ಬೆಂಗಳೂರು:ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಿರುವ ಕಾರಣ 15 ಎಸ್​ಡಿಆರ್​ಎಫ್ ತಂಡಗಳ ರಚನೆ, ಅಗತ್ಯ ಪರಿಕರಗಳನ್ನು ಒದಗಿಸುವುದು ಸೇರಿ ಪ್ರವಾಹ ಪರಿಸ್ಥಿತಿ ಎದುರಿಸಲು ಸರ್ಕಾರ ಸಜ್ಜಾಗಿದ್ದು, ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಕಂದಾಯ ಸಚಿವ ಆರ್. ಅಶೋಕ್ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಅತಿವೃಷ್ಠಿ ಬಾಧಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು.
ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯವಿರುವ ಎಸ್​ಡಿಆರ್​ಎಫ್ ತಂಡಗಳನ್ನು ಸಜ್ಜುಗೊಳಿಸುವುದು, ಈ ತಂಡಗಳಿಗೆ 100 ಜನ ನಿವೃತ್ತ ಯೋಧರನ್ನು ನೇಮಕ ಮಾಡಿಕೊಳ್ಳುವುದು, ಯಾವುದೇ ಅಧಿಕಾರಿಗಳಿಗೆ ರಜೆ ನೀಡದಿರುವಂತೆ ಡಿಸಿಗಳಿಗೆ ಸೂಚನೆ ನೀಡಿದರು. ಪ್ರವಾಹ ಪೀಡಿತ ಸ್ಥಳಗಳಿಂದ ಕೂಡಲೇ ಜನರನ್ನು ಸ್ಥಳಾಂತರ ಮಾಡಬೇಕು, ಅವರಿಗೆ ಸೂಕ್ತ ಪರಿಹಾರ ಕೇಂದ್ರಗಳನ್ನು ತೆರೆದು ಊಟ, ಉಪಚಾರ, ಔಷಧ ಒದಗಿಸಬೇಕು. ಹಾನಿಯ ಬಗ್ಗೆ ತಕ್ಷಣದ ಮೌಲ್ಯಮಾಪನ ನಡೆಯಬೇಕು. ಯಾರೊಬ್ಬರಿಗೂ ತೊಂದರೆಯಾಗದಂತೆ ಎಚ್ಚರಿಕೆ ತೆಗೆದುಕೊಳ್ಳಬೇಕೆಂದು ಆದೇಶಿಸಿದರು.
ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವ ಅಶೋಕ್, ಕೊಡಗು ಜಿಲ್ಲೆಯಲ್ಲಿ ದೊಡ್ಡ ಅನಾಹುತವಾದ ವರದಿಯಾಗಿದೆ. ನಾನು 8 ಜಿಲ್ಲೆಯ ಜಿಲ್ಲಾಧಿಕಾರಿಗಳ ಜತೆಗೆ ಮಾತುಕತೆ ನಡೆಸಿದ್ದೇನೆ. ಗುರುವಾರ ತುರ್ತಾಗಿ ನಾನು, ಬಸವರಾಜ ಬೊಮ್ಮಾಯಿ, ಸಿ.ಟಿ. ರವಿ ಹಾಗೂ ವಿ.ಸೋಮಣ್ಣ ಒಟ್ಟಿಗೆ ಸೇರಿ ಸಭೆ ನಡೆಸಿದ್ದೇವೆ. ಎಲ್ಲ ಸಚಿವರು ಅವರವರ ಜಿಲ್ಲೆಗೆ ತೆರಳಲು ಮನವಿ ಮಾಡಿರುವುದಾಗಿ ತಿಳಿಸಿದರು. ಬೆಂಗಳೂರಿನಲ್ಲೂ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದು ಅಶೋಕ್ ಮಾಹಿತಿ ನೀಡಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, 15 ಎಸ್.ಡಿ.ಆರ್.ಎಫ್ ತಂಡಗಳನ್ನು ಜಿಲ್ಲಾವಾರು ರಚನೆ ಮಾಡಿದ್ದೇವೆ. ನೆರೆ ಪೀಡಿತ ಜಿಲ್ಲೆಗಳಿಗೆ ತಂಡ ತೆರಳಲಿವೆ. ಬೆಳಗಾವಿ, ಕಲಬುರಗಿ, ಬೆಂಗಳೂರು ಹಾಗೂ ಮಂಗಳೂರು ವಲಯಗಳಲ್ಲಿ ಕೆಲಸ ಆರಂಭ ಆಗಲಿದೆ. ಬುಧವಾರವೇ ಕೆಲವು ತಂಡಗಳು ನಿಗದಿತ ಸ್ಥಳಕ್ಕೆ ತೆರಳಿವೆ ಎಂದು ತಿಳಿಸಿದರು.
ಹೆಚ್ಚುವರಿ ಬೋಟ್ ಹಾಗೂ 1,500 ಅಗ್ನಿಶಾಮಕ ಸಿಬ್ಬಂದಿ ನೇಮಕಾತಿಗೆ ನಿರ್ಧಾರ ಮಾಡಲಾಗಿದೆ. ಸರ್ಕಾರ ನೆರೆ ನಿರ್ವಹಣೆಗೆ ಎಲ್ಲ ರೀತಿ ಸನ್ನದ್ಧವಾಗಿದ್ದು, ಪ್ರಾಣಹಾನಿಯಾಗದಂತೆ ತಡೆಯುತ್ತೇವೆ ಎಂದು ಹೇಳಿದರು.
ಕಳೆದ ವರ್ಷ ಭೂ ಕುಸಿತ ಆಗಿತ್ತು. ಆದೇ ಜಾಗದಲ್ಲಿ ಮತ್ತೆ ಈಗಲೂ ಭೂ ಕುಸಿತವಾಗಿದೆ. ಗುಡ್ಡ ಕುಸಿದು ರಸ್ತೆ ಜಖಂ ಆಗಿತ್ತು,ತೆರವು ಮಾಡಲಾಗಿದೆ. ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ಕೊಟ್ಟಿದ್ದೇನೆ.
| ಸಿ.ಟಿ.ರವಿ ಚಿಕ್ಕಮಗಳೂರು ಉಸ್ತುವಾರಿ ಸಚಿವ
ಬ್ರಹ್ಮಗಿರಿ ಬೆಟ್ಟ ಕುಸಿದಿದೆ. ಡಿಸಿಯಿಂದ ಕ್ಷಣಕ್ಷಣಕ್ಕೂ ಮಾಹಿತಿ ಪಡೆಯುತ್ತಿದ್ದೇನೆ. ಹಿಂದಿನ ಕಹಿ ಘಟನೆ ನಡೆಯದಂತೆ ಜಿಲ್ಲಾಡಳಿತ ಕ್ರಮ ತೆಗೆದುಕೊಂಡಿದೆ.
| ವಿ.ಸೋಮಣ್ಣ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − five =
Remember me
