ಬೆಂಗಳೂರು:ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದೆ. ಸೆಪ್ಟೆಂಬರ್ 21ರಿಂದ 30ರವರೆಗೆ ಬೆಂಗಳೂರಿನಲ್ಲಿಯೇ ಅಧಿವೇಶನ ನಡೆಯಲಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಮಾಧುಸ್ವಾಮಿ, ಸೆ.23ರ ಒಳಗಾಗಿ ಅಧಿವೇಶನ ಕರೆಬೇಕಾದ ಹೊಣೆಗಾರಿಕೆ ಇದೆ. ಹಾಗಾಗಿ ದಿನಾಂಕ ನಿಗದಿಪಡಿಸಲಾಗಿದೆ. ಅಧಿವೇಶನ ಹೇಗೆ ನಡೆಸಬೇಕೆಂಬ ಕುರಿತು ನಾನು, ವಿಧಾನಸಭೆ ಸ್ಪೀಕರ್ ಹಾಗೂ ವಿಧಾನಪರಿಷತ್ ಸಭಾಪತಿ ಸೇರಿ ರ್ಚಚಿಸಿ ತೀರ್ವನಿಸಲು ಸಿಎಂ ಸೂಚಿಸಿದ್ದಾರೆ ಎಂದರು.
ಕರೊನಾ ಸೋಂಕು ಉಲ್ಬಣದ ಕಾರಣ ಬಜೆಟ್ ಅಧಿವೇಶನವನ್ನು ತರಾತುರಿಯಲ್ಲಿ ಮುಂದೂಡಲಾಗಿತ್ತು. ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆ, ಭೂಕಬಳಿಕೆ ನಿಷೇಧ ಕಾಯ್ದೆ, ಗ್ರಾಮ ಪಂಚಾಯಿತಿ ಕಾಯ್ದೆ, ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಿ ಕಾಯ್ದೆ ತಿದ್ದುಪಡಿ, ವಾಣಿಜ್ಯ ಮತ್ತು ಕೈಗಾರಿಕೆ ತಿದ್ದುಪಡಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗಿತ್ತು. ಇವುಗಳಿಗೆ ಸಂಪುಟ ಸಭೆ ಅನುಮೋದನೆ ಪಡೆಯಲಾಗಿದೆ ಎಂದರು.
ಸಹಕಾರ ಸಂಘಗಳ ಚುನಾವಣೆ: ಸಹಕಾರ ಸಂಘಗಳ ಚುನಾವಣೆಯನ್ನು ಡಿಸೆಂಬರ್​ವರೆಗೆ ಮುಂದೂಡ ಲಾಗಿತ್ತು. ಆಡಳಿತಾಧಿಕಾರಿಗಳ ನೇಮಕಕ್ಕೆ ಸಂಪುಟ ಘಟನೋತ್ತರ ಅನುಮೋದನೆ ನೀಡಿದೆ ಎಂದು ತಿಳಿಸಿದರು.
ಮುಖ್ಯಾಂಶಗಳು
ಬೆಳೆ ಸಮೀಕ್ಷೆ ಗಡುವು ವಿಸ್ತರಣೆ
ದೇಶದಲ್ಲಿ ಮೊದಲ ಬಾರಿಗೆ ರೈತರೇ ಜಮೀನಿನಲ್ಲಿ ನಿಂತು ಫೋಟೋ ತೆಗೆಸಿಕೊಂಡು ಬೆಳೆ ಮಾಹಿತಿ ನೀಡುವ ಬೆಳೆ ಸಮೀಕ್ಷೆ ಆಪ್ ಅನ್ನು ಕಂದಾಯ ಇಲಾಖೆ ರೂಪಿಸಿದೆ. ರೈತರು ಈ ಆಪ್​ಗೆ ಮಾಹಿತಿ ಅಪ್​ಲೊಡ್ ಮಾಡಬೇಕಿದೆ. ಈಗಾಗಲೇ 5 ಲಕ್ಷಕ್ಕೂ ಹೆಚ್ಚು ರೈತರು ಆಪ್​ನಲ್ಲಿ ಅಪ್​ಲೋಡ್ ಮಾಡಿದ್ದಾರೆ. ಅಪ್​ಲೋಡ್ ಮಾಡುವ ಪ್ರಕ್ರಿಯೆಗೆ ಆ.24 ಕೊನೆಯ ದಿನವಾಗಿತ್ತು. ಈ ಅವಧಿಯನ್ನು ಒಂದು ತಿಂಗಳು ಅಂದರೆ ಸೆ.24ರ ವರೆಗೆ ಗಡುವು ವಿಸ್ತರಿಸಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 13 =
Remember me
