ಬೆಂಗಳೂರು:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಲ್ಯಾಣಕ್ಕೆ ಇರಿಸಲಾಗಿದ್ದ ಹಣವನ್ನು ಲೂಟಿ ಮಾಡಿರುವ ಈ ಸರ್ಕಾರ ಆ ವರ್ಗದ ಜನರ ಬೆನ್ನಿಗೆ ಚೂರಿ ಹಾಕಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.
ಜೆ.ಪಿ. ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಒಂದೆಡೆ ಎಸ್ಸಿ ಎಸ್ಟಿ ಜನರ ಹಣವನ್ನು ಪಕ್ಷದ ರಾಜ್ಯಗಳಿಗೆ ಸಾಗಿಸಿ ಲಪಟಾಯಿಸಿದ್ದಾರೆ. ಇನ್ನೊಂದು ಕಡೆ 2024-2025ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ ಅಡಿಯಲ್ಲಿ
39,121.46 ಕೋಟಿ ವೆಚ್ಚ ಮಾಡುವ ಕ್ರಿಯಾ ಯೋಜನೆ ಪ್ರಸ್ತಾವನೆಗೆ ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಅನುಮೋದನೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಬೇರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚು ಹಣವನ್ನು ಎಸ್ಸಿ ಎಸ್ಟಿ ಜನರಿಗೆ ಅಲ್ಲಿನ ಸರ್ಕಾರಗಳು ಮೀಸಲಿಟ್ಟಿವೆ ಎಂದು ಹೇಳಿದರು.
ಒಂದು ಕಡೆ ಎಲ್ಲ ಕಡೆ ಬೆಲೆ ಏರಿಕೆ ಮಾಡುತ್ತಾರೆ, ಇನ್ನೊಂದು ಕಡೆ ಹಣ ಕೊಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಇದು ಯಾವ ಸೀಮೆ ನ್ಯಾಯ ಎಂದು ಪ್ರಶ್ನೆ ಮಾಡಿದರು.
ಗ್ಯಾರಂಟಿಗಳಿಗೆ ಹಣ ಬೇಕು ಎಂದು ಈ ಸರ್ಕಾರ ಅನೇಕ ಜನ ವಿರೋಧಿ ಕೆಲಸಗಳನ್ನು ಮಾಡುತ್ತಿದೆ. ಹಾಲಿನ ದರ ಏರಿಕೆ ಮಾಡಿದ್ದಾರೆ. ಆದರೆ ಆ ಬಗ್ಗೆ ಜನರಿಗೆ ಸ್ಪಷ್ಟತೆ ಇಲ್ಲ. ಹಾಲಿನ ಪ್ರಮಾಣ ಹೆಚ್ಚಿಸಿ ದರ ಏರಿಕೆ ಮಾಡಿ ಎಂದು ಜನರು ಇವರನ್ನು ಕೇಳಿದ್ದರೇ? ಈಗಾಗಲೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಆಗಿದೆ. ಈಗ ಹಾಲಿನ ದರ ಕೂಡ ಏರಿಕೆ ಮಾಡಿದ್ದಾರೆ. ಹನಿ ನೀರಾವರಿ ಪದ್ದತಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸಬ್ಸಿಡಿ ಇತ್ತು. 48 ಪರ್ಸೆಂಟ್ ಇದ್ದ ಸಬ್ಸಿಡಿಯನ್ನು 18 ಪರ್ಸೆಂಟ್ ಗೆ ಇಳಿಸಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
ಜಮೀನಿನಲ್ಲಿ ಹೊಸ ವಿದ್ಯುತ್ ಸಂಪರ್ಕಕ್ಕೆ ಟಿಸಿ ತೆಗೆದುಕೊಳ್ಳಲು ರೈತರು 2.5 ಲಕ್ಷ ರೂ. ಕೊಡಬೇಕು. ನಿರಂತರವಾಗಿ ಜನರ ಮೇಲೆ ಗ್ಯಾರಂಟಿಗಳ ಹೆಸರಿನಲ್ಲಿ ತೆರಿಗೆಭಾರ ಹೊರೆಸುತ್ತಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
