವು ಶೇ.1 ಮೀರದಂತೆ ಶೇ.2 ಕ್ಕಿಂತ ಕಡಿಮೆಯಾಗದಂತೆ ಸೆಸ್‌ ವಿಧಿಸಲು ಸರ್ಕಾರ ಮುಂದಾಗಿದೆ. ಇದರಿಂದ ಸಿನಿಮಾ, ಸಾಂಸ್ಕೃತಿಕ ಕಲಾವಿದರಿಗೆ ಅನುಕೂಲವಾಗುವ ರೀತಿ ತೆರಿಗೆ ಸಂಗ್ರಹ ನಡೆಯಲಿದೆ ಎಂದು ಹೇಳಲಾಗಿದೆ.
ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ಉಪತೆರಿಗೆ ಅಥವಾ ಉಪಕರವನ್ನು ಸಿನಿಮಾ ಟಿಕೆಟ್, ವಂತಿಗೆಗಳ ಮೇಲೆ ಹೇರತಕ್ಕದ್ದು ಎಂದು ರಾಜ್ಯ ಸರ್ಕಾರವು ಮಸೂದೆಯಲ್ಲಿ ಉಲ್ಲೇಖಿಸಿದೆ. ಈ ತೆರಿಗೆಯು ಶೇ 2 ರಷ್ಟನ್ನು ದಾಟುವಂತಿಲ್ಲ ಆದರೆ ಶೇಕಡಾ ಒಂದಕ್ಕಿಂತಾ ಕಡಿಮೆಯೂ ಇರುವಂತಿರುವಂತಿಲ್ಲ ಎಂದು ಹೇಳಿದೆ. ಈ ಮಸೂದೆಯು ಅನುಮೋದನೆಯಾದರೆ ಸಿನಿಮಾ ಟಿಕೆಟ್ ಬೆಲೆ ಹಾಗೂ ಒಟಿಟಿ ಸಬ್​ಸ್ಕ್ರಿಪ್ಷನ್ ಬೆಲೆಗಳು ಸಹ ಏರಿಕೆ ಆಗಲಿವೆ. ಈ ಶುಲ್ಕವನ್ನು ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ಬಳಸಿಕೊಳ್ಳಲಾಗುತ್ತದೆ ಎಂದು ಮಸೂದೆಯಲ್ಲಿ ವಿವರಿಸಲಾಗಿದೆ.
ಮುಖ್ಯಮಂತ್ರಿ@siddaramaiahನವರು ತಮ್ಮ ಸಿ.ಎಂ ಸೀಟನ್ನು ಉಳಿಸಿಕೊಳ್ಳಲು ನಾಡಿನ ಸಿನಿ ಪ್ರಿಯರ ಬೆನ್ನಿಗೂ ತೆರಿಗೆ ಬರೆ ಎಳೆಯಲು ಮುಂದಾಗಿದ್ದಾರೆ.ಕನ್ನಡ ಚಿತ್ರರಂಗ ಸಂಕಷ್ಟಗಳಿಂದ ಬಳಲುತ್ತಿದ್ದರೂ, ಅವುಗಳಿಗೆ ಕಿವಿಗೊಡದ ಮುಖ್ಯಮಂತ್ರಿಗಳು, ಸಿನಿಮಾ ಟಿಕೆಟ್, ಒಟಿಟಿಗಳ ಚಂದಾದಾರಿಕೆಯ ಮೇಲೆ ಶೇ.2ರಷ್ಟು ತೆರಿಗೆಯನ್ನು ವಿಧಿಸಿ ಹಣದೋಚಲು…pic.twitter.com/bJJI8HmThq
ಇದನ್ನೂ ಓದಿ:ಗೌತಿ ಬೇಡಿಕೆಗೆ ಕಡೆಗೂ ಮಣಿದ ಬಿಸಿಸಿಐ; ಸಹಾಯಕ ಸಿಬ್ಬಂದಿಯಾಗಿ ಇವರ ಆಯ್ಕೆ ಫಿಕ್ಸ್​
ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್‌ ಮೇಲಿನ ಕರ್ನಾಟಕ ಮಾರಾಟ ತೆರಿಗೆ (ಕೆಎಸ್‌ಟಿ) ಅನ್ನು ಶೇ. 25.92ರಿಂದ ಶೇ. 29.84ಕ್ಕೆ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಶೇ. 14.34ರಿಂದ ಶೇ. 18.44ಕ್ಕೆ ಏರಿಕೆ ಮಾಡಿತ್ತು. ಇದೀಗ ಮನರಂಜನೆ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಸರ್ಕಾರ ಸಿನಿಮಾ ಟಿಕೆಟ್ ಮತ್ತೆ ಒಟಿಟಿ ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್ ವಿಧಿಸಲು ಮುಂದಾಗಿದ್ದು, ಇವು ಕೂಡ ದುಬಾರಿ ಆಗಲಿವೆ. ಇನ್ನೂ ಈ ಕುರಿತು ಟ್ವೀಟ್​ ಮಾಡಿ ರಾಜ್ಯ ಬಿಜೆಪಿ ಕಿಡಿಕಾರಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಿಎಂ ಸೀಟನ್ನು ಉಳಿಸಿಕೊಳ್ಳಲು ನಾಡಿನ ಸಿನಿ ಪ್ರಿಯರ ಬೆನ್ನಿಗೂ ತೆರಿಗೆ ಬರೆ ಎಳೆಯಲು ಮುಂದಾಗಿದ್ದಾರೆ. ಕನ್ನಡ ಚಿತ್ರರಂಗ ಸಂಕಷ್ಟಗಳಿಂದ ಬಳಲುತ್ತಿದ್ದರೂ, ಅವುಗಳಿಗೆ ಕಿವಿಗೊಡದ ಮುಖ್ಯಮಂತ್ರಿಗಳು, ಸಿನಿಮಾ ಟಿಕೆಟ್, ಒಟಿಟಿಗಳ ಚಂದಾದಾರಿಕೆಯ ಮೇಲೆ ಶೇ.2ರಷ್ಟು ತೆರಿಗೆಯನ್ನು ವಿಧಿಸಿ ಹಣದೋಚಲು ವಿಧಾನಸಭೆಯಲ್ಲಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಹೋರಾಟಗಾರರ (ಕ್ಷೇಮಾಭಿವೃದ್ಧಿ) ಮಸೂದೆ-2024 ಅನ್ನು ಅನುಮೋದನೆಗೆ ಇಟ್ಟಿದ್ದಾರೆ. ಈಗಾಗಲೇ ಎಲ್ಲದರ ಮೇಲೂ ತೆರಿಗೆಯನ್ನು ಹೇರಿರುವ ರಣಹೇಡಿ ಕಾಂಗ್ರೆಸ್​ ಸರ್ಕಾರ ಈಗ ಸಿನಿಮಾ ಪ್ರೇಕ್ಷಕರ ಮೇಲೂ ತೆರಿಗೆ ಪ್ರಹಾರ ಮಾಡಲು ‘ಕೈ’ ಎತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಟ್ವೀಟ್​ ಮಾಡಿ ಕಿಡಿಕಾರಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × four =
Remember me
